“ಗೂಳಿಗಳ ಗುದ್ದಾಟದಲ್ಲಿ ಜೋಳದ ರಾಶಿ ಹಾಳಾಯ್ತು’
Team Udayavani, Mar 22, 2019, 11:52 PM IST
ಗುಂಡ್ಲುಪೇಟೆ: ಹಳೇ ಮೈಸೂರು ಭಾಗದಲ್ಲಿ ಪ್ರಚಲಿತವಿರುವ ಗಾದೆಯಂತೆ ಎರಡು ಗೂಳಿಗಳ ನಡುವಿನ ಗುದ್ದಾಟದಲ್ಲಿ ಜೋಳದ ರಾಶಿ ಹಾಳಾಯ್ತು ಎಂಬಂತೆ ದೇವೇಗೌಡ ಮತ್ತು ಸಿದ್ದರಾಮಯ್ಯ ಒಬ್ಬರ ಕಾಲನ್ನೊಬ್ಬರು ಎಳೆಯಲು ಹವಣಿಸುತ್ತಾರೆಯೇ ಹೊರತು ಯಾವತ್ತಿಗೂ ಒಂದಾಗಲ್ಲ, ಅವರಲ್ಲಿ ಸಾಮರಸ್ಯ ಮೂಡುವುದು ಕನಸಿನ ಮಾತು ಎಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್ ವ್ಯಂಗ್ಯವಾಡಿದರು.
ಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಮೈತ್ರಿ ಸರಕಾರದಲ್ಲಿ ಹೊಂದಾಣಿಕೆ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ, ಕುಮಾರ ಪರ್ವವನ್ನು ಸಿದ್ದರಾಮಯ್ಯ ಅವರ ವಿರುದ್ಧ ಸಂಘಟಿಸಿದ್ದ ಕುಮಾರಸ್ವಾಮಿ ಅವರೇ, ಇವತ್ತು ಯಾರೊಡನೆ ಕೂಡಿಕೆ ಮಾಡ್ಕೊಂಡಿದೀರಿ ಎಂದು ಪ್ರಶ್ನಿಸಿದರು.
ದೇಶಾದ್ಯಂತ ಕಾಂಗ್ರೆಸ್ ದುರ್ಬಲವಾಗಿದೆ. 44 ಸಂಸದರನ್ನು ಗೆಲ್ಲಿಸಿಕೊಂಡು ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಹೊರಟ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಸಿದ್ರಾಮಯ್ಯ ನಿನ್ನ ಗೆಲ್ಲೋಕೆ ಬಿಡೋಲ್ಲ ಎಂದಿದ್ದೆ, ಅದರಂತೆ 36 ಸಾವಿರ ಮತದಿಂದ ಸೋಲಿಸಿದೆ. ನಾಟಿಕೋಳಿ ಮುದ್ದೆ ಸಾರು ಬೇಜಾರಾದ್ದರಿಂದ ಡ್ರೆç ಪೂ›ಟ್ಸ್ ತಿನ್ನೋಕೆ ಹೋಗಿದ್ದಾರೆ ಎಂದು ಮೂದಲಿಸಿದರು. ಇದು ತಮ್ಮ ಕೊನೆಯ ಚುನಾವಣೆಯಾಗಿದ್ದು, ಶಕ್ತಿ ತುಂಬುವಂತೆ ಶ್ರೀನಿವಾಸ್ ಪ್ರಸಾದ್ ಮನವಿ ಮಾಡಿದರು.
“ದೇವೇಗೌಡರಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕ’
ಕಾಂಗ್ರೆಸ್ ಪಕ್ಷದ ಲೋಕಸಭಾ ಸ್ಥಾನವನ್ನೇ ಕಿತ್ತುಕೊಳ್ಳುತ್ತಿರುವ ಮಾಜಿ ಪ್ರಧಾನಿ ದೇವೇಗೌಡರೇ ಕಾಂಗ್ರೆಸ್ ಮುಕ್ತ ಕರ್ನಾಟಕದ ಕನಸನ್ನು ನನಸು ಮಾಡುತ್ತಾರೆ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಅಭಿಪ್ರಾಯಪಟ್ಟರು. ದೇವೇಗೌಡ ಕುಟುಂಬ ರಾಜಕಾರಣವನ್ನು ಸಮರ್ಥಿಸಿಕೊಳ್ಳುತ್ತಿರುವುದು ದುರಂತ ಎಂದರು. ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್‌ರಂಥ ಹಳೇ ಹುಲಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.