ಕುಟುಂಬ ರಾಜಕಾರಣ ಎಲ್ಲಿಲ್ಲ ಹೇಳಿ? 


Team Udayavani, Mar 6, 2019, 1:59 AM IST

15.jpg

ಮಂಡ್ಯ: ಕುಟುಂಬ ರಾಜಕಾರಣ ಎಲ್ಲಿಲ್ಲ ಹೇಳಿ ಎಂದು ಪ್ರಶ್ನಿಸಿರುವ ಶಾಸಕಿ ಅನಿತಾ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್‌.ಯಡಿಯೂರಪ್ಪನವರ ಮಕ್ಕಳು ರಾಜಕೀಯದಲ್ಲಿ ಇಲ್ವಾ?.ದೇವೇಗೌಡರ ಕುಟುಂಬಕ್ಕೆ ಮಾತ್ರ ಕಳಂಕ ಹಚ್ಚುವುದೇಕೆ ಎಂದು ಕಿಡಿ ಕಾರಿದ್ದಾರೆ.

ಮದ್ದೂರಿನ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದೇವೇಗೌಡರ ಕುಟುಂಬ ಎಂದೂ ಹಿಂಬಾಗಿಲ ರಾಜಕಾರಣ ಮಾಡಿಲ್ಲ. ಜನರ ಬಳಿ ನೇರ ವಾಗಿ ಹೋಗಿ ಚುನಾವಣೆ ಮಾಡಿದ್ದೇವೆ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಖಡಕ್ಕಾಗಿ ಹೇಳಿದರು.

ನಿಖೀಲ್‌ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನಿಖೀಲ್‌ ಮಂಡ್ಯದಿಂದ ಸ್ಪರ್ಧಿಸಲಿ. ನಾವೆಲ್ಲರೂ ಸಹಕಾರ ನೀಡುತ್ತೇವೆ ಎಂದು ಹೇಳಿದ್ದು, ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದಟಛಿರಾಗಿರುತ್ತೇವೆ. ಕಳೆದ ವಿಧಾನಸಭಾ ಚುನಾವಣೆಯಿಂದಲೇ ಜಿಲ್ಲೆಯಲ್ಲಿ ನಿಖೀಲ್‌ ಸಕ್ರಿಯನಾಗಿದ್ದ. ಮಂಡ್ಯದಲ್ಲಿ ತೋಟ, ಮನೆ ಮಾಡಬೇಕು ಎಂಬ ಆಸೆ ಆಗಲೇ ಅವನಿಗಿತ್ತು. ಹಲವು ಬಾರಿ ನಮ್ಮ ಬಳಿ ತನ್ನ ಬಯಕೆಯನ್ನು ವ್ಯಕ್ತಪಡಿಸಿದ್ದ. ಇದರಿಂದ ಸ್ಥಳೀಯ ಜನರ ನೋವು-ನಲಿವು, ಸಂಕಷ್ಟಗಳಿಗೆ ಸ್ಪಂದಿಸಲು ಸಾಧ್ಯವಾಗಲಿದೆ ಎಂಬ ಮನೋಭಾವ ಅವನಲ್ಲಿದೆ. ಅದೇನೂ ಹೊಸತಲ್ಲ. ನಿಖೀಲ್‌ ಸ್ಪರ್ಧೆ ಮಾಡಬೇಕು ಎನ್ನುವುದು ನಮ್ಮ ಆಸೆಯಲ್ಲ. ಜಿಲ್ಲೆಯವರು ಇಷ್ಟಪಟ್ಟಿದ್ದರಿಂದಲೇ ಅವನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ವಿಕೃತ ಮನಸ್ಸಿನವರ ಹೇಳಿಕೆಗಳಿಗೆ ನಾವೇನೂ ಮಾಡಲಾಗುವುದಿಲ್ಲ ಎಂದು ಆರೋಪ ಮಾಡಿದರು.

