ಕೈ’ ಬಿಟ್ಟ ಶಾಸಕ ಶಂಕರ್ ನಡೆ ಎತ್ತ ಕಡೆ?
ರಾಜ್ಯದ ಮೈತ್ರಿ ಸರ್ಕಾರದ ಬೆಂಬಲ ವಾಪಸ್ ಪಡೆದು ಸದ್ಯಕ್ಕೆ ತಟಸ್ಥ
Team Udayavani, Mar 27, 2019, 7:36 AM IST
ರಾಣಿಬೆನ್ನೂರು ಕ್ಷೇತ್ರದ ಶಾಸಕ ಆರ್. ಶಂಕರ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸುತ್ತಾರೆ, ಅವರ ಚಿತ್ತ ಎತ್ತ ಕಡೆ ಎಂಬುದು ಕುತೂಹಲ ಕೆರಳಿಸಿದೆ.
ಆರ್.ಶಂಕರ್ ಕಳೆದ ಲೋಕಸಭೆ ಚುನಾವಣೆ ವೇಳೆ ಶಾಸಕರಾಗಿರಲಿಲ್ಲ. ಆಗ ಅವರು, ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದೆ ಇದ್ದಾಗ
ಸರ್ಕಾರ ರಚನೆ ವೇಳೆ ಶಾಸಕ ಆರ್. ಶಂಕರ್ ಬಿಜೆಪಿ ಸರ್ಕಾರ ರಚಿಸಬಹುದು ಎಂದು ಬೆಳಗ್ಗೆ ಬಿಜೆಪಿಗೆ ಬೆಂಬಲ ಸೂಚಿಸಿ, ಸಂಜೆ ಕಾಂಗ್ರೆಸ್ -ಜೆಡಿಎಸ್ ಸರ್ಕಾರ ರಚಿಸುವ ಸಾಧ್ಯತೆ ಗೊತ್ತಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು.ಬಳಿಕ ಸರ್ಕಾರದಲ್ಲಿ ಅರಣ್ಯ ಸಚಿವರೂ ಆಗಿದ್ದರು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅವರಿಂದ ಸಚಿವ ಸ್ಥಾನ ವಾಪಸ್ ಪಡೆಯಿತು. ಇದರಿಂದ ಬೇಸತ್ತ ಶಂಕರ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದರು. ಬಳಿಕ ಅವರು ಬೇರೆ
ಯಾವ ಪಕ್ಷದೊಂದಿಗೂ ಗುರುತಿಸಿಕೊಂಡಿಲ್ಲ. ಹೀಗಾಗಿ ಅವರ ಒಲವು ಯಾವ ಕಡೆ ಎಂಬಕುತೂಹಲ ಮೂಡಿಸಿದೆ.
ಕುರುಬ ಸಮುದಾಯಕ್ಕೆ ಸೇರಿದ ಶಂಕರ್ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಕೆ.ಬಿ. ಕೋಳಿವಾಡ ಅವರನ್ನು ಮಣಿಸಿ ಶಾಸಕರಾದವರು. ಕ್ಷೇತ್ರದಲ್ಲಿ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಅಭಿಮಾನಿಗಳು ಸಹ ಅವರ ನಿರ್ಧಾರದ ನಿರೀಕ್ಷೆಯಲ್ಲಿದ್ದಾರೆ.
ಶಂಕರ್ ಮತಗಳ ಮೇಲೆ ಕಣ್ಣು ಶಾಸಕರಾಗಿರುವ ಶಂಕರ್ ಕ್ಷೇತ್ರದಲ್ಲಿ ತಮ್ಮದೇ
ಪ್ರಭಾವಹೊಂದಿರುವುದರಿಂದ ಅವರ ಹಿಡಿತದಲ್ಲಿರುವ ಮತಗಳನ್ನು ಸೆಳೆಯಲು
ಬಿಜೆಪಿ ಹಾಗೂ ಕಾಂಗ್ರೆಸ್ ಹವಣಿಸುತ್ತಿವೆ. ಎರಡೂ ಪಕ್ಷದವರು ಶಂಕರ್
ಮತಗಳ ಮೇಲೆ ಕಣ್ಣಿಟ್ಟಿವೆ. ಆದರೆ, ಶಂಕರ್ ಮಾತ್ರ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ.
ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.