“ಚುನಾವಣಾ ನಂತರ ನೀರಿನ ಸಮಸ್ಯೆ ಇತ್ಯರ್ಥ’
ತುಮಕೂರಿನಲ್ಲಿ ಬಿರುಸಿನ ಪ್ರಚಾರ ಆರಂಭಿಸಿದ ಮಾಜಿ ಪ್ರಧಾನಿ
Team Udayavani, Apr 2, 2019, 6:18 AM IST
ಹೋಮ, ಹವನ, ಪೂಜೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇತರರು ಪಾಲ್ಗೊಂಡಿದ್ದರು.
ಬರಗೂರು/ಶಿರಾ: ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡರು ಬಿರುಸಿನ ಪ್ರಚಾರ ಆರಂಭಿಸಿದ್ದು, ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹೆ¾àಶ್ವರ ಸ್ವಾಮಿ ಮಹಾಸಂಸ್ಥಾನ ಮಠದಲ್ಲಿ ಸೋಮವಾರ ಲೋಕ ಕಲ್ಯಾಣಾರ್ಥವಾಗಿ ನಂಜಾವಧೂತ ಸ್ವಾಮೀಜಿ ನೇತೃತ್ವದಲ್ಲಿ ಏರ್ಪಡಿಸಿದ್ದ ಲಲಿತ ಸಹಸ್ರನಾಮ ಹೋಮ, ಹವನ, ಪೂಜೆಯಲ್ಲಿ ಕುಮಾರ್ವಸಾಮಿ ಪಾಲ್ಗೊಂಡಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಾಡಿನ ಜನತೆ ಸುಖ ಸಮೃದ್ಧಿಗಾಗಿ ಹಿರಿಯರಾದ ಎಚ್.ಡಿ.ದೇವೇಗೌಡ ಹಾಗೂ ನನ್ನ ಆರೋಗ್ಯದ ವೃದ್ಧಿಗಾಗಿ ಈ ಪೂಜೆಯನ್ನು ಮಠದಲ್ಲಿ ಹಮ್ಮಿಕೊಂಡಿದೆ ಎಂದರು. ರಾಜ್ಯದ ಜನತೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಪರವಾಗಿದ್ದು, ನಮ್ಮ ಸರ್ಕಾರದ ಸಾಲ ಮನ್ನಾ ಯೋಜನೆ ಸೇರಿ ರೈತರ ಪರವಾದ ಹಲವಾರು ಯೋಜನೆ ಗಮನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಹೇಳಿದರು.
ನೀರಿನ ಸಮಸ್ಯೆ ಇತ್ಯರ್ಥ: ಶಿರಾ ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಿಎಂ ಕುಮಾರಸ್ವಾಮಿ ಅವರನ್ನು ಬುಕ್ಕಾಪಟ್ಟಣದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಾರ್ವಜನಿಕರು ಗ್ರಾಮದ ಹಾಗೂ ಸುತ್ತಮುತ್ತಲ ಹಳ್ಳಿಗಳಲ್ಲಿನ ನೀರಿನ ಅಭಾವದ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು, ಚುನಾವಣಾ ನಂತರ ಈ ಭಾಗದ ಜನರಿಗೆ ಶಾಶ್ವತವಾಗಿ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.