ಸೀಟು ಹಂಚಿಕೆ ಗೊಂದಲದಿಂದ ಬೇಸರವಾಗಿದೆ


Team Udayavani, Mar 30, 2019, 7:39 AM IST

mbpatil

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಸೀಟು ಹಂಚಿಕೆ ಯಾಗಿದ್ದು, ಕೆಲವು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.ಮೈತ್ರಿ ಯಿಂದ ಲೋಕಸಭೆ ಚುನಾವಣೆ  ಯಲ್ಲಿ ಕಾಂಗ್ರೆಸ್‌ಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗುತ್ತಿದೆ ಎಂಬ ಭಾವನೆ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ. ಆದರೂ, ಮೈತ್ರಿ ಧರ್ಮ ಪಾಲನೆಗೆ ಜೆಡಿಎಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಕಾಂಗ್ರೆಸ್‌ನ ಕೆಲವು ನಾಯಕರ ಹೆಗಲಿಗೆ ಬಿದ್ದಿದೆ. ಒಟ್ಟಾರೆ, ಮೈತ್ರಿ ಗೊಂದಲ ಬಗ್ಗೆ ಗೃಹ ಸಚಿವ ಎಂ.ಬಿ. ಪಾಟೀಲ್‌ “ಉದಯವಾಣಿ’ ಯೊಂದಿಗೆ ಮುಕ್ತವಾಗಿ ಮಾತನಾಡಿದ್ದಾರೆ.

ಮೈತ್ರಿ ಸೀಟು ಹಂಚಿಕೆಯಿಂದ ಕಾಂಗ್ರೆಸ್‌ ಕೆಲವು ನಾಯಕರಿಗೆ ಬೇಸರವಾಗಿದೆ ಎನ್ನುವುದು ನಿಜಾನಾ ?
ಸ್ವಾಭಾವಿಕವಾಗಿಯೇ ಆಗಿರುತ್ತದೆ. ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳನ್ನು ಪಡೆದುಕೊಂಡರು. ಅಲ್ಲಿ ಅವರ ಶಕ್ತಿ ಇಲ್ಲ. ಬೆಂಗಳೂರು ಉತ್ತರ ಕ್ಷೇತ್ರದ ಸ್ಥಿತಿ ಏನಾಯಿತು ಎಂದು ಎಲ್ಲರಿಗೂ ಗೊತ್ತಿದೆ. ಜೆಡಿಎಸ್‌ನವರು ಎಂಟು ಕ್ಷೇತ್ರ ಕೇಳಿ ತಾವೂ ತೊಂದರೆಗೆ ಒಳಗಾದರು. ನಮ್ಮನ್ನು ತೊಂದರೆಗೆ ಸಿಲುಕಿಸಿದರು. ಅವರು ಐದಾರು ಕ್ಷೇತ್ರ ಪಡೆದುಕೊಂಡು ಸುಮ್ಮನಾಗಬೇಕಿತ್ತು.

ನಿಮ್ಮ ಸ್ನೇಹಿತ ಅಂಬರೀಶ್‌ ಪತ್ನಿ ಸುಮಲತಾ ಅವರಿಗೆ ಟಿಕೆಟ್‌ ಕೊಡಿಸಲು ನಿಮ್ಮಿಂದ ಆಗಲಿಲ್ವಾ?
ನೋಡಿ ಅಂಬರೀಶ್‌ ನನ್ನ ಆತ್ಮೀಯ ಸ್ನೇಹಿತ, ಸುಮಲತಾ ನನ್ನ ಸಹೋದರಿ ಇದ್ದ ಹಾಗೆ. ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದರೆ, ಸುಮಲತಾ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿತ್ತು. ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಅವರು ಪಕ್ಷೇತರರಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಈಗ ಅದು ಮುಗಿದು ಹೋದ ಅಧ್ಯಾಯ. ಈ ಸಮಯದಲ್ಲಿ ಸುಮಲತಾ ವಿಷಯದಲ್ಲಿ ನಾನು ಬೇರೆ ಏನೂ ಮಾತನಾಡುವುದಿಲ್ಲ.