ನಿಖೀಲ್‌ ಸ್ಪರ್ಧೆಗೆ ವಿರೋಧ ಇರುವುದು ಗೊತ್ತಿಲ್ಲ: ಸಿಎಂ
ಕೋಲಾರ: ಮಂಡ್ಯದಲ್ಲಿ ನಿಖೀಲ್‌ ಸ್ಪರ್ಧೆಗೆ ವಿರೋಧ ಇರುವುದು ತಮಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾತನಾಡಿ, “ಮಂಡ್ಯ ಲೋಕಸಭೆ ಕ್ಷೇತ್ರದಿಂದ ನಿಖೀಲ್‌ಗೌಡ ಸ್ಪರ್ಧಿಸುವ ವಿಚಾರ ಇನ್ನೂ ಅಂತಿಮಗೊಂಡಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಸ್ಪರ್ಧಿಸಬೇಕೆಂಬ ಆಸೆ ಇರುತ್ತದೆ. ಮಂಡ್ಯದಲ್ಲಿ ನಿಖೀಲ್‌ ಸ್ಪರ್ಧೆಗೆ ಯಾರು ವಿರೋಧ ಮಾಡುತ್ತಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಮಾಧ್ಯಮದವರು ಸುಮ್ಮನೇ ಪ್ರಚಾರ ನೀಡುತ್ತಿದ್ದಾರೆ. ನಿಖೀಲ್‌ ಸ್ಪರ್ಧೆಗೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕಾಗಿಲ್ಲ. ಈ ಬಗ್ಗೆ ಇದುವರೆಗೂ ಯಾವುದೇ ಫೈನಲ್‌ ಆಗಿಲ್ಲ. ನಿಖೀಲ್‌ ಸ್ಪರ್ಧೆಗೆ ಮಂಡ್ಯದಲ್ಲಿ ಮತ್ತು ಪ್ರಜ್ವಲ್‌ ಸ್ವರ್ಧೆಗೆ ಹಾಸನದಲ್ಲಿ ವಿರೋಧ ವ್ಯಕ್ತವಾಗುತ್ತಿದೆ ಎಂಬುದು ನನ್ನ ಗಮನಕ್ಕೆ ಈವರೆಗೂ ಬಂದಿಲ್ಲ. ಇನ್ನು, ಚುನಾವಣೆಯಲ್ಲಿ ಪರ-ವಿರೋಧ ಎರಡೂ ಇರುತ್ತದೆ. ಅಂತಿಮವಾಗಿ ಆ ಕ್ಷೇತ್ರದ ಮತದಾರರು ಈ ಬಗ್ಗೆ ನಿರ್ಧರಿಸುತ್ತಾರೆ. ಯಾರದೋ ಮಾತಿಗೆ ನಾನು ತಲೆ ಕೆಡಿಸಿಕೊಂಡಿಲ್ಲ’ ಎಂದರು.

ಕುಟುಂಬ ರಾಜಕಾರಣಕ್ಕೆ ಬಿಜೆಪಿ ಹೆಡ್‌ ಆಫೀಸ್‌: ಕೋನರಡ್ಡಿ

ಧಾರವಾಡ: ಕುಟುಂಬ ರಾಜಕೀಯಕ್ಕೆ ಬಿಜೆಪಿ ಹೆಡ್‌ ಆಫೀಸ್‌ ಆಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎನ್‌.ಎಚ್‌. ಕೋನರಡ್ಡಿ ಟೀಕಾಪ್ರಹಾರ ನಡೆಸಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅವರು ತಮ್ಮ ಸಹೋದರ ಪ್ರದೀಪ ಶೆಟ್ಟರ್‌ ಅವರನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ. ಯಡಿಯೂರಪ್ಪ ಅವರ ಮಗ ರಾಘವೇಂದ್ರ, ಉಮೇಶ ಕತ್ತಿ ತಮ್ಮ ರಮೇಶ ಕತ್ತಿ ರಾಜಕೀಯದಲ್ಲಿದ್ದಾರೆ. ಸಿಎಂ ಉದಾಸಿ ಅವರ ಮಗ ಎಂಪಿ ಇದ್ದಾರೆ. ಹಾಗೆಯೇ ಗಾಂಧಿ ಫ್ಯಾಮಿಲಿ, ದೇವೇಗೌಡ ಫ್ಯಾಮಿಲಿ ಹಿತ್ತಲು ಬಾಗಿಲಿನಿಂದ ನಾಮಿನೇಟ್‌ ಆಗಿ ಬಂದಿಲ್ಲ ಎಂದರು.

ಟಾಪ್ ನ್ಯೂಸ್

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.