ಕರಡಿಗೆ ಮತ್ತೆ ಟಿಕೆಟ್; ಬಿಎಸ್‌ವೈ ಕೈಮೇಲು
Team Udayavani, Mar 30, 2019, 8:32 AM IST
ಬೆಂಗಳೂರು: ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಮತ್ತೆ ಸ್ಪರ್ಧಿಸಲು ಟಿಕೆಟ್ ನೀಡಿರುವ ಬಿಜೆಪಿಯು ಚಿಕ್ಕೋಡಿಯಿಂದ ಅಣ್ಣಾ ಸಾಹೇಬ ಜೊಲ್ಲೆ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ ನಾಯಕ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿ ಘೋಷಣೆಯಾದಂತಾಗಿದೆ. ರಾಜ್ಯದಲ್ಲಿ ಬಾಕಿ ಉಳಿದಿದ್ದ ಮೂರು ಕ್ಷೇತ್ರಗಳಿಗೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಧಿಕೃತವಾಗಿ ಘೋಷಿಸಿದೆ.
ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರಿಗೆ ಮತ್ತೆ ಟಿಕಟ್ ನೀಡಲಾಗಿದೆ. ಆ ಮೂಲಕ ರಾಜ್ಯದಲ್ಲಿದ್ದ 15 ಬಿಜೆಪಿ ಸಂಸದರೂ ಮತ್ತೂಮ್ಮೆ ಸ್ಪರ್ಧಿಸಲು ಬಿಜೆಪಿ ಅವಕಾಶ ಕಲ್ಪಿಸಿದೆ. ಉಳಿದ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಎಲ್ಲ ಬಿಜೆಪಿ ಸಂಸದರಿಗೆ ಟಿಕೆಟ್ ಸಿಕ್ಕಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಈ ಹಿಂದೆ ಹೇಳಿದಂತೆ ಎಲ್ಲ ಸಂಸದರರೂ ಮತ್ತೆ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಆ ಮೂಲಕ ಮತ್ತೂಮ್ಮೆ ಯಡಿಯೂರಪ್ಪ ಅವರ ಕೈ ಮೇಲಾದಂತಿದೆ. ಬಳ್ಳಾರಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರಾಭವಗೊಂಡಿದ್ದರೆ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸರಾಗಿದ್ದ ಅನಂತ ಕುಮಾರ್ ಅವರು ಅಕಾಲಿಕವಾಗಿ ನಿಧನರಾಗಿದ್ದರು. ಹಾಗಾಗಿ ಬಿಜೆಪಿ ಸಂಸದರ ಸಂಖ್ಯೆ 17ರಿಂದ 15ಕ್ಕೆ ಇಳಿಕೆಯಾಗಿತ್ತು. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಬೆಂಬಲಿಸಿದ್ದು, ಉಳಿದ 27 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.
ಕೊಪ್ಪಳದಲ್ಲಿ ಮತ್ತೆ ಅವಕಾಶ: ಬಿಜೆಪಿ ಮೂರು ಕಂತಿನಲ್ಲಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರಡಿ ಸಂಗಣ್ಣ ಅವರು ಹೆಸರು ಇಲ್ಲದ ಕಾರಣ ಬಹುತೇಕ ಅವರಿಗೆ ಟಿಕೆಟ್ ಕೈತಪ್ಪುವ ಮಾತು ಕೇಳಿಬಂದಿತ್ತು. ಕರಡಿ ಸಂಗಣ್ಣ ಅವರು ಹಲವು ಬಾರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು. ಈ ನಡುವೆ ಕ್ಷೇತ್ರದಲ್ಲಿ ಸಿ.ವಿ.ಚಂದ್ರಶೇಖರ್, ಡಾ.ಕೆ.ಬಸವರಾಜು ಹಾಗೂ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ತೀವ್ರ ಪೈಪೋಟಿ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿರಲಿಲ್ಲ. ಹಾಲಿ ಸಂಸದರಿಗೆಲ್ಲಾ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಅಂತಿಮವಾಗಿ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.