ಬಿಜೆಪಿ ಸೋಲಿಸುವುದು ಗುರಿ: ಜಾರ್ಜ್
Team Udayavani, Mar 26, 2019, 6:30 AM IST
ಉಡುಪಿ: ಕೋಮುವಾದಿ ಪಕ್ಷ ಬಿಜೆಪಿಯನ್ನು ಸೋಲಿಸುವುದು ನಮ್ಮ ಮುಖ್ಯ ಗುರಿ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಸೋಮವಾರ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ನಾಮಪತ್ರ ಸಲ್ಲಿಸುವ ಮುನ್ನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದ ಮೈತ್ರಿ ಸರಕಾರದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯದ ಉಳಿವಿಗಾಗಿ ಬಿಜೆಪಿಯನ್ನು ಸೋಲಿಸಬೇಕು ಎಂದರು.
ಅನೇಕ ರಹಸ್ಯ: ಡಾ| ಜಯಮಾಲಾ
ರಾಜ್ಯದಲ್ಲಿ ಸಂದಿಗ್ಧ ಸ್ಥಿತಿಯಲ್ಲಿ ಸಮ್ಮಿಶ್ರ ಸರಕಾರವನ್ನು ಒಪ್ಪಿಕೊಂಡಿದ್ದೇವೆ. ಕೋಮುವಾದಿ ಪಕ್ಷ ಸೋಲಿಸಲು ಜೆಡಿಎಸ್- ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿವೆ. ಹೊಂದಾಣಿಕೆಯ ಹಿಂದೆ ಅನೇಕ ರಹಸ್ಯಗಳಿವೆ, ಸತ್ವಗಳಿವೆ. ಸುಳ್ಳು ಹೇಳುವ ಪಕ್ಷಕ್ಕೆ ಮತ ಹಾಕಕೂಡದು ಎಂದು ಡಾ| ಜಯಮಾಲಾ ಕರೆ ನೀಡಿದರು.
ಜತೆಯಾಗಿ ಸಂಸತ್ ಪ್ರವೇಶ: ಮಧು
ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಮಾತನಾಡಿ, ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಲ್ಲಿ ಎರಡೂ ಪಕ್ಷದವರು ಸಹಕಾರ ಕೊಡಬೇಕು. ಬಂಗಾರಪ್ಪನವರ ಅಭಿಮಾನಿಗಳು ಈ ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಇದ್ದಾರೆ. ಅವರೂ ನಿಮಗೆ ಸಹಕಾರ ನೀಡುತ್ತಾರೆ. ನಾವಿಬ್ಬರೂ ಜತೆಯಾಗಿ ಸಂಸತ್ತನ್ನು ಪ್ರವೇಶಿಸಲು ಮತದಾರರು ಆಶೀರ್ವದಿಸಬೇಕು ಎಂದರು.
ಹಿರಿಯ ಮುಖಂಡರಾದ ಅಶೋಕ ಕುಮಾರ್ ಕೊಡವೂರು, ಡಾ| ವಿಜಯಕುಮಾರ್, ಯೋಗೀಶ ಶೆಟ್ಟಿ, ಜಯಕುಮಾರ ಪರ್ಕಳ, ಸಂದೀಪ್, ರಾಜೇಗೌಡ, ಯು.ಆರ್. ಸಭಾಪತಿ, ಕೆ. ಗೋಪಾಲ ಭಂಡಾರಿ, ಶ್ರೀನಿವಾಸ, ಜನಾರ್ದನ ತೋನ್ಸೆ, ಎಂ.ಪಿ. ಮೊಯ್ದಿನಬ್ಬ, ಪ್ರಖ್ಯಾತ ಶೆಟ್ಟಿ, ನರಸಿಂಹಮೂರ್ತಿ, ಸಚಿನ್ ಮೀಗಾ, ಗುಲಾಂ ಅಹಮದ್, ಕಿಶನ್ ಹೆಗ್ಡೆ, ವಿಶ್ವಾಸ್ ಅಮೀನ್, ರಾಜು ಪೂಜಾರಿ, ಜನಾರ್ದನ ಭಂಡಾರ್‌ಕರ್ ಇದ್ದರು. ಎಂ.ಎ. ಗಫೂರ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.