ನಾನು ಮಂಡ್ಯಕ್ಕೆ ಸ್ವಾರ್ಥಕ್ಕಾಗಿ ಬಂದಿಲ್ಲ; ಗುಲಾಮನಾಗಿ ದುಡಿಯುತ್ತೇನೆ
Team Udayavani, Mar 14, 2019, 12:57 PM IST
ಮಂಡ್ಯ: ನಾನು ಮಂಡ್ಯಕ್ಕೆ ಸ್ವಾರ್ಥಕ್ಕಾಗಿ ಬಂದಿಲ್ಲ, ನಿಮ್ಮ ಗುಲಾಮನಾಗಿ ದುಡಿಯಲು ಬಂದಿದ್ದೇನೆ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಗುರುವಾರ ಮಂಡ್ಯದಲ್ಲಿ ನಡೆದ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ನಿಖಿಲ್, ಈ ಜಿಲ್ಲೆಯ ಜನ ನನ್ನ ತಂದೆ ಮುಖ್ಯಮಂತ್ರಿಯಾಗಲು ಕಾರಣಕರ್ತರಾಗಿದ್ದೀರಿ. ಇಲ್ಲಿ ಏಳಕ್ಕೆ ಏಳೂ ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದೀರಿ, ಹಾಗೆಯೇ ನನ್ನನ್ನೂ ನೀವು ಗೆಲ್ಲಿಸಿ ಕೊಡಬೇಕು ಎಂದು ಮನವಿ ಮಾಡಿದರು.
ನನ್ನ ತಂದೆ ಯಾವಾಗಲೂ ಹೇಳುತ್ತಾರೆ ಎಳೂ ಜನ್ಮ ಎತ್ತಿ ಬಂದರೂ ನಿಮ್ಮ ಋಣವನ್ನು ತೀರಿಸಲು ಸಾಧ್ಯವಿಲ್ಲ ಎಂದು. ನಾನು ಸ್ವಾರ್ಥಕ್ಕಾಗಿ ಮಂಡ್ಯಕ್ಕೆ ಬಂದಿಲ್ಲ. ಚಿತ್ರರಂಗದಲ್ಲಿ ತಕ್ಕ ಮಟ್ಟಿನ ಯಶಸ್ಸು ಪಡೆದಿದ್ದೆ. ನಾನು ಯಾವಾಗಲೂ ಯೋಚನೆ ಮಾಡುತ್ತೇನೆ, ಇಂತಹ ಕುಟುಂಬದಲ್ಲಿ ಭಗವಂತ ನನ್ನನ್ನು ಹುಟ್ಟಿಸಿದ್ದಾನೆ ಯಾಕೆ ಎಂದು, ಅದು ನಿಮ್ಮಂತವರ ಸೇವೆ ಮಾಡುವ ಸಲುವಾಗಿ, ನನಗೆ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು.
ಗೋ ಬ್ಯಾಕ್ ನಿಖಿಲ್ ಎನ್ನುತ್ತಿದ್ದಾರೆ. ನಾನು ಕೊನೆಯ ಉಸಿರು ಇರುವವರೆಗೆ ನಿಮ್ಮ ಗುಲಾಮ ನಾಗಿ ಸೇವೆ ಮಾಡುತ್ತೇನೆ.ಕೆಲವರು ಗೋ ಬ್ಯಾಕ್ ನಿಖಿಲ್ ಎನ್ನುತ್ತಿದ್ದಾರೆ. ನಾನು ಹಿಂದಕ್ಕೆ ಹೋಗಬೇಕಾ?ನಿಮ್ಮೊಂದಿಗೆ ಮುಂದಕ್ಕೆ ಸಾಗಬೇಕಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?
Thrissur: ಹೊಸ ವರ್ಷಕ್ಕೆ ವಿಶ್ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.