ಪತ್ರಿಕೆ, ಟಿವಿಗಳಲ್ಲಿ ಕ್ರಿಮಿನಲ್ ಪ್ರಕರಣ ಪ್ರಕಟ ಕಡ್ಡಾಯ
Team Udayavani, Mar 23, 2019, 1:58 AM IST
ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ವಿಚಾರಣೆಗೆ ಬಾಕಿ ಇರುವ ಹಾಗೂ ಶಿಕ್ಷೆಗೊಳಪಟ್ಟ ತಮ್ಮ ಮೇಲಿನ ಕ್ರಿಮಿನಲ್ ಕೇಸ್‌ಗಳ ವಿವರಗಳನ್ನು ನಾಮಪತ್ರದ ಜತೆಗಿನ ಪ್ರಮಾಣಪತ್ರದಲ್ಲಿ ಘೋಷಿಸಿಕೊಂಡರೆ ಸಾಲದು. ಅವುಗಳ ಬಗ್ಗೆ ದಿನಪತ್ರಿಕೆಗಳು ಹಾಗೂ ಟಿವಿ ಚಾನಲ್‌ಗಳಲ್ಲಿ ಪ್ರಕಟಣೆ ನೀಡಬೇಕು. ಸುಪ್ರೀಂಕೋರ್ಟ್‌ನ ತೀರ್ಪಿನ ಅನ್ವಯ ಕೇಂದ್ರ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಯಾವುದೇ ಪಕ್ಷವನ್ನು ಪ್ರತಿನಿಧಿಸುತ್ತಿದ್ದರೆ, ತಮ್ಮ ಮೇಲೆ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಕೇಸ್‌ಗಳ ಮಾಹಿತಿಗಳನ್ನು ಪಕ್ಷಕ್ಕೆ ಸಲ್ಲಿಸಬೇಕು. ಆ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಪಕ್ಷ ಹಾಗೂ ಅಭ್ಯರ್ಥಿ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚು ಪ್ರಸಾರ ಹೊಂದಿರುವ ದಿನಪತ್ರಿಕೆ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಮಾಡಬೇಕು.
ನಾಮಪತ್ರ ಸಲ್ಲಿಸಿದ ಬಳಿಕ ಮತದಾನಕ್ಕೆ ಎರಡು ದಿನ ಬಾಕಿ ಇರುವಾಗಬೇರೆ ಬೇರೆ ದಿನಾಂಕಗಳಲ್ಲಿ ಕನಿಷ್ಠ ಮೂರು ಬಾರಿ ಅದನ್ನು ಪ್ರಕಟಿಸಬೇಕು. ಪಕ್ಷಗಳು ತನ್ನ ಅಭ್ಯರ್ಥಿಯ ಕ್ರಿಮಿನಲ್ ಕೇಸ್‌ಗಳಮಾಹಿತಿಯನ್ನು ಪಕ್ಷದ ಅಧಿಕೃತ ವೆಬ್‌ಸೈಟ್‌ಗಳಲ್ಲೂ ಹಾಕಬೇಕು. ಪತ್ರಿಕೆ ಹಾಗೂ ಟಿವಿಗಳಲ್ಲಿ ಪ್ರಕಟಗೊಂಡ ದಾಖಲೆಗಳನ್ನು ಜಿಲ್ಲಾ ಚುನಾವಣಾಧಿಕಾರಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಕ್ರಿಮಿನಲ್ ಕೇಸ್‌ಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ಸಲ್ಲಿಸುವ ವೇಳೆ ನಿಗದಿತ ಅರ್ಜಿ ನಮೂನೆಯಲ್ಲಿ ದಪ್ಪಕ್ಷರಗಳಲ್ಲಿ ಅದನ್ನು ನಮೂದಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.