![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 25, 2019, 12:15 PM IST
ಬೆಂಗಳೂರು: ರಾಜ್ಯದಲ್ಲಿ ಮೊದಲ ಸುತ್ತಿನಲ್ಲಿ ಮತದಾನ ನಡೆಯಲಿರುವ ಬೆಂಗಳೂರು ದಕ್ಷಿಣ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಗಳನ್ನು ಬಿಜೆಪಿ ಈವರೆಗೆ ಪ್ರಕಟಿಸದಿರುವುದರಿಂದ ಅಭ್ಯರ್ಥಿ ಯಾರೆಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದೇ ತೇಜಸ್ವಿನಿ ಅನಂತ ಕುಮಾರ್ ಬಿಂಬಿತವಾಗಿದ್ದರು. ಆದರೆ ಮೊದಲ ಎರಡು ಅಭ್ಯರ್ಥಿಗಳ ಪಟ್ಟಿಯಲ್ಲಿ ಆ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರೇ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಇನ್ನೊಂದೆಡೆ ಕೆಲ ಬೆಳವಣಿಗೆಗಳು ಅಭ್ಯರ್ಥಿ ಘೋಷಣೆ ಪ್ರಕ್ರಿಯೆ ವಿಳಂಬಕ್ಕೆ ಕಾರಣವಾಗಿದೆ ಎಂಬ ಮಾತುಗಳು ಇವೆ. ಬಿಜೆಪಿಯಿಂದ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹೆಸರು ಅಖೈರುಗೊಳಿಸುವ ಮುನ್ನವೇ ಪ್ರಚಾರ ಕಾರ್ಯ ಶುರುವಾಗಿತ್ತು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಸೇರಿದಂತೆ ಇತರೆ ಪ್ರಮುಖರು ಸಭೆ ನಡೆಸಿ ತೇಜಸ್ವಿನಿ ಅನಂತ ಕುಮಾರ್ ಅವರನ್ನೇ ಸಂಭಾವ್ಯ ಅಭ್ಯರ್ಥಿಯಾಗಿ ವರಿಷ್ಠರಿಗೆ ಶಿಫಾರಸು ಮಾಡಲು ನಿರ್ಧರಿಸಿರುವುದಾಗಿ ಪ್ರಕಟಿಸಿದರು. ಆದರೆ ಈ ಬಗ್ಗೆ ರಾಜ್ಯದ ಯಾವುದೇ ನಾಯಕರು ಅಧಿಕೃತವಾಗಿ ಹೇಳಿರಲಿಲ್ಲ.
ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿ ವಿಜಯನಗರದಲ್ಲಿ ಬಿಜೆಪಿ ಚುನಾವಣಾ ಕಚೇರಿ ಆರಂಭವಾಗಿತ್ತು. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಕೆಲ ಹೊತ್ತಿಗೂ ಮೊದಲು ಕ್ಷೇತ್ರದ ಬಿಜೆಪಿ ಚುನಾವಣಾ ಕಚೇರಿಯ ಉದ್ಘಾಟನಾ ಸಮಾರಂಭ ನಡೆದಿತ್ತು.
ಅಧಿಕೃತವಾಗಿ ಅಭ್ಯರ್ಥಿ ಹೆಸರು ಘೋಷಣೆ ಮೊದಲೇ ಕಚೇರಿ ಆರಂಭಿಸಿದ್ದು, ಪ್ರಚಾರ ನಡೆಸಿದ್ದು ಕೆಲವರ ಅಸಮಾಧಾನಕ್ಕೆ ಕಾರಣವಾಗಿರಬಹುದು ಎಂಬ ಮಾತುಗಳೂ ಇವೆ. ಆ ಹಿನ್ನೆಲೆಯಲ್ಲಿ ಮೊದಲೆರಡು ಪಟ್ಟಿಯಲ್ಲಿ ಹೆಸರು ಘೋಷಣೆಯಾಗದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯುವರೇ ಎಂಬ ಬಗ್ಗೆ ಪಕ್ಷದ ನಾಯಕರಲ್ಲೇ ಚರ್ಚೆ ನಡೆದಿದೆ. ಯಾರೂ ನಿರೀಕ್ಷಿಸದ ಹೊಸಮುಖ ಪರಿಚಯಿಸುವ ಸಂಭವವನ್ನೂ ತಳ್ಳಿ ಹಾಕುವಂತಿಲ್ಲ ಎಂಬ ಮಾತುಗಳಿವೆ.
ಪ್ರಚಾರ ಮುಂದುವರಿಕೆ: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುರಿತು ನಾನಾ ಸುದ್ದಿ, ವದಂತಿಗಳು ಕೇಳಿಬರುತ್ತಿದ್ದರೂ ತೇಜಸ್ವಿನಿ ಅನಂತ ಕುಮಾರ್ ಅವರು ಪ್ರಮುಖರ ಭೇಟಿ, ಸಭೆ ಕಾರ್ಯಕ್ರಮಗಳನ್ನು ಮುಂದುವರಿಸಿದ್ದಾರೆ.
ಒಂದೊಮ್ಮೆ ಪ್ರಧಾನಿಯವರು ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ಪ್ರಚಾರ ನಡೆಸಬೇಕಾಗುತ್ತದೆ. ಹಾಗಾಗಿ ಜನ ಸಂಪರ್ಕ, ಪ್ರಚಾರ ಸಭೆಗಳನ್ನು ಸ್ಥಗಿತಗೊಳಿಸದೆ ಮುಂದುವರಿಸಿರುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ನಾಯಕರ ಸಭೆಯಲ್ಲೂ ಚರ್ಚೆ: ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಚುನಾವಣಾ ಪ್ರಭಾರಿ ಮುರಳೀಧರರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಬೆಂಗಳೂರು ದಕ್ಷಿಣ ಕ್ಷೇತ್ರ ಕುರಿತು ಚರ್ಚೆ ನಡೆಯಿತು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಲೋಕಸಭಾ ಕ್ಷೇತ್ರ ಚುನಾವಣಾ ಸಂಚಾಲಕ ಸುಬ್ಬನರಸಿಂಹ ಅವರು ಸಭೆಯಲ್ಲಿದ್ದ ಕಾರಣ ವಿಚಾರ ಪ್ರಸ್ತಾಪವಾಯಿತು.
ರಾಜ್ಯದಿಂದ ಒಬ್ಬರೇ ಸಂಭಾವ್ಯ ಅಭ್ಯರ್ಥಿ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗಿತ್ತು. ತೇಜಸ್ವಿನಿ ಅನಂತ ಕುಮಾರ್ ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಸದ್ಯ ನಡೆಯುತ್ತಿರುವ ಪ್ರಚಾರ ಕಾರ್ಯ ಮುಂದುವರಿಯಲಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.