ಚುನಾವಣಾ ಆಯೋಗದ 1950 ಸಹಾಯವಾಣಿ
Team Udayavani, Mar 18, 2019, 12:57 AM IST
ಬೆಂಗಳೂರು: ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದುಕೊಳ್ಳಲು ಮತ್ತು ಚುನಾವಣಾ ಅಕ್ರಮಗಳ ಬಗ್ಗೆ ದೂರು ನೀಡಲು ಸಾರ್ವಜನಿಕರಿಗಾಗಿ ಚುನಾವಣಾ ಆಯೋಗ “1950′ ಸಂಖ್ಯೆಯ ಸಹಾಯವಾಣಿ ಪ್ರಾರಂಭಿಸಿದ್ದು, ಅದು ಈಗಾಗಲೇ ಕಾರ್ಯಾಚರಣೆಯಲ್ಲಿದೆ.
ರಾಜ್ಯದ ಎಲ್ಲ 33 ಚುನಾವಣಾ ಜಿಲ್ಲೆಗಳಲ್ಲಿ ದಿನದ 24 ಗಂಟೆ ಈ ಸಹಾಯವಾಣಿ ಕೆಲಸ ಆರಂಭಿಸಿದೆ. ರಾಜ್ಯಮಟ್ಟದ ಸಹಾಯವಾಣಿಗೆ ಸಂಪರ್ಕಿಸಲು 1800 4255 1950 ಸಂಖ್ಯೆಯನ್ನು ಡಯಲ್ ಮಾಡಬೇಕು. ಜಿಲ್ಲಾಮಟ್ಟದಲ್ಲಿ ಆಯಾ ಜಿಲ್ಲೆಯ ಸಾರ್ವಜನಿಕರು ನೇರ ವಾಗಿ 1950 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ದೂರುಗಳನ್ನು ನೀಡಬಹುದು ಅಥವಾ ಸಲಹೆಗಳನ್ನೂ ನೀಡಬಹುದು.
ಒಂದು ಜಿಲ್ಲೆಯಿಂದ ಮತ್ತೂಂದು ಜಿಲ್ಲೆಗೆ ಸಂಪರ್ಕಿಸಬೇಕಾದರೆ, ಸಾರ್ವಜನಿಕರು ತಾವು ಸಂಪರ್ಕಿಸಬೇಕಾದ ಜಿಲ್ಲೆ, ಎಸ್‌ಟಿಡಿ ಕೋಡ್ ಜೊತೆಗೆ ಸಹಾಯವಾಣಿ ಸಂಖ್ಯೆಗೆ ಡಯಲ್ ಮಾಡಬೇಕು. ರಾಜ್ಯಮಟ್ಟ ದ ಮತದಾರರ ಸಹಾಯವಾಣಿ ಕೇಂದ್ರದಲ್ಲಿ 10 ಆಪರೇಟರು ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ಜಿಲ್ಲಾ ಸಹಾಯವಾಣಿ ಕೇಂದ್ರದಲ್ಲಿ ಕನಿಷ್ಠ 2 ಆಪರೇಟರುಗಳು ಪ್ರತಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಜಿಲ್ಲೆಯ ಸಹಾಯವಾಣಿ ಕೇಂದ್ರದಲ್ಲಿ 8 ಆಪರೇಟರುಗಳು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಸಹಾಯವಾಣಿ 1950ಗೆ ಕರೆ ಮಾಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಸಂಬಂಧಪಟ್ಟ ಮತಗಟ್ಟೆ, ಮತಗಟ್ಟೆಯಲ್ಲಿರುವ ಮೂಲಸೌಕರ್ಯಗಳು, ಮತಗಟ್ಟೆಯ ಅಂತರ ಮತ್ತಿತರರ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ, ಚುನಾವಣಾ ಅಕ್ರಮಗಳ ಬಗ್ಗೆಯೂ ದೂರು ನೀಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.