ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಹೆಚ್ಚಿದ ಪೈಪೋಟಿ 


Team Udayavani, Mar 12, 2019, 12:30 AM IST

congress-700.jpg

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ದಿನ ನಿಗದಿಯಾಗಿದ್ದು, ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ಒಂದು ಡಜನ್‌ನಷ್ಟು ಆಕಾಂಕ್ಷಿಗಳು, ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ. ಆದರೆ, ಈ ಬಾರಿಯ ಕಾಂಗ್ರೆಸ್‌ ಟಿಕೆಟ್‌ ಮಹಿಳೆಯರಿಗೆ ಸಿಗುತ್ತಾ ಇಲ್ಲವೋ ಎಂಬ ಕುತೂಹಲ ತೀವ್ರಗೊಂಡಿದೆ. ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಅಂತಿಮವಾಗಿ ಮೂವರ ಹೆಸರನ್ನು ಪಕ್ಷದ ವರಿಷ್ಠರು ಪರಿಗಣಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಟಿಕೆಟ್‌ ಸಾಧ್ಯತೆಗೆ ಕೆಲವರು ಕಾಯುತ್ತಿದ್ದಾರೆ.

ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ, ಉಪಾಧ್ಯಕ್ಷ ಶಿವಾನಂದ ಉದಪುಡಿ, ಕೆಪಿಸಿಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ, ಜಿಪಂ ಸದಸ್ಯರಾದ ಬಾಯಕ್ಕ ಮೇಟಿ, ಬಸವರಾಜ ಖೋತ, ಹೈಕೋರ್ಟ್‌ ವಕೀಲ ಎಚ್‌.ಬಿ. ನೀರಲಕೇರಿ, ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷ ಶಿವಾನಂದ ನಿಂಗನೂರ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ಸೌದಾಗರ, ಕಾಂಗ್ರೆಸ್‌ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರಕ್ಷಿತಾ ಈಟಿ ಸೇರಿದಂತೆ ಡಜನ್‌ ಆಕಾಂಕ್ಷಿಗಳು, ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.

ನಾಲ್ವರಲ್ಲಿ ಯಾರಿಗೆ ಟಿಕೆಟ್‌?: ಮೂಲಗಳ ಪ್ರಕಾರ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಶಿವಾನಂದ ಉದಪುಡಿ, ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹಾಗೂ ಮಾಜಿ ಸಂಸದ-ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ, ಕೆಪಿಸಿಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ ಹೆಸರು ಮುಂಚೂಣಿಯಲ್ಲಿವೆ.  ಕೆಪಿಸಿಸಿ ವಲಯದಲ್ಲಿ ಜಿ.ಪಂ. ಸದಸ್ಯೆ, ಮಾಜಿ ಸಚಿವ ಎಚ್‌.ವೈ. ಮೇಟಿ ಪುತ್ರಿ ಬಾಯಕ್ಕ ಮೇಟಿ ಅವರ ಹೆಸರೂ ಓಡಾಡುತ್ತಿದೆ. ಆದರೆ, ಶಿವಾನಂದ ಉದಪುಡಿ, ಅಜಯಕುಮಾರ ಸರನಾಯಕ, ವೀಣಾ ಕಾಶಪ್ಪನವರ ಮತ್ತು ಬಸವಪ್ರಭು ಸರನಾಡಗೌಡ ಸೇರಿ ನಾಲ್ವರಲ್ಲಿ ಒಬ್ಬರಿಗೆ ಟಿಕೆಟ್‌ ಖಚಿತ  ಎನ್ನಲಾಗಿದೆ.
ಉದಪುಡಿ ಪರ ಸಿದ್ದು-ಮೇಟಿ ಬ್ಯಾಟಿಂಗ್‌: ಶಿವಾನಂದ ಉದಪುಡಿ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್‌.ವೈ. ಮೇಟಿ ಬ್ಯಾಟಿಂಗ್‌ ಶುರು ಮಾಡಿದ್ದಾರೆ ಎನ್ನಲಾಗಿದೆ.