ರಾಜ್ಯದಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿ ರುವುದರಿಂದ ಕಾಂಗ್ರೆಸ್‌ ಮುಂದಿನ
ದಿನಗಳಲ್ಲಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವ ಅವಕಾಶ ಕಡಿಮೆಯಾಗುತ್ತಿದೆ ಎನ್ನುತ್ತಾರಲ್ಲಾ ?
ವಿಶೇಷವಾಗಿ ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ನೇರ ಸ್ಪರ್ಧೆ ಇದೆ. ಆ ಭಾಗದಲ್ಲಿ ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರು ಬಹಳ ತೊಂದರೆಗೆ
ಒಳಗಾಗುತ್ತಾರೆ. ಆದರೆ, ನಮ್ಮ ಹೈಕಮಾಂಡ್‌ ದೇಶದ ಹಿತದೃಷ್ಟಿಯಿಂದ, ಜಾತ್ಯತೀತ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ದೂರ ಇಡಬೇಕು ಎನ್ನುವ ವಿಶಾಲ ಮನೋಭಾವದಿಂದ ತೆಗೆದುಕೊಂಡ ತೀರ್ಮಾನವಿದು. ಇದರಿಂದ ಸಣ್ಣ, ಪುಟ್ಟ ಸಮಸ್ಯೆಗಳನ್ನು ಮರೆಯಬೇಕಾಗುತ್ತದೆ.

 ಮೈತ್ರಿಯಿಂದ ನಿಮ್ಮ ಜಿಲ್ಲೆಯಲ್ಲಿ ನಿಮಗಿದ್ದ ಅವಕಾಶ ಕೈ ತಪ್ಪಿತು ಅನಿಸಿದೆಯಾ?
ಸ್ವಾಭಾವಿಕವಾಗಿ ಅನಿಸಿದೆ. ಹಿಂದೆ ಎರಡು ಬಾರಿ ನಮ್ಮ ಜಿಲ್ಲೆಯಲ್ಲಿ ಲಂಬಾಣಿ ಸಮುದಾಯಕ್ಕೆ ಸೇರಿದ್ದ ಪ್ರಕಾಶ್‌ ರಾಠೊಡ್‌ ಅವರಿಗೆ ಟಿಕೆಟ್‌ ನೀಡಿದ್ದೆವು. ಹೀಗಾಗಿ, ಮೊದಲೇ ಆಲೋಚನೆ ಮಾಡಿ, ಈ ಬಾರಿ ದಲಿತ ಬಲಗೈ ಸಮುದಾಯಕ್ಕೆ ಸೇರಿದ್ದ ಮಾಜಿ ಶಾಸಕ ರಾಜು ಅಲಗೂರ್‌ ಅವರಿಗೆ ಟಿಕೆಟ್‌ ನೀಡಿದ್ದರೆ, ದಲಿತ, ಲಂಬಾಣಿ, ಲಿಂಗಾಯತ ಕಾಂಬಿನೇಷನ್‌ನಲ್ಲಿ ಗೆಲ್ಲುವ ವಿಶ್ವಾಸ ಇತ್ತು. ಈಗಮೈ ತ್ರಿ ಲೆಕ್ಕಾಚಾರದಲ್ಲಿ ಜೆಡಿಎಸ್‌ಗೆ ಟಿಕೆಟ್‌ ಕೊಟ್ಟಿರು ವುದರಿಂದ ಮೈತ್ರಿ ಧರ್ಮ ಪಾಲನೆ ಮಾಡಿ, ಜೆಡಿಎಸ್‌ ಅಭ್ಯರ್ಥಿ ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ.

 ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ ಪ್ರಭಾವ ಇಲ್ಲದಿದ್ದರೂ, ಅಲ್ಲಿ ಕ್ಷೇತ್ರ ಕೊಟ್ಟಿರುವುದು ಸರೀನಾ ?
ವಿಜಯಪುರ ಜಿಲ್ಲೆಯಲ್ಲಿ ಅವರ ಇಬ್ಬರು ಶಾಸಕರಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಹೀಗಾಗಿ, ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಪಡೆದಿದ್ದಾರೆ. ಆದರೆ, ಲೋಕಸಭಾ ಕ್ಷೇತ್ರದಲ್ಲಿ ಅವರಿಗಿಂತ ನಾವು ಮೂರೂವರೇ ಲಕ್ಷ ಹೆಚ್ಚು ಮತ ಪಡೆದಿದ್ದೇವೆ. ಈಗ ಸೀಟು ಕೊಟ್ಟಿದ್ದಾರೆ. ಏನು ಮಾಡಲೂ ಆಗುವುದಿಲ್ಲ. ಈಗ ನಾನು ಗೊಂದಲ ಸೃಷ್ಟಿಸಲು ಬಯಸುವುದಿಲ್ಲ.

ಕರ್ನಾಟಕದಲ್ಲಿ ಎಷ್ಟು ಸ್ಥಾನ ಗೆಲ್ಲುವ ಸಾಧ್ಯತೆ ಇದೆ?
ಜೆಡಿಎಸ್‌-ಕಾಂಗ್ರೆಸ್‌ ಸೇರಿ 18 ರಿಂದ 20 ಸ್ಥಾನ ಗೆಲ್ಲುವ ವಿಶ್ವಾಸ ಇದೆ

ಐಟಿ ದಾಳಿ ಎಂದ ಕೂಡಲೇ ಮೈತ್ರಿ ಪಕ್ಷಗಳ ನಾಯಕರು ಏಕೆ ಭಯ ಬೀಳುತ್ತಾರೆ ?
ಯಡಿಯೂರಪ್ಪ ಅವರು ಆಪರೇಷನ್‌ ಕಮಲದ ಹೆಸರಿನಲ್ಲಿ ಶಾಸಕರ ಖರೀದಿಗೆ 30 ಕೋಟಿ ಕೊಡುವುದಾಗಿ ಹೇಳಿದ್ದರು. ಅವರ ಮನೆಗಳ ಮೇಲೆ ಏಕೆ ದಾಳಿ ಮಾಡುವುದಿಲ್ಲ. ಶಿವನ‌ಗೌಡ ನಾಯಕ, ಶ್ರೀರಾಮುಲು, ಜನಾರ್ದನ ರೆಡ್ಡಿ ಅವರ ಮನೆಗಳ
ಮೇಲೆ ಏಕೆ ದಾಳಿ ಮಾಡುವುದಿಲ್ಲ. ಚುನಾವಣಾ ಖರ್ಚಿಗೆ 10 ಕೋಟಿ ಕೊಡುವುದಾಗಿ ಯಡಿಯೂರಪ್ಪ ಬಹಿರಂಗವಾಗಿಯೇ ಹೇಳಿದ್ದರು. ವಿಧಾನಸಭೆ ಅಭ್ಯರ್ಥಿಗೆ
ಚುನಾವಣಾ ವೆಚ್ಚ 25 ಲಕ್ಷ ಮಾತ್ರ ಇರುವುದು. 10 ಕೋಟಿಖರ್ಚು  ಮಾಡುತ್ತಾರೆ ಎಂದರೆ ಏನು ಅರ್ಥ?ಯಡಿಯೂರಪ್ಪ ಅವರ ಮನೆಯ ಮೇಲೆ ದಾಳಿ ಮಾಡಿ, ಮೈತ್ರಿ ಪಕ್ಷಗಳ ನಾಯಕರ ಮನೆಗಳ ಮೇಲೂ ದಾಳಿ ಮಾಡಿದ್ದರೆ ನಾವು ಒಪ್ಪುತ್ತಿದ್ದೆವು.

ಸಂದರ್ಶನ: ಶಂಕರ ಪಾಗೋಜಿ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.