ಬೆದರಿಕೆ, ಆತಂಕದಲ್ಲಿ ಚುನಾವಣೆ: ಆಳ್ವಾ
Team Udayavani, Apr 11, 2019, 6:40 AM IST
ಹುಬ್ಬಳ್ಳಿ: ಭಯ, ಬೆದರಿಕೆ ಹಾಗೂ ಆತಂಕದಲ್ಲಿ ದೇಶದ ಚುನಾವಣೆ ನಡೆಯುತ್ತಿದ್ದು, ಈ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿರುವ ಚುನಾವಣಾ ಆಯೋಗ ಕಂಡೂ ಕಾಣದಂತಿದೆ ಎಂದು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಹಾಗೂ ಇತರೆ ಪಕ್ಷದ ನಾಯಕರನ್ನು ಬೆದರಿಸುವ ತಂತ್ರಗಾರಿಕೆ ಪ್ರಧಾನಿ ಮೋದಿ ಹಾಗೂ ಅವರ ತಂಡ ಮಾಡುತ್ತಿದೆ. ಸಾಂವಿಧಾನಿಕ ಸಂಸ್ಥೆಗಳ ಮೂಲಕ ಕಾಂಗ್ರೆಸ್ ಹಾಗೂ ಇತರೆ ಪಕ್ಷದ ನಾಯಕರ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿ ಮಾನಸಿಕ ಹಿಂಸೆ ನೀಡುವ ಕೆಲಸ ನಡೆಯುತ್ತಿದೆ. ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳು ನಡೆಯುತ್ತಿದ್ದರೂ ಚುನಾವಣಾ ಆಯೋಗ ಮೌನ ವಹಿಸಿದೆ ಎಂದರು.
ಮೋದಿ ಅವರ ಭಾಷಣ ಸಂಪೂರ್ಣವಾಗಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ. ಸೈನಿಕರ ಕಾರ್ಯಾಚರಣೆಯನ್ನು ಪ್ರಚಾರಕ್ಕೆ ಬಳಸಿಕೊಳ್ಳದಂತೆ ಆಯೋಗ ಸ್ಪಷ್ಟವಾಗಿ ಹೇಳಿದ್ದರೂ ಪಾಲನೆಯಾಗುತ್ತಿಲ್ಲ. ಈ ಕುರಿತು ಕಾಂಗ್ರೆಸ್ ಪಕ್ಷ ಗಂಭೀರ ವಿರೋಧ ಮಾಡಿ ಚುನಾವಣೆ ಆಯೋಗಕ್ಕೆ ದೂರು ನೀಡಿದರೂ ಯಾವುದೇ ಕ್ರಮವಾಗುತ್ತಿಲ್ಲ. ವಿರೋಧ ಪಕ್ಷದ ನಾಯಕರು ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿರುವ ಅಧಿಕಾರಿಗಳು ಹೆದರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.