ಜಗದ್ಗುರು ಭಾರತ ಮೋದಿಯಿಂದ ಸಾಧ್ಯ: ನಳಿನ್
Team Udayavani, Mar 22, 2019, 1:00 AM IST
ಮಂಗಳೂರು: ಐದು ವರ್ಷಗಳಲ್ಲಿ ಜಗತ್ತೇ ಅಚ್ಚರಿಪಡುವಂತೆ ಭಾರತವನ್ನು ಮುನ್ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಜಗದ್ಗುರು ಭಾರತ ಕನಸಿನ ಸಾಕಾರ ಸಾಧ್ಯ ಎಂದು ಜನ ನಂಬಿದ್ದಾರೆ ಮತ್ತು ನರೇಂದ್ರ ಮೋದಿಯವರನ್ನೇ ಮತ್ತೆ ಪ್ರಧಾನಿಯಾಗಿ ಮಾಡಲಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ – ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಸಂಘನಿಕೇತನದಲ್ಲಿ ಗುರುವಾರ ಜರಗಿದ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಮೋದಿಯವರು ಜನಪರ 153 ಯೋಜನೆಗಳನ್ನು ದೇಶಕ್ಕೆ ನೀಡಿದ್ದಾರೆ. ನುಡಿದಂತೆ ಭ್ರಷ್ಟಚಾರಮುಕ್ತ ಆಡಳಿತ ನೀಡಿದ್ದಾರೆ. ಕಳೆದ 5 ವರ್ಷಗಳಲ್ಲಿ ಪ್ರಧಾನಿಯಾಗಲಿ, ಅವರ ಸಂಪುಟದ ಸಚಿವರ ಅಥವಾ ಬಿಜೆಪಿ ಸಂಸತ್ಸದಸ್ಯರ ಮೇಲಾಗಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಎಂದರು.
ಮೋದಿ ಆಡಳಿತದಲ್ಲಿ ಕರ್ನಾಟಕ ಹಾಗೂ ದ.ಕ. ಲೋಕಸಭಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಹರಿದು ಬಂದಿದೆ. 2009ರಿಂದ 2014ರ ವರೆಗಿನ 5 ವರ್ಷಗಳ ಯುಪಿಎ ಆಡಳಿತದಲ್ಲಿ ರಾಜ್ಯಕ್ಕೆ 11,000 ಕೋ.ರೂ. ಹಾಗೂ ದಕ್ಷಿಣ ಕನ್ನಡಕ್ಕೆ 3,500 ಕೋ.ರೂ. ಅನುದಾನ ಮಾತ್ರ ಲಭಿಸಿತ್ತು. ಆದರೆ ನರೇಂದ್ರ ಮೋದಿ ಅವರ ಆಡಳಿತದಲ್ಲಿ 2014ರಿಂದ 2019ರ ವರೆಗಿನ 5 ವರ್ಷಗಳ ಆಡಳಿತದಲ್ಲಿ ಕರ್ನಾಟಕ 2.15 ಲಕ್ಷ ಕೋ.ರೂ. ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ 16,520 ಕೋ.ರೂ. ಅನುದಾನ ಲಭಿಸಿದೆ ಎಂದರು.
ಬಿಜೆಪಿ ಉಪಾಧ್ಯಕ್ಷ ರವಿಶಂಕರ ಮಿಜಾರ್ ಮಾತನಾಡಿದರು. ಶಾಸಕ ವೇದವ್ಯಾಸ ಕಾಮತ್ ಸ್ವಾಗತಿಸಿ ದರು. ಸಂಜೀವ ಮಠಂದೂರು. ಎನ್.ಯೋಗೀಶ್ ಭಟ್, ಪ್ರತಾಪಸಿಂಹ ನಾಯಕ್, ಗೋಪಾಲಕೃಷ್ಣ ಹೇರಳೆ, ನಿತಿನ್ ಕುಮಾರ್, ಸಂಜೀವ, ಕ್ಯಾ| ಬೃಜೇಶ್ ಚೌಟ, ಸುದರ್ಶನ್ ಎಂ., ಗಣೇಶ ಹೊಸಬೆಟ್ಟು, ಪ್ರೇಮಾನಂದ ಶೆಟ್ಟಿ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.