ಕೈ ಮುಖಂಡರು ಕರೆದರೆ ಪ್ರಚಾರಕ್ಕೆ ಗೌಡರು ಸಿದ್ಧ
Team Udayavani, Mar 15, 2019, 2:01 AM IST
ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ಮುಖಂಡರು ಕರೆದರೆ ಖಂಡಿತವಾಗಿಯೂ ಹೋಗುತ್ತೇನೆ ಎಂದುಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ನಡೆದ ಶಾಸಕರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಎಂಟು ಕ್ಷೇತ್ರಗಳ ಪೈಕಿ ಮಂಡ್ಯ, ಶಿವಮೊಗ್ಗ ಮತ್ತು ಹಾಸನ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮವಾಗಿದೆ. ಇನ್ನೂ ಐದು ಕ್ಷೇತ್ರಗಳಲ್ಲಿ ಆಗಿಲ್ಲ. ಆ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಮಾಡುವ ಮುನ್ನ ಕಾಂಗ್ರೆಸ್ ನಾಯಕರ ಜತೆಯೂ ಚರ್ಚಿಸಲಾಗುವುದು ಎಂದರು. ಲೋಕಸಭೆ ಚುನಾವಣೆ ನಾವು ಕಾಂಗ್ರೆಸ್ ಬೆಂಬಲದೊಂದಿಗೆ ಎದುರಿಸಬೇಕಾಗಿದೆ. ಹೀಗಾಗಿ, ನಮಗೆ ಬಿಟ್ಟುಕೊಟ್ಟಿರುವ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ನವರಿಗೆ ಒಪ್ಪಿಗೆಯಾಗುವ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಲಾಗುವುದು ಎಂದು ತಿಳಿಸಿದರು. ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಈ ಚುನಾವಣೆ ನಮಗೆ ಸತ್ವ ಪರೀಕ್ಷೆಯಾಗಿದೆ. ನೀವು ಎಷ್ಟು ಸ್ಥಾನ ಗೆಲ್ಲಿಸುತ್ತೀರೋ ಅಷ್ಟು ಸರ್ಕಾರವನ್ನೂ ಭದ್ರಗೊಳಿಸುತ್ತೀರಿ. ಇದರಿಂದ ಸಮ್ಮಿಶ್ರ ಸರ್ಕಾರ ಮುಂದುವರಿಸಲು ಅನುಕೂಲವಾಗಲಿದೆ. ಸಮ್ಮಿಶ್ರ ಸರ್ಕಾರದಲ್ಲಿ ಸೀಮಿತ ಅಧಿಕಾರವಿದೆ. ಕಾಂಗ್ರೆಸ್ ಬಿಟ್ಟುಕೊಟ್ಟ ನಿಗಮ ಮಂಡಳಿ ಸ್ಥಾನಗಳನ್ನು ತುಂಬಿದ್ದೇವೆ ಎಂದರು.
ಮಾತಿನ ಚಕಮಕಿ: ಸಭೆಲ್ಲಿ ದೇವೇಗೌಡರು ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬ ವಿಚಾರದಲ್ಲಿ ಬೆಂ.ಉತ್ತರ ಹಾಗೂ ತುಮಕೂರುಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ತುಮಕೂರಿನಿಂದ ಸ್ಪರ್ಧೆ ಮಾಡಿದರೆ 3.5 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲಾಗುವುದು ಎಂದು ಆ ಭಾಗದವರು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.