2015ರಲ್ಲಿ ನಡೆದ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿ, ಬಳಿಕ ಕಾಂಗ್ರೆಸ್‌ಗೆ ಬೆಂಬಲ ನೀಡಿ, ಉಪಾಧ್ಯಕ್ಷರೂ ಆಗಿರುವ ಶಿವಾನಂದ ಉದಪುಡಿಗೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ದೊರೆಯಲಿದೆ ಎಂಬ ಮಾತು ದಟ್ಟವಾಗಿದೆ. ಆದರೆ, ಬಿಜೆಪಿಯ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಲು, ಆ ಪಕ್ಷದ ಅಭ್ಯರ್ಥಿಯ ಸಮಾಜಕ್ಕೇ ಸೇರಿದ ನಾಯಕರಿಗೆ ಕಾಂಗ್ರೆಸ್‌ ಟಿಕೆಟ್‌ ಕೊಟ್ಟರೆ ಸೂಕ್ತ ಎಂಬ ಅಭಿಪ್ರಾಯ ಕೆಲವರು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದು-ಈಶ್ವರಪ್ಪರಿಗೆ ಪ್ರತಿಷ್ಠೆ :  ಸತತ 3 ಬಾರಿ ಗೆದ್ದು, ಬಿಜೆಪಿ ಭದ್ರಕೋಟೆಯಂತಿರುವ ಬಾಗಲಕೋಟೆ ಲೋಕಸಭೆ ಕ್ಷೇತ್ರವನ್ನು ಈ ಬಾರಿ ಗೆಲ್ಲಲೇಬೇಕೆಂಬ ಪಣವನ್ನು ಸಿದ್ದರಾಮಯ್ಯ ತೊಟ್ಟಿದ್ದಾರೆ. ಯಾರಿಗೆ ಟಿಕೆಟ್‌ ಕೊಡಬೇಕೆಂದು ಒಮ್ಮತದಿಂದ ಹೇಳಿ, ಅವರಿಗೇ ಟಿಕೆಟ್‌ ಕೊಡಿಸುತ್ತೇನೆ. ಯಾವುದೇ ಕಾರಣಕ್ಕೂ, ಕ್ಷೇತ್ರದಲ್ಲಿ ಕಾಂಗ್ರೆಸ್‌ ಸೋಲಬಾರದು ಎಂದು ಜಿಲ್ಲಾ ನಾಯಕರಿಗೆ ಫರ್ಮಾನು ಹೊರಡಿಸಿದ್ದಾರೆ.

ಇನ್ನೊಂದೆಡೆ ಬಿಜೆಪಿ ವಶದಿಂದ ಕ್ಷೇತ್ರ ಹೋಗಬಾರದು. ಬಾದಾಮಿಯಲ್ಲಿ ಸಿದ್ದರಾಮಯ್ಯ ಶಾಸಕರಾಗಿರುವ ಕಾರಣ, ಅವರು ಲಾಭ ಪಡೆಯಬಾರದು,  ಕುರುಬ ಮತಗಳನ್ನೂ ಸೆಳೆಯಲು ವ್ಯವಸ್ಥಿತ ಸಂಘಟನೆ ಮಾಡಿಕೊಳ್ಳಿ ಎಂದು ನಿರ್ದೇಶನ ನೀಡಿ, ಕೆ.ಎಸ್‌. ಈಶ್ವರಪ್ಪ ಅವರಿಗೆ ಬಾಗಲಕೋಟೆ ಕ್ಷೇತ್ರದ ಉಸ್ತುವಾರಿಯನ್ನು ಬಿಜೆಪಿ ಹೈಕಮಾಂಡ್‌ ನೀಡಿದೆ. ಹೀಗಾಗಿ ಸಿದ್ದರಾಮಯ್ಯ-ಈಶ್ವರಪ್ಪ ಅವರಿಗೆ ಈ ಕ್ಷೇತ್ರ ಪ್ರತಿಷ್ಠೆಯಾಗಿದೆ.

ಕ್ಷೇತ್ರವನ್ನು ಪುನಃ ನಮ್ಮ ವಶಕ್ಕೆ ಪಡೆಯಲು ಯುವ ಸಮುದಾಯಕ್ಕೆ ಪಕ್ಷ ಆದ್ಯತೆ ಕೊಡುತ್ತದೆ ಎಂಬ ವಿಶ್ವಾಸವಿದೆ. ಈಗಾಗಲೇ  ಇಡೀ ಜಿಲ್ಲೆಯಲ್ಲಿ ಸುತ್ತಾಡಿ ಕೆಲಸ ಮಾಡಿದ್ದೇನೆ. ಹೀಗಾಗಿ ಪಕ್ಷದ ಟಿಕೆಟ್‌ ನನಗೆ ದೊರೆಯುತ್ತದೆ ಎಂಬ ನಂಬಿಕೆ ಇದೆ.
-ವೀಣಾ ಕಾಶಪ್ಪನವರ, ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

ಟಿಕೆಟ್‌ಗಾಗಿ ಪಕ್ಷದ ಹಿರಿಯರಿಗೆ ಮನವಿ ಮಾಡಿದ್ದೇನೆ. ಹಲವಾರು ಮುಖಂಡರು, ಕಾರ್ಯಕರ್ತರು ನನ್ನ ಪರವಾಗಿ ಟಿಕೆಟ್‌ ಕೇಳಿದ್ದಾರೆ. ಸಿದ್ದರಾಮಯ್ಯ, ದಿನೇಶ ಗುಂಡೂರಾವ್‌ ಅವರಿಗೂ ಪ್ರತ್ಯೇಕವಾಗಿ ಕೇಳಿಕೊಂಡಿದ್ದೇವೆ. ಟಿಕೆಟ್‌ ದೊರೆಯುವ ವಿಶ್ವಾಸವಿದೆ.
-ಶಿವಾನಂದ ಉದಪುಡಿ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.