ಇದು ಒಕ್ಕಲಿಗರ ಸಂಘದ ಚುನಾವಣೆಯಲ್ಲ

ನಾನು ರಾಜ್ಯದ ಸಮ್ಮಿಶ್ರ ಸರ್ಕಾರದ ವಿರೋಧಿ. ಕಾಂಗ್ರೆಸ್‌, ಜೆಡಿಎಸ್‌ ವಿರೋಧಿ: ಎಸ್‌.ಎಂ.ಕೃಷ್ಣ

Team Udayavani, Apr 4, 2019, 6:00 AM IST

SM-Krishna-545

ಬೆಂಗಳೂರು: ಮಂಡ್ಯದಲ್ಲಿ ನಡೆದಿರುವುದು ಒಕ್ಕಲಿಗರ ಸಂಘದ ಚುನಾವಣೆಯಲ್ಲ. ದೇಶದ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಮಾರ್ಮಿಕವಾಗಿ ಹೇಳಿದ್ದಾರೆ.

ಬೆಂಗಳೂರು ಪ್ರಸ್‌ಕ್ಲಬ್‌ ಹಾಗೂ ವರದಿಗಾರರ ಕೂಟದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಹಿಂದೆ ಮಂಡ್ಯದಲ್ಲಿ ದೇವೇಗೌಡರು ಒಕ್ಕಲಿಗರ ನಾಯಕತ್ವ ವಹಿಸಿಕೊಳ್ಳಲು ಮುಂದಾದಾಗ ನೀವೇ ಸಹಕಾರ ನೀಡಿದ್ದೀರಿ. ಈಗ ಜಿ.ಮಾದೇಗೌಡರ ಸಹಿತ ಎಲ್ಲರೂ ದೇವೇಗೌಡರ ಹಿಂದಿರುವಾಗ ನೀವು ಟೀಕಿಸುತ್ತಿರುವುದು ವಿಪರ್ಯಾಸವಲ್ಲವೇ ಎಂಬ ಪ್ರಶ್ನೆಗೆ, ಮಂಡ್ಯದಲ್ಲಿ ನಡೆದಿರುವುದು ಒಕ್ಕಲಿಗರ ಸಂಘದ ಚುನಾವಣೆಯಲ್ಲ. ದೇಶದ ಚುನಾವಣೆ. ಇದನ್ನು ನಾವು ಭಾರತೀಯರಾಗಿ ನೋಡಬೇಕು. ಅದರಂತೆ ನೋಡುತ್ತಿದ್ದೇನೆ. ಇದರಲ್ಲಿ ವಿಪರ್ಯಾಸವೇನೂ ಇಲ್ಲ ಎಂದು ಸಮರ್ಥಿಸಿಕೊಂಡರು.

ಮಂಡ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಮ್ಮ ನಿಲುವೇನು ಎಂಬ ಪ್ರಶ್ನೆಗೆ, ನಾನು ರಾಜ್ಯದ ಸಮ್ಮಿಶ್ರ ಸರ್ಕಾರದ ವಿರೋಧಿ. ಕಾಂಗ್ರೆಸ್‌ ವಿರೋಧಿ, ಜೆಡಿಎಸ್‌ ವಿರೋಧಿ. ಹೀಗಿರುವಾಗ, ಮಂಡ್ಯದಲ್ಲಿ ನಾನು ಯಾವ ನಿಲುವು ತಳೆಯಬಹುದು ಎಂಬುದನ್ನು ನೀವೇ ಯೋಚಿಸಿ ಎಂದರು.

ದೇವೇಗೌಡರು ಹಾಗೂ ಅವರ ಇಬ್ಬರು ಮೊಮ್ಮಕ್ಕಳ ಸ್ಪರ್ಧೆ ಬಗ್ಗೆ ಏನು ಹೇಳುವಿರಿ ಎಂದಾಗ, ವಂಶಾಡಳಿತದ ಬಗ್ಗೆ ಹಿಂದಿನಿಂದಲೂ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದೇನೆ. ಇದೀಗ ಕರ್ನಾಟಕದಲ್ಲೂ ಇದು ಆವರಿಸುತ್ತಿದೆ. ನಾಳೆ ಮಂಡ್ಯಕ್ಕೆ ಹೋಗುತ್ತಿದ್ದು, ಅಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದರು.

