ಟಿಕೆಟ್ ಬೆನ್ನಲ್ಲೇ ಅಪಸ್ವರ
Team Udayavani, Mar 25, 2019, 5:36 AM IST
ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಟಿಕೆಟ್ ಪ್ರಕಟಗೊಂಡ ಬೆನ್ನಲ್ಲೇ ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ಸಿಗದೆ ನಿರಾಶರಾದ ಆಕಾಂಕ್ಷಿಗಳನ್ನು ಸಮಾಧಾನಪಡಿಸಲು ಎರಡೂ ಪಕ್ಷಗಳ ನಾಯಕರು ಪ್ರಯತ್ನಪಡುತ್ತಿದ್ದಾರೆ.
ಹಲವು ಶಾಸಕರು, ಸ್ಥಳೀಯ ಮುಖಂಡರ ವಿರೋಧದ ಹೊರತಾಗಿಯೂ ಕೋಲಾರ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಟಿಕೆಟ್ ನೀಡಿರುವುದು ಕಾಂಗ್ರೆಸ್‌ನಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕೊಪ್ಪಳದಲ್ಲಿ ರಾಜಶೇಖರ ಹಿಟ್ನಾಳ್ ಅವರಿಗೆ ಟಿಕೆಟ್ ನೀಡಿರುವುದು ಇತರ ಆಕಾಂಕ್ಷಿಗಳಲ್ಲಿ ಬೇಸರ ಮೂಡಿಸಿದೆ. ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟಾಗಿದ್ದು, ಗೊಂದಲ ಮುಂದುವರಿದಿದೆ.
ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಪಿ.ಸಿ.ಗದ್ದಿಗೌಡರ್‌ಗೆ ಮತ್ತೆ ಮಣೆ ಹಾಕಲಾಗಿದೆ. ಇದಕ್ಕೆ ಸ್ಥಳೀಯ ನಾಯಕರು ಆಕ್ಷೇಪ ಎತ್ತಿದ್ದಾರೆ. ಕಾಂಗ್ರೆಸ್‌ನಿಂದ ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್ ನೀಡಿರುವುದು ಇತರ ಆಕಾಂಕ್ಷಿಗಳನ್ನು ಕೆರಳಿಸಿದೆ. ಇಲ್ಲಿ ಸಿದ್ದರಾಮಯ್ಯ ಅವರೇ ಸಮಾಧಾನಿಸಲು ರಂಗಕ್ಕೆ ಇಳಿದಿದ್ದಾರೆ.
ಬಿಜೆಪಿಯಲ್ಲೂ ಬೇಗುದಿ
ರಾಜ್ಯದ ಎಲ್ಲ 14 ಬಿಜೆಪಿ ಸಂಸದರಿಗೆ ಟಿಕೆಟ್ ನೀಡಲಾಗಿದ್ದು, ಸಂಸದ ಕರಡಿ ಸಂಗಣ್ಣ ಪ್ರತಿನಿಧಿಸುತ್ತಿರುವ ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಇನ್ನೂ ಘೋಷಣೆಯಾಗದಿರುವುದು ಬಿಜೆಪಿಯಲ್ಲೂ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿರುವುದನ್ನು ತೋರಿಸುತ್ತದೆ. ಇಬ್ಬರು ಪ್ರಬಲ ಆಕಾಂಕ್ಷಿಗಳಿದ್ದು, ಅವರನ್ನು ಸಮಾಧಾನಪಡಿಸುವ ಕಾರ್ಯ ನಡೆದಿದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಚಿಕ್ಕೋಡಿ ಕ್ಷೇತ್ರದಿಂದ ರಮೇಶ್ ಕತ್ತಿ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಅವರು ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಸಿದ್ದು, ಕಗ್ಗಂಟಾಗಿ ಪರಿಣಮಿಸಿದೆ. ಟಿಕೆಟ್ ಸಿಗದಿದ್ದರೆ ಕಠಿನ ನಿರ್ಧಾರ ಕೈಗೊಳ್ಳುವ ಎಚ್ಚರಿಕೆಯನ್ನೂ ರಮೇಶ್ ಕತ್ತಿ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಬಿಬಿಎಂಪಿ ಸದಸ್ಯ ಮುನಿಸ್ವಾಮಿಯವರಿಗೆ ಟಿಕೆಟ್ ನೀಡಿರುವುದು ಸಹಜವಾಗಿಯೇ ಡಿ.ಎಸ್. ವೀರಯ್ಯ, ಚಲವಾದಿ ನಾರಾಯಣಸ್ವಾಮಿಯವರ ಅಸಮಾಧಾನಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.