ಹೆಲಿಕಾಪ್ಟರ್ ಬಳಕೆ: ಜೆಡಿಎಸ್ ಮುಂದು
Team Udayavani, Apr 14, 2019, 3:32 AM IST
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಲಿಕಾಪ್ಟರ್‌ಗಳ “ಕೃತಕ ಅಭಾವ’ ಸೃಷ್ಟಿಸುತ್ತಿದೆ ಎಂದು ಇತ್ತೀಚಿಗಷ್ಟೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆರೋಪಿಸಿದ್ದರು. ಆದರೆ, ಚುನಾವಣಾ ಆಯೋಗದ ಮಾಹಿತಿಯಂತೆ ಕರ್ನಾಟಕದಲ್ಲಿ ಹೆಲಿಕಾಪ್ಟರ್ ಬಳಕೆಯಲ್ಲಿ ಜೆಡಿಎಸ್ ಪಕ್ಷವೇ ಮುಂದಿದೆ.
ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್ ಬಳಸುವ ವಿಚಾರದಲ್ಲಿ ಜೆಡಿಎಸ್ ಪಕ್ಷ, ಬಿಜೆಪಿ ಹಾಗೂ ಕಾಂಗ್ರೆಸ್‌ನ್ನು ಹಿಂದಿಕ್ಕಿದೆ. ಜೆಡಿಎಸ್, 16 ಹೆಲಿಕಾಪ್ಟರ್‌ಗಳ ಬಳಕೆಗೆ ಅನುಮತಿ ಪಡೆದುಕೊಂಡಿದ್ದರೆ, ಬಿಜೆಪಿ 13 ಹಾಗೂ ಕಾಂಗ್ರೆಸ್ 6 ಹೆಲಿಕಾಪ್ಟರ್‌ಗಳ ಬಳಕೆಗೆ ಅನುಮತಿ ಪಡೆದುಕೊಂಡಿದೆ.
ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಈ ಮಾಹಿತಿ ನೀಡಿದ್ದಾರೆ. ಎಲ್ಲ ಪಕ್ಷಗಳಿಂದ ಹೆಲಿಕಾಪ್ಟರ್ ಬಳಕೆಗೆ ಅನುಮತಿ ಕೋರಿ ಒಟ್ಟು 49 ಪ್ರಸ್ತಾವನೆಗಳು ಬಂದಿದ್ದು, ಅದರಲ್ಲಿ ಈವರೆಗೆ 40 ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದರು.
ಉಳಿದಂತೆ ಚುನಾವಣಾ ಪ್ರಚಾರದ ಉದ್ದೇಶಕ್ಕಾಗಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರರಿಂದ ವಾಹನ ಪರವಾನಿಗೆ, ಚುನಾವಣಾ ಕಚೇರಿ ಪ್ರಾರಂಭ, ಸಾರ್ವಜನಿಕ ಸಭೆ ಹಾಗೂ ಧ್ವನಿವರ್ಧಕ ಬಳಕೆ, ಬೀದಿ ಸಭೆ ಹಾಗೂ ಧ್ವನಿವರ್ಧಕ ಬಳಕೆ, ಮೆರವಣಿಗೆ, ರೋಡ್ ಶೋ, ಅಂತರ್‌ಜಿಲ್ಲೆಗಳಲ್ಲಿ ವಾಹನ ಸಂಚಾರ ಮತ್ತಿತರರ ವಿಷಯಗಳ ಪರವಾನಿಗೆಗೆ ಒಟ್ಟು 6,900 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಈ ಪೈಕಿ ಬಿಜೆಪಿ ಅತಿ ಹೆಚ್ಚು 2,719, ಕಾಂಗ್ರೆಸ್‌ನಿಂದ 1,893, ಜೆಡಿಎಸ್‌ನಿಂದ 800, ಬಿಎಸ್‌ಪಿಯಿಂದ 235, ಸಿಪಿಐನಿಂದ 30, ಸಿಪಿಎಂನಿಂದ 61 ಹಾಗೂ ಪಕ್ಷೇತರರಿಂದ 349 ವಿವಿಧ ಅನುಮತಿ ಕೇಳಿದ ಮನವಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.