ಹೃದಯಾಘಾತದಿಂದ ಇಬ್ಬರು ಅಧಿಕಾರಿಗಳ ಸಾವು
Team Udayavani, Apr 24, 2019, 3:32 AM IST
ಸಿರುಗುಪ್ಪ/ಹುಕ್ಕೇರಿ: ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗೋವಿಂದಗಿರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ತಿಪ್ಪೇಸ್ವಾಮಿ (50) ಅವರನ್ನು ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸಿರುಗುಪ್ಪದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಆದರೆ, ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚುವರಿ ಮತಗಟ್ಟೆ ಅಧಿಕಾರಿಯಾಗಿ ನಿಯೋಜಿಸಿ ವಿಶ್ರಾಂತಿ ಪಡೆಯಲು ಸೂಚಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಮತ್ತೆ ಇವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್‌ಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.
ಇನ್ನೊಂದೆಡೆ, ಹುಕ್ಕೇರಿ ತಾಲೂಕಿನ ಯಮನಕಮರಡಿ ಮತಕ್ಷೇತ್ರದ ಕಣವಿಕಟ್ಟಿ ಗ್ರಾಮದ ಮತಗಟ್ಟೆ ನಂ.99 ರಲ್ಲಿ ಚುನಾವಣೆ ಕಾರ್ಯ ನಿರ್ವಹಿಸುತ್ತಿದ್ದ ಪಾಶ್ಚಾಪೂರ ಕಂದಾಯ ಇಲಾಖೆಯ ಗ್ರಾಮ ಸಹಾಯಕ ಸುರೇಶ ಭೀಮಪ್ಪಾ ಸನದಿ (28) ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಮತದಾನ ಕೇಂದ್ರದ ಸಹಾಯಕ ಎಂದು ಕೆಲಸ ನಿರ್ವಹಿಸುತ್ತಿದ್ದ ಅವರು, ಮತದಾರರ ಸಂಖ್ಯೆ ವಿರಳವಿದ್ದ ಸಮಯ ನೋಡಿಕೊಂಡು ತನ್ನ ಮತ ಚಲಾಯಿಸಿ ಕೊಠಡಿಯಿಂದ ಹೊರ ಬರುತ್ತಿರುವಾಗ ಘಟನೆ ಸಂಭವಿಸಿದೆ. ಏ.26ರಂದು ಇವರ ವಿವಾಹ ನಿಶ್ಚಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.