ದಾವಣಗೆರೆ: ಅಭಿವೃದ್ಧಿ ಸೋಗಲ್ಲಿ ನಡೆದಿದೆ ಕೆಸರೆರಚಾಟ
Team Udayavani, Mar 14, 2019, 2:19 AM IST
ದಾವಣಗೆರೆ: ಒಂದಿಷ್ಟು ನೀರಾವರಿ ಜತೆಗೆ ಬಹುತೇಕ ಮಳೆಯಾಶ್ರಿತ ಪ್ರದೇಶವನ್ನೇ ಹೊಂದಿರುವ ದಾವಣಗೆರೆ ಜಿಲ್ಲೆಯಲ್ಲಿ, ಈಗ ನೀರಿನದ್ದೇ ಸಮಸ್ಯೆ. ನೀರಾವರಿಗೆ ಭದ್ರಾ ಜಲಾಶಯವೇ ಮೂಲ. ಆ ಜಲಾಶಯ ಭರ್ತಿಯಾದರಷ್ಟೇ ಕೆಲವು ಭಾಗದ ಜನರ ಬದುಕಿಗೆ ನೆಮ್ಮದಿ. ವಿಚಿತ್ರವೆಂದರೆ ಭದ್ರಾ ಜಲಾಶಯದ ನೀರನ್ನೇ ನಂಬಿಕೊಂಡಿರುವ ಕೊನೆಭಾಗದ ಅಚ್ಚುಕಟ್ಟು ಪ್ರದೇಶದ ರೈತರಿಗಂತೂ ಆ ನೀರು ಸಿಗುವುದೇ ಕನಸು. ಈಚೆಗಂತೂ ನಿರಂತರ ಬರ ಪರಿಸ್ಥಿತಿಯನ್ನೇ ಎದುರಿಸುತ್ತಿರುವ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಕೆಲವು ಹಳ್ಳಿಗಳಲ್ಲಿ ಟ್ಯಾಂಕರ್‌ನಲ್ಲಿ ನೀರನ್ನು ಸರಬರಾಜು ಮಾಡಲಾಗುತ್ತಿದೆ.
ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ದೊರೆತಿಲ್ಲ. ಜಗಳೂರು ತಾಲೂಕಲ್ಲಿ ಜನರಿಗೆ ಫ್ಲೋರೈಡ್‌ಯುಕ್ತ ನೀರೇ ಗತಿಯಾಗಿದೆ. ಜಿಲ್ಲೆಯ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ ಮತ್ತು ಭತ್ತದ ಬೆಂಬಲ ಬೆಲೆಗಾಗಿ ರೈತರು ಪ್ರತಿವರ್ಷವೂ ಹೋರಾಟ ನಡೆಸುವುದು ತಪ್ಪಿಲ್ಲ. ಕಳೆದ 5 ವರ್ಷಗಳ ಅವಧಿಯಲ್ಲಿ 100ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು, ದಾವಣಗೆರೆಯಲ್ಲಿ ಬಟ್ಟೆ ಮಿಲ್‌ಗಳ ಸದ್ದಡಗಿದ ಮೇಲೆ ಯಾವುದೇ ಬೃಹತ್ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಹಾಗಾಗಿ ಯುವ ಕರು ಉದ್ಯೋಗ ಅರಸಿ ಬೇರೆಡೆ ಹೋಗುವುದು ಸಾಮಾನ್ಯವಾಗಿದೆ.
ಬಿಜೆಪಿ ಚುನಾವಣ ಅಸ್ತ್ರ
2014ರಲ್ಲಿ ಮೂರನೇ ಬಾರಿಗೆ ಸಂಸದರಾದ ಜಿ.ಎಂ.ಸಿದ್ದೇಶ್ವರ್, ಕೇಂದ್ರ ವಿಮಾನಯಾನ ಸಹಾಯಕ ಸಚಿವ, ಅನಂತರ ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಯ ರಾಜ್ಯ ಸಚಿವರಾಗಿದ್ದರು. ಕಳೆದ 5 ವರ್ಷಗಳಲ್ಲಿ ಸ್ಮಾರ್ಟ್‌ಸಿಟಿ, ಅಮೃತ್ ಯೋಜನೆ, ರೈಲ್ವೆ ಜೋಡಿಮಾರ್ಗ ಸಹಿತ ಹತ್ತಾರು ಯೋಜನೆಗಳು ಕೇಂದ್ರದಿಂದ ಮಂಜೂರಾಗಿ ಕಾಮಗಾರಿಗಳು ನಡೆಯುತ್ತಿವೆ. ಅಲ್ಲದೆ ಹರಿಹರ ತಾಲೂಕಲ್ಲಿ 2ಜಿ ಎಥೆನಾಲ್ ಕಾರ್ಖಾನೆ ಮತ್ತು ರಾಜ್ಯ ಸಹಕಾರ ಮಾರುಕಟ್ಟೆ ಮಹಾ ಮಂಡಲದ ಸಹಯೋಗದಲ್ಲಿ ರಸ ಗೊಬ್ಬರ ಕಾರ್ಖಾನೆ ಸ್ಥಾಪಿಸಲು ಸಿದ್ಧತೆ ನಡೆದಿದೆ. ಇವೆಲ್ಲವನ್ನೂ ಬಿಜೆಪಿ, ತನ್ನ ಚುನಾವಣ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ.
ಕಾಂಗ್ರೆಸ್ ಚುನಾವಣ ಅಸ್ತ್ರ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ದಾವಣಗೆರೆಯಲ್ಲಿ 26 ಕೋ. ರೂ.ವೆಚ್ಚದ ಗಾಜಿನ ಮನೆ, ಹೈಟೆಕ್ ಜಾನು ವಾರು ಮಾರುಕಟ್ಟೆ.. ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವುದು ಮತ್ತು ಮೋದಿ ಸರಕಾರದ ವೈಫಲ್ಯಗಳನ್ನೇ ಕಾಂಗ್ರೆಸ್ ತನ್ನ ಪ್ರಚಾರದ ವಿಷಯಗಳನ್ನಾಗಿ ಬಳಸಿಕೊಳ್ಳುತ್ತಿದೆ.
ಕ್ಷೇತ್ರ ವ್ಯಾಪ್ತಿ
ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಹರಪನಹಳ್ಳಿ, ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ, ಮಾಯಕೊಂಡ ಸಹಿತ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಕಳೆದ ವರ್ಷ ಹರಪನಹಳ್ಳಿ ತಾಲೂಕು ಮತ್ತೆ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡಿದ್ದರೂ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲೇ ಮುಂದುವರಿದಿದೆ.
ಎನ್.ಆರ್.ನಟರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.