ಹಿಂಬಾಗಿಲ ರಾಜಕಾರಣ ಮಾಡುತ್ತಿದ್ದರು ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅದು 1999. ಸ್ವಲ್ಪ ಹಿಂದಕ್ಕೆ ವಾಪಸ್‌ ಹೋಗೋಣ. ಜನತಾದಳ ಸರ್ಕಾರವಿದ್ದಾಗ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ರಾಜ್ಯಾದ್ಯಂತ ಓಡಾಡಿ 132 ಕಾಂಗ್ರೆಸ್‌ ಶಾಸಕರನ್ನು ಹೆಗಲ ಮೇಲೆ ಹೊತ್ತುಕೊಂಡು ವಿಧಾನಸಭೆಯನ್ನು ರಾಜಾರೋಷವಾಗಿ ಪ್ರವೇಶಿಸಿದೆ. ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಮುಖ್ಯಮಂತ್ರಿಯಾದವರದು ಹಿಂಬಾಗಿಲ ರಾಜಕಾರಣ. ಆಗ ಅವರ ಪ್ರವೃತ್ತಿ, ಅವಸರ ಏನಿತ್ತೋ ಗೊತ್ತಿಲ್ಲ. ಆದರೆ, ಚರಿತ್ರೆಯನ್ನು ಅಳಿಸಲು ಸಾಧ್ಯವಿಲ್ಲ. ನಾನು ಹೇಳಿದ ಚರಿತ್ರೆಯೂ ಇದೆ.

ಸಮಾಜವಾದಿ, ಜೆಡಿಎಸ್‌ನ ನಮ್ಮ ಸ್ನೇಹಿತರು ತುಳಿದ ದಾರಿಯನ್ನು ನೋಡಿದ್ದೇನೆ. ಅಂತಹ ಕಳಂಕರಹಿತ ಚಾರಿತ್ರ್ಯ ಹೊಂದಿದವರು ನನಗೆ ಬುದ್ದಿ ಹೇಳುವಾಗ ನಾನು ಕೇಳಿಸಿಕೊಳ್ಳಬೇಕಲ್ಲವೇ ಎಂದು ಮಾರ್ಮಿಕವಾಗಿ ನುಡಿದರು.

ನನ್ನನ್ನು ಕರ್ನಾಟಕದಿಂದ
ಆಚೆಗಿಡುವ ಹುನ್ನಾರ ನಡೆದಿತ್ತು:
2004ರಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಸಂದರ್ಭ ಎದುರಾದಾಗ ಬಹುಪಾಲು ಶಾಸಕರು ನಾನೇ ಮುಖ್ಯಮಂತ್ರಿಯಾಗಬೇಕು ಎಂದು ಅಭಿಪ್ರಾಯಪಟ್ಟರು. ಆದರೆ, ಜೆಡಿಎಸ್‌ನವರು ಎಸ್‌.ಎಂ.ಕೃಷ್ಣ ಅವರನ್ನು ಬಿಟ್ಟು ಯಾರನ್ನಾದರೂ ಮುಖ್ಯಮಂತ್ರಿ ಮಾಡಿ ಎಂದಿದ್ದರು. ನಾನು ಚೀನಾ ಪ್ರವಾಸದಲ್ಲಿದ್ದು, ಹಿಂದಿರುಗುವವರೆಗೆ ಕಾಯುವಂತೆ ಹೇಳಿದರೂ ಶಿವರಾಜ್‌ ಪಾಟೀಲ್‌ ಅವರು ನನ್ನನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಿಸಿರುವುದನ್ನು ಘೋಷಿಸುವುದಾಗಿ ಹೇಳಿದರು. ನನ್ನನ್ನು ಕರ್ನಾಟಕದಿಂದ ಆಚೆಗಿಡುವ ಹುನ್ನಾರ ನಡೆದಿತ್ತು. ಒಂದೊಮ್ಮೆ ಆ ಸಂದರ್ಭದಲ್ಲಿ ಮುಂದಿನ ಐದು ವರ್ಷ ಅದೇ ವೇಗದಲ್ಲಿ ಬೆಂಗಳೂರು ಬೆಳೆದಿದ್ದರೆ ಇನ್ನಷ್ಟು ಅಭಿವೃದ್ಧಿ ಕಾಣುತ್ತಿತ್ತುಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಪತನ:
ಲೋಕಸಭಾ ಚುನಾವಣಾ ಫ‌ಲಿತಾಂಶ ಹೊರಬಿದ್ದ ಬಳಿಕ ರಾಜ್ಯದ ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಚುನಾವಣಾ ಪೂರ್ವ ಮೈತ್ರಿಯಿದ್ದಾಗಷ್ಟೇ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ಸಾಧ್ಯ. ಆದರೆ, ಈ ಮೈತ್ರಿ ಸರ್ಕಾರದಲ್ಲಿ ಜೆಡಿಎಸ್‌ಗೆ ಬೇಷರತ್‌ ಬೆಂಬಲ ನೀಡುವುದರ ಜತೆಗೆ 5 ವರ್ಷ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಮಾಧ್ಯಮಗಳ ಮುಂದೆ ಪಾರದರ್ಶಕವಾಗಿ ಹೇಳಿದ್ದು ವಿಶೇಷ. ಆದರೆ, ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದರು.

