“ಉತ್ತರ’ದ ಮತದಾನಕ್ಕೆ ಆಯೋಗ ಸನ್ನದ್ಧ: ಸಂಜೀವ್‌ ಕುಮಾರ್‌

Team Udayavani, Apr 22, 2019, 3:00 AM IST

uttra-sanj

ಬೆಂಗಳೂರು: ಎರಡನೇ ಹಂತದಲ್ಲಿ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ(ಏ.23) ನಡೆಯುವ ಮತದಾನಕ್ಕೆ ಚುನಾವಣಾ ಆಯೋಗ ಸನ್ನದ್ಧಗೊಂಡಿದ್ದು, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಮತದಾನಕ್ಕೆ ಮಾಡಿಕೊಳ್ಳಲಾದ ಸಿದ್ಧತೆಗಳ ಕುರಿತು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌, 14 ಕ್ಷೇತ್ರಗಳಲ್ಲಿ ಶಾಂತಿಯುತ, ಸುಗಮ ಮತದಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಮಂಗಳವಾರ ಮತದಾನ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 237 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, 2.43 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.

ಇದಕ್ಕಾಗಿ 28,022 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಚುನಾವಣಾ ಪ್ರಕ್ರಿಯೆಗೆ ಒಟ್ಟು 2.03 ಲಕ್ಷ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಮಸ್ಯಾತ್ಮಕ ಎಂದು ಗುರುತಿಸಲಾಗಿರುವ 5 ಸಾವಿರ ಮತಗಟ್ಟೆಗಳಲ್ಲಿ ಹೆಚ್ಚುವರಿ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಂಜೀವ್‌ ಕುಮಾರ್‌ ತಿಳಿಸಿದರು.

ಎಂ-2 ಇವಿಎಂ ಬಳಕೆ: ಹದಿನಾಲ್ಕು ಕ್ಷೇತ್ರಗಳಲ್ಲಿ ಎಂ-2 ಇವಿಎಂಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಪೈಕಿ 48, 394 ಬ್ಯಾಲೆಟ್‌ ಯೂನಿಟ್‌, 33,626 ಕಂಟ್ರೋಲ್‌ ಯೂನಿಟ್‌ ಹಾಗೂ 35,028 ವಿವಿ ಪ್ಯಾಟ್‌ಗಳನ್ನು ಮತದಾನಕ್ಕೆ ಬಳಸಿಕೊಳ್ಳಲಾಗುವುದು.

ಅತಿ ಹೆಚ್ಚು 57 ಅಭ್ಯರ್ಥಿಗಳು ಇರುವ ಬೆಳಗಾವಿ ಕ್ಷೇತ್ರದಲ್ಲಿ 4 ಬ್ಯಾಲೆಟ್‌ ಯೂನಿಟ್‌ಗಳನ್ನು ಬಳಸಿದರೆ, 16 ಕ್ಕಿಂತ ಹೆಚ್ಚು ಅಭ್ಯರ್ಥಿಗಳಿರುವ ಬೀದರ್‌, ಹಾವೇರಿ ಹಾಗೂ ದಾವಣಗೆರೆ ಕ್ಷೇತ್ರಗಳಲ್ಲಿ ತಲಾ 2 ಬ್ಯಾಲೆಟ್‌ ಯೂನಿಟ್‌ಗಳನ್ನು ಬಳಸಲಾಗುತ್ತಿದೆ ಎಂದು ಸಂಜೀವ್‌ ಕುಮಾರ್‌ ತಿಳಿಸಿದರು.

ಮೌನ ಅವಧಿ: ಏ.23ರಂದು ಮತದಾನ ನಡೆಯಲಿರುವ 14 ಕ್ಷೇತ್ರಗಳಲ್ಲಿ ಭಾನುವಾರ (ಏ.21) ಸಂಜೆ 6 ಗಂಟೆಯಿಂದ “ಮೌನ ಅವಧಿ’ ಜಾರಿಗೆ ಬರಲಿದ್ದು, ಏ.21ರ ಸಂಜೆ 6ರಿಂದ ಏ.23ರ ಸಂಜೆ ರವರೆಗೆ ಇದು ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಎಲ್ಲ ರೀತಿಯ ಬಹಿರಂಗ ಪ್ರಚಾರ, ಧ್ವನಿವರ್ದಕ ಬಳಕೆ, ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ಅಲ್ಲದೇ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಹೇರಲಾಗಿರುತ್ತದೆ. ಈ ಅವಧಿಯಲ್ಲಿ ಗಡಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗುವುದು. ಚುನಾವಣಾ ನೀತಿ ಸಂಹಿತೆ ಜಾರಿ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು. ಹೆಚ್ಚು ಅಕ್ರಮ ಹಣ ಜಪ್ತಿಯಾಗಿರುವ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇಡಲಾಗುವುದು ಎಂದು ಸಂಜೀವ್‌ ಕುಮಾರ್‌ ತಿಳಿಸಿದರು.

“ಮಾಸ್‌ ಡಿಲೀಶನ್‌’ ಶುದ್ಧ ಸುಳ್ಳು – ಸಿಇಒ: ಮತದಾರರ ಪಟ್ಟಿಯಲ್ಲಿ “ದೊಡ್ಡ ಮಟ್ಟದಲ್ಲಿ ಮತದಾರರ ಹೆಸರು ತೆಗೆದು ಹಾಕಲಾಗಿದೆ’ (ಮಾಸ್‌ ಡಿಲೀಶನ್‌) ಎಂಬ ಆರೋಪ ಶುದ್ಧ ಸುಳ್ಳು. ಆ ರೀತಿ ದೊಡ್ಡ ಪ್ರಮಾಣದಲ್ಲಿ ಹೆಸರು ತೆಗೆದು ಹಾಕಿಲ್ಲ, ಹಾಕುವುದಕ್ಕೆ ಸಾಧ್ಯವೂ ಇಲ್ಲ. ರಾಜಕೀಯ ಪಕ್ಷಗಳಿಗೆ ಜ.16ರಂದು ನೀಡಲಾಗಿದ್ದ ಮತದಾರರ ಪಟ್ಟಿ ಇಟ್ಟುಕೊಂಡು ನೋಡಿದರೆ ಕೆಲವೊಂದು ಗೊಂದಲಗಳು ಮೂಡುವುದು ಸಹಜ.

ಅಭ್ಯರ್ಥಿಗಳಿಗೆ ನೀಡಲಾದ ಅಂತಿಮ ಪಟ್ಟಿ ಪರಿಶೀಲಿಸಿಕೊಂಡರೆ ಈ ಗೊಂದಲ ಇರುವುದಿಲ್ಲ. ನಿರ್ದಿಷ್ಟ ಪ್ರಕರಣಗಳಿದ್ದರೆ ಒಂದೊಂದು ಪ್ರಕರಣದ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತದೆ. ಆಧಾರ-ಪುರಾವೆಗಳಿಲ್ಲದೇ ಮಾಡುವ ಆರೋಪಗಳಿಗೆ ಉತ್ತರ ಕೊಡುವುದಿಲ್ಲ. ಪರಿಶೀಲನೆಯೂ ನಡೆಸುವುದಿಲ್ಲ ಎಂದು ಸಂಜೀವ್‌ ಕುಮಾರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಾಗುವುದು.
-ಸಂಜೀವ್‌ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.