ಅಪ್ಪ, ಮಕ್ಕಳಾಯ್ತು, ಈಗ ಮೊಮ್ಮಕ್ಕಳ ದಬ್ಬಾಳಿಕೆ: ಬಿಎಸ್‌ವೈ
Team Udayavani, Apr 11, 2019, 3:00 AM IST
ಬೇಲೂರು: ಇದುವರೆಗೂ ಅಪ್ಪ, ಮಕ್ಕಳು, ಸೊಸೆಯಂದಿರು ರಾಜಕೀಯ ಮಾಡುತ್ತಿದ್ದರು. ಈಗ ತಮ್ಮ ಮೊಮ್ಮಕ್ಕಳನ್ನು ಕಟ್ಟಿಕೊಂಡು ದಬ್ಬಾಳಿಕೆ ನಡೆಸುತ್ತಿದ್ದಾರೆ. ಚುನಾವಣೆಯಲ್ಲಿ ಜಿಲ್ಲೆಯ ಜನ ಈ ಬಾರಿ ಬಿಜೆಪಿಗೆ ಮತ ನೀಡುವ ಮೂಲಕ ಇವರ ದೌರ್ಜನ್ಯಕ್ಕೆ ಅಂತ್ಯ ಕಾಣಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಾಪ್ರಹಾರ ನಡೆಸಿದರು.
ಬೇಲೂರು ಸೇರಿದಂತೆ ಹಾಸನ ಜಿಲ್ಲೆಯ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಎ.ಮಂಜು ಪರ ಪ್ರಚಾರ ನಡೆಸಿದ ಅವರು, ಜೆಡಿಎಸ್ ವಿರುದ್ಧ ಹರಿಹಾಯ್ದರು. ಮಾಜಿ ಕೇಂದ್ರ ಸಚಿವ ಅಂಬರೀಶ್ ಪಾರ್ಥಿವ ಶರೀರವನ್ನು ಕುಮಾರಸ್ವಾಮಿಯವರು ಮಂಡ್ಯಕ್ಕೆ ತಂದು, ಅವರ ಗುಣಗಾನ ಮಾಡಿದರು. ಆದರೆ, ಸುಮಲತಾ ಲೋಕಸಭೆಗೆ ಸ್ಪರ್ಧಿಸಿದಾಗ ಒಬ್ಬ ಹೆಣ್ಣುಮಗಳ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವ ಮೂಲಕ ತಮ್ಮ ದುಷ್ಟತನ ಪ್ರದರ್ಶಿಸಿದರು ಎಂದು ಆರೋಪಿಸಿದರು.
ದೇಶದ ಏಕತೆ, ಅಖಂಡತೆಯ ಉಳಿವು ನರೇಂದ್ರ ಮೋದಿ ನೇತೃತ್ವದ ಸರಕಾರದಿಂದ ಮಾತ್ರ ಸಾಧ್ಯ ಎನ್ನುವುದನ್ನು ಸಾಕ್ಷೀಕರಿಸಿರುವ ಕಾರಣ ದೇಶದ ಜನತೆ ಮೋದಿ, ಮೋದಿ ಎನ್ನುತ್ತಿದ್ದಾರೆ. ಆದರೆ, 10 ವರ್ಷಗಳ ಕಾಲ ದೇಶವಾಳಿದ ಮನಮೋಹನ್ ಸಿಂಗ್ ಹೆಸರನ್ನು ಏಕೆ ಹೇಳುತ್ತಿಲ್ಲ ಎನ್ನುವುದನ್ನು ಕಾಂಗ್ರೆಸ್ ಮುಖಂಡರು ಅರ್ಥ ಮಾಡಿಕೊಳ್ಳಬೇಕು. ಹಾಸನ ಸೇರಿದಂತೆ ರಾಜ್ಯದಲ್ಲಿ 22, ದೇಶದಲ್ಲಿ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.