ಗೌತಮ್ ಗಂಭೀರ್ ಬಳಿ ಎರಡು ವೋಟರ್ ಐಡಿ!
Team Udayavani, Apr 27, 2019, 12:28 PM IST
ಪೂರ್ವ ದಿಲ್ಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ 2 ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ಆರೋಪಿಸಿದೆ. ಅಷ್ಟೇ ಅಲ್ಲ, ಈ ಕುರಿತು ಗಂಭೀರ್ ವಿರುದ್ಧ ತೀಸ್ ಹಜಾರಿ ಕೋರ್ಟ್ನಲ್ಲಿ ಕ್ರಿಮಿನಲ್ ದೂರನ್ನೂ ದಾಖಲಿಸಲಾಗಿದೆ.
ಗಂಭೀರ್ರನ್ನು ಕೂಡಲೇ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ಆಪ್ ಅಭ್ಯರ್ಥಿ ಆತಿಷಿ ಕೋರಿದ್ದಾರೆ. ಗಂಭೀರ್ ಅವರು ರಾಜೇಂದ್ರ ನಗರ ಮತ್ತು ಕರೋಲ್ ಬಾಗ್ ಎರಡೂ ಕಡೆ ಎರಡು ವೋಟರ್ ಐಡಿ ಹೊಂದಿದ್ದು, ಈ ಅಪರಾಧಕ್ಕೆ ಒಂದು ವರ್ಷ ಜೈಲು ಶಿಕ್ಷೆಯೂ ಇದೆ ಎಂದಿದ್ದಾರೆ ಆತಿಷಿ. ಈ ಅರ್ಜಿಯ ವಿಚಾರಣೆಯನ್ನು ಮೇ 1ರಂದು ಕೈಗೆತ್ತಿಕೊಳ್ಳುವುದಾಗಿ ದಿಲ್ಲಿ ಕೋರ್ಟ್ ಹೇಳಿದೆ.ಚುನಾವಣ ಆಯೋಗದ ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ನಲ್ಲಿ ಕೂಡ ಗಂಭೀರ್ 2 ಕಡೆ ಹೆಸರು ನೋಂದಾಯಿಸಿರು ವುದು ಉಲ್ಲೇಖವಾಗಿದೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.