ಡಿಕೆಶಿ ರಾಜೀನಾಮೆಗೆ ಬಿಜೆಪಿ ಆಗ್ರಹ
Team Udayavani, Mar 25, 2019, 6:53 AM IST
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ 75 ಕೋ. ರೂ. ಮೌಲ್ಯದ ಆಸ್ತಿಯನ್ನು ತೆರಿಗೆ ಇಲಾಖೆ ಜಪ್ತಿ ಮಾಡಿರುವುದು ಈಗ ಬಯಲಾಗಿದೆ. ಇಷ್ಟಾದರೂ ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಇದು ಸಂವಿಧಾನಕ್ಕೆ ಮಾಡುವ ದ್ರೋಹ. ನೈತಿಕ ಹೊಣೆಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತೆರಿಗೆ ವಂಚನೆ ಸಂಬಂಧ ಹಲವು ಪ್ರಕರಣ ದಾಖಲಾಗಿವೆೆ. ತೆರಿಗೆ ಅಧಿಕಾರಿಗಳು ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂ. ವಶಪಡಿಸಿಕೊಂಡಿದ್ದಾರೆ. ಡಿ. ಕೆ. ಶಿವಕುಮಾರ್ ಮತ್ತು ರಾಜ್ಯದ ಮೈತ್ರಿ ಸರಕಾರದ ಸಚಿವರ ವಿರುದ್ಧ ಬಂದಿರುವ ಆರೋಪದ ಕುರಿತು ರಾಹುಲ್ ಗಾಂಧಿ ಕಠಿನ ಕ್ರಮ ತೆಗೆದುಕೊಳ್ಳಲಿ ಎಂದು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಸುರೇಶ್ ಕುಮಾರ್ ಆಗ್ರಹಿಸಿದರು.
ಮೈತ್ರಿ ಸರಕಾರದ ಹೊಡಿಬಡಿ ರಾಜಕೀಯ
ಸಮ್ಮಿಶ್ರ ಸರಕಾರದಲ್ಲಿ ಹೊಡಿಬಡಿ ರಾಜಕೀಯ ಹೆಚ್ಚಾಗುತ್ತಿದೆ. ವಿಪಕ್ಷಗಳನ್ನು ಗುರಿಯಾಗಿಟ್ಟುಕೊಂಡು ಮೈತ್ರಿ ಪಕ್ಷದ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕೆಲವು ದಿನಗಳ ಹಿಂದೆ ಮೋದಿಯವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈಗ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಮೋದಿ ಎಂದು ಕೂಗಿದವರಿಗೆ ಕೆನ್ನೆಗೆ ಹೊಡೆಯಿರಿ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಈ ರೀತಿಯ ಹೇಳಿಕೆ ಆತಂಕಕಾರಿ ಬೆಳವಣಿಗೆಯಾಗಿದೆ. ಮೈತ್ರಿ ಪಕ್ಷದ ನಾಯಕರ ಹೇಳಿಕೆ ವಿರುದ್ಧ ಚುನಾವಣ ಆಯೋಗಕ್ಕೆ ದೂರು ನೀಡಲಿದ್ದೇವೆ ಎಂದರು.
ಸುರ್ಜೆವಾಲ ಬಂಧನಕ್ಕೆ ಆಗ್ರಹ
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಕುರಿತು ಸುಳ್ಳು ಆರೋಪ ಮಾಡಿ, ನಕಲಿ ಡೈರಿ ಬಿಡುಗಡೆ ಮಾಡಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೆವಾಲ ಅವರನ್ನು ಬಂಧಿಸುವಂತೆ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.