ಕಾಂಗ್ರೆಸ್‌ ಈಗ ಆಸ್ತಿಯಾಗಿದೆ:
ಅನುವಂಶಿಕ ರಾಜಕಾರಣವನ್ನು ನಾನು ವಿರೋಧಿಸಿಕೊಂಡೇ ಬಂದಿದ್ದೇನೆ. ಆದರೆ, ಕಾಂಗ್ರೆಸ್‌ ಎಂಬುದು ಒಂದು ತಲೆಮಾರಿನ ನಂತರ ಮತ್ತೂಂದು ತಲೆಮಾರಿಗೆ ಬರೆದುಕೊಟ್ಟ ಆಸ್ತಿಯಾಗಿದೆ. ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರಿಗೆ ಅರ್ಹತೆ ಇತ್ತು. ಹಾಗಾಗಿ, ಅವರೊಂದಿಗೆ ಹೋಗಲು ಮುಜುಗರವಿರಲಿಲ್ಲ. ಆದರೆ, ಇತ್ತೀಚಿನ ಬೆಳವಣಿಗೆ ಬಳಿಕ ಅಲ್ಲಿ ಉಳಿಯಲು ಸಾಧ್ಯವಿಲ್ಲವೆಂದು ಅರಿವಾಗಿ, 43 ವರ್ಷವಿದ್ದ ಪಕ್ಷವನ್ನು ಸಂಕಟದಿಂದಲೇ ಕಳೆದುಕೊಂಡೆ ಎಂದರು.

ನನ್ನ ಕುಟುಂಬದಿಂದ ಮುಂದೆ ಯಾರಾದರೂ ರಾಜಕೀಯ ಪ್ರವೇಶಿಸುತ್ತಾರೋ ಗೊತ್ತಿಲ್ಲ. ಅದನ್ನು ಅವರಿಗೆ ಬಿಡುತ್ತೇನೆ. ಅರ್ಹತೆ ಇದ್ದವರನ್ನು ತಡೆಯಲು ಸಾಧ್ಯವಿಲ್ಲ. ನನ್ನ ಸೋದರನ ಪುತ್ರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷನಾದರೂ ಅವರು ನನ್ನ ಹೆಸರು ಬಳಸಿಕೊಂಡು ಬೆಳೆಯಲು ಪ್ರಯತ್ನಿಸಲಿಲ್ಲ. ರಾಹುಲ್‌ ವಯನಾಡಿನಿಂದ ಸ್ಪರ್ಧಿಸುವುದು ತಪ್ಪಲ್ಲ. ಈ ಹಿಂದೆ ಸೋನಿಯಾ ಗಾಂಧಿಯವರು ಬಳ್ಳಾರಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಮೂರು ಕ್ಷೇತ್ರದಲ್ಲಿ ನಿಲ್ಲಲೂ ಅವಕಾಶವಿದೆ. ನಾನು ಬಿಜೆಪಿ ಸೇರಿದ ಮೇಲೆಯೇ ನನ್ನ ಅಳಿಯ ಮೇಲೆ ಐಟಿ ದಾಳಿಯಾಗಿತ್ತುಎಂದರು.

ಮೋದಿ ಎಂದರೆ ಬಿಜೆಪಿ:
ಬಿಜೆಪಿ ಸೇರಲು ಪ್ರಧಾನಿ ನರೇಂದ್ರ ಮೋದಿಯವರು ಕಾರಣ ಎಂಬುದನ್ನು ಮುಚ್ಚುಮರೆಯಿಲ್ಲದೆ ಹೇಳುತ್ತೇನೆ. ಅವರದು ಅನುವಂಶಿಕ ರಾಜಕಾರಣವಲ್ಲ. ಯಾವುದೇ ಕುರ್ಚಿ ಮೇಲೆ ಅವರ ಕರ್ಚಿಫ್ ಇಲ್ಲ. ಐದು ವರ್ಷ ಪ್ರಧಾನಿಯಾಗಿ ಕಲ್ಮಶರಹಿತ, ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದಾರೆ. ಇನ್ನೂ ಐದು ವರ್ಷ ಅವರಿಗೆ ನಾಯಕತ್ವ ನೀಡಬೇಕು. ಹಾಗಾಗಿ, ನನ್ನ ಅಳಿಲು ಸೇವೆ ಸಲ್ಲಿಸಲು ನಿರ್ಧರಿಸಿದ್ದೇನೆ. ಈಗ ಪ್ರಧಾನಿ ಮೋದಿ ಎಂದರೆ ಬಿಜೆಪಿ. ಬಿಜೆಪಿ ಎಂದರೆ ಮೋದಿ. ಎರಡನ್ನೂ ವಿಂಗಡಿಸಲಾಗದಷ್ಟು ಒಂದರಲ್ಲೊಂದು ಮುಳುಗಿ ಹೋಗಿವೆ ಎಂದು ಹೇಳಿದರು.

ಟಾಪ್ ನ್ಯೂಸ್

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.