ಮೂರು ಪಕ್ಷಗಳ ನಡುವೆ ಹಣಾಹಣಿ
Team Udayavani, Mar 18, 2019, 6:35 AM IST
ಕ್ಷೇತ್ರದ ವಸ್ತುಸ್ಥಿತಿ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿ ಒಂದಾದ ಪೀಣ್ಯವನ್ನು ಒಳಗೊಂಡ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿ ಶೇ 90ರಷ್ಟು ಮಂದಿ ವಲಸಿಗರು ನೆಲೆಸಿದ್ದಾರೆ. ಕ್ಷೇತ್ರ ಪುನರ್ ವಿಂಗಡಣೆ ಬಳಿಕ ನಡೆದ 2 ವಿಧಾನಸಭಾ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿಯನ್ನು ಮತದಾರರು ಬೆಂಬಲಿಸಿದ್ದರು.
ಆದರೆ, 2018ರ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕೈ ಹಿಡಿದು ಅಚ್ಚರಿ ಫಲಿತಾಂಶಕ್ಕೆ ಕಾರಣರಾಗಿದ್ದರು. ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದಾಗ ಈ ಪರಿಸ್ಥಿತಿಯಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಯತ್ತ ಒಲವು ತೋರಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಶೇ.59.7ರಷ್ಟು ಮತದಾತರು ಬಿಜೆಪಿ ಬೆಂಬಲಿಸಿದ್ದರು.
ಒಟ್ಟಾರೆ 1,99,476 ಮತಗಳು ಇಲ್ಲಿ ಚಲಾವಣೆಯಾಗಿದು,ªಆ ಪೈಕಿ 1,19,021 ಮತಗಳು ಕಮಲ ಪಕ್ಷದ ಅಭ್ಯರ್ಥಿಯಾಗಿದ್ದ ಕೇಂದ್ರ ಸಚಿವ ಸದಾನಂದಗೌಡ ಅವರ ಪಾಲಾಗಿದ್ದವು. ಇವರ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಸಿ.ನಾರಾಯಣಸ್ವಾಮಿ 54,782 ಮತ್ತು ಜೆಡಿಎಸ್ ನಿಂದ ಅಖಾಡಕ್ಕಿಳಿದಿದ್ದ ಅಬ್ದುಲ್ ಅಜೀಂ 20,727 ಮತಗಳನ್ನು ಪಡೆದಿದ್ದರು.
ಈ ಬಾರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಣಕ್ಕಿಳಿಯುವ ಸಾಧ್ಯತೆ ಇರುವುದರಿಂದ ಭಾರೀ ಪೈಪೋಟಿ ನಿರೀಕ್ಷಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮೇಲೆ ಜೆಡಿಎಸ್ ಹಿಡಿತ ಸಾಧಿಸಿದ್ದು,ಆದರೆ ಪಾಲಿಕೆ ವಿಚಾರದಲ್ಲಿ ಬಿಜೆಪಿ ಪ್ರಾಬಲ್ಯ ತೋರಿದೆ. ಎಂಟು ವಾರ್ಡ್ ಗಳ ಪೈಕಿ 5 ವಾರ್ಡ್‌ಗಳಲ್ಲಿ ಬಿಜೆಪಿ ವಿಜಯಿಯಾಗಿದೆ. ಹಾಗೆಯೇ ಕಾಂಗ್ರೆಸ್ 2 ಮತ್ತು ಜೆಡಿಎಸ್ 1ರಲ್ಲಿ ಗೆಲುವು ಸಾಧಿಸಿದೆ.
ಪ್ರಮುಖ ಕೊಡುಗೆಗಳು
-ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರಂಗೆ ಹೊರ ಪ್ರದೇಶಗಳ ಸಂಪರ್ಕ ಕಲ್ಪಿಸಲು ಫುಟ್ ಓವರ್‌ಬ್ರಿಜ್ ನಿರ್ಮಾಣ
-ಸ್ತ್ರೀ ಶಕ್ತಿ ಭವನ ನಿರ್ಮಾಣ
ನಿರೀಕ್ಷೆ
-ಪೀಣ್ಯಾ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಆರ್ಥಿಕ ಅನುದಾನ
-ರಸ್ತೆಗಳ ಅಭಿವೃದ್ಧಿಗೆ ಹಣ ಬಿಡುಗಡೆ
-ವಾರ್ಡ್‌ಗಳು -8
-5 ಬಿಜೆಪಿ
-2 ಕಾಂಗ್ರೆಸ್
-1 ಜೆಡಿಎಸ್
-6,38,190 ಜನಸಂಖ್ಯೆ
-4,38,919 ಮತದಾರರ ಸಂಖ್ಯೆ
-2,36,956 ಪುರುಷರು
-2,29,820 ಮಹಿಳೆಯರು
2014ರ ಲೋಕಸಭಾ ಚುನಾವಣೆಯಲ್ಲಿ
-1,99,476 (52.26%) ಈ ಕ್ಷೇತ್ರದಲ್ಲಿ ಚಲಾವಣೆಯಾದ ಮತಗಳು
-1,19,021 ಮತಗಳು(59.7%) ಬಿಜೆಪಿ ಪಡೆದ ಮತಗಳು
-54,782 ಮತಗಳು (27.5%) ಕಾಂಗ್ರೆಸ್ ಪಡೆದ ಮತಗಳು
-20,727 ಮತಗಳು (10.4%) ಜೆಡಿಎಸ್ ಪಡೆದ ಮತಗಳು
2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಎಸ್. ಮುನಿರಾಜು, ಬಿಜೆಪಿ ಶಾಸಕ
ಪಾಲಿಕೆಯಲ್ಲಿ
-ಬಿಜೆಪಿ -5
-ಜೆಡಿಎಸ್-0
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.