ಮಲೆನಾಡು ಭಾಗದಲ್ಲಿ ಜೆಡಿಎಸ್‌ ಬಿರುಸಿನ ಪ್ರಚಾರ


Team Udayavani, Mar 16, 2019, 7:36 AM IST

malenaadu.jpg

ಸಕಲೇಶಪುರ: ಬಿಜೆಪಿಗೆ ತಕ್ಕ ಪಾಠ ಕಲಿಸಲು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣರ ಗೆಲುವಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಮನವಿ ಮಾಡಿದರು.

ಪಟ್ಟಣದ ಒಕ್ಕಲಿಗ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಮೂಡಲಹಿಪ್ಪೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಹಿರಿಯ ಜೆಡಿಎಸ್‌ ನಾಯಕರ ಒಪ್ಪಿಗೆ ಪಡೆದು ಪ್ರಜ್ವಲ್‌ ರೇವಣ್ಣ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದರು.

ಮೂಡಲಹಿಪ್ಪೆ ದೇವೇಗೌಡರಿಗೆ ರಾಜಕೀಯವಾಗಿ ಶಕ್ತಿ ನೀಡಿದ ಸ್ಥಳ. ಅಂದಿನ ಸಭೆಯಲ್ಲಿ ತನಗೆ ರಾಜಕೀಯ ಶಕ್ತಿನೀಡಿದ ಜನರಿಗೆ ಏನಾದರೂ ಮಾಡಬೇಕು ಹಾಗೂ ಗ್ರಾಮದಲ್ಲಿದ್ದ ತನ್ನ ಸಮಾನ ವಯಸ್ಸಿನ ಅಗಲಿದ ಸ್ನೇಹಿತರನ್ನು ನೆನೆದು ದೇವೇಗೌಡರು ಕಣ್ಣಿರಿಟ್ಟರೆ ಹೊರತು, ರಾಜಕೀಯಕ್ಕೆ ಹೆದರಿ ಕಣ್ಣೀರಿಟ್ಟಿಲ್ಲ. ಆದರೆ, ಮಾಧ್ಯಮದವರು ಇದನ್ನು ಕೆಟ್ಟದ್ದಾಗಿ ಬಿಂಬಿಸಿದರು. ಬೇರೆಯವರು ಕಣ್ಣೀರಿಟ್ಟಾಗ ಸುಮ್ಮನಿರುತ್ತಾರೆ ಎಂದು ದೂರಿದರು.

ಆನೆ ಕಾರಿಡಾರ್‌: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಜಿಲ್ಲೆಗೆ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಹಾಸನ -ಮೈಸೂರು, ಹಾಸನ -ಬೆಂಗಳೂರು ರೈಲು ಮಾರ್ಗವನ್ನು ಮಾಡಿದವರು ಗೌಡರು. ಈ ಮಾರ್ಗದಲ್ಲಿ ಅನೇಕ ರೈಲುಗಳು ಓಡಾಡುತ್ತಿದೆ. ಹಾಸನದಲ್ಲಿ ಮೆಡಿಕಲ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜು ಪ್ರಾರಂಭಿಸಲಾಗಿದೆ. ತಾಲೂಕಿಗೆ ಅತಿ ಶೀಘ್ರವಾಗಿ ಆನೆ ಕಾರಿಡಾರ್‌ ಮಾಡಲಾಗುವುದು ಹಾಗೂ ಮಲೆನಾಡು ಅಭಿವೃದ್ಧಿ ಬೋರ್ಡ್‌ ಸಹ ರಚನೆ ಮಾಡಲಾಗುವುದು ಎಂದು ಹೇಳಿದರು.

650 ಕೋಟಿ ರೂ.: ಜಿಲ್ಲೆಗೆ 10 ಸಾವಿರ ಕೋಟಿ ರೂ. ಅನುದಾನ ತರಲಾಗಿದೆ. ಸಕಲೇಶಪುರ ತಾಲೂಕಿಗೆ ಕಳೆದ ಆರು ತಿಂಗಳಿನಲ್ಲಿ 650 ಕೋಟಿ ರೂ. ಅನುದಾನ ನೀಡಲಾಗಿದೆ. ಇದಲ್ಲದೆ ಕಾಫಿ ಬೆಳೆಗಾರರ ಸಮಸ್ಯೆಗೆ ಸ್ಪಂದನೆ, ವಿದ್ಯುತ್‌ ಸಮಸ್ಯೆಗೆ ಪರಿಹಾರದಂತಹ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. ಎತ್ತಿನಹೊಳೆ ಯೋಜನೆಯಲ್ಲಿ 150ಕ್ಕೂ ಹೆಚ್ಚು ಕೋಟಿ ರೂ. ಅನುದಾನದಲ್ಲಿ ಹಲವು ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದರು.

ಸೌಲ ಸೌಲಭ್ಯ: ರಾಜ್ಯ ಸಮ್ಮಿಶ್ರ ಸರ್ಕಾರ ರಚನೆಯಾಗಿ ಕೇವಲ ವಾರದಲ್ಲೆ 44 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದು, ಇದರ ಅಂಗವಾಗಿ ಜಿಲ್ಲೆಯ 1.19 ಲಕ್ಷ ಕುಟುಂಬಗಳಿಗೆ ಮೊದಲ ಹಂತದಲ್ಲೆ 535 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಮುಂದಿನ ಹಂತದಲ್ಲಿ ಜಿಲ್ಲೆಯ 2 ಲಕ್ಷ ಕುಟುಂಬಗಳು ಸಾಲ ಸೌಲಭ್ಯದ ಲಾಭ ಪಡೆಯಲಿದ್ದಾರೆ ಎಂದರು.

ರೈತರಿಗೆ ಕಳೆದ  5 ವರ್ಷದಲ್ಲಿ ಏನನ್ನು ಮಾಡದ ಕೇಂದ್ರ ಸರ್ಕಾರ ಮನೆಗೆ ಹೋಗುವ ಹಂತದಲ್ಲಿ 6000 ಸಾವಿರ ರೂ. ನೀಡಲು ಮುಂದಾಗಿದೆ. ರಾಜ್ಯದಲ್ಲಿ ಬಿಜೆಪಿ ದೂರ ಇಡುವ ಉದ್ದೇಶದಿಂದ ಕಾಂಗ್ರೆಸ್‌ನೊಂದಿಗೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಲಾಗಿದೆ. ಇದರಂತೆ ಕೇಂದ್ರದಲ್ಲೂ ಕೋಮು ಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕಾಗಿದ್ದು ಜಿಲ್ಲೆಗೆ ಬಿಜೆಪಿ ಕೊಡುಗೆ ಶೂನ್ಯ ಇವರು ಯಾವ ಮುಖವಿಟ್ಟುಕೊಂಡು ಮತ ಕೇಳುತ್ತಾರೆ ಎಂದು ಹೇಳಿದರು. 

ಕಾಂಗ್ರೆಸ್‌ ವಿಶ್ವಾಸಕ್ಕೆ ತೆಗೆದುಕೊಂಡು ಪ್ರಚಾರ: ಲೋಕಸಭಾ ಕ್ಷೇತ್ರ ಜೆಡಿಎಸ್‌ ಘೋಷಿತ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಮಾತನಾಡಿ, ರಾಜ್ಯ ಸಮ್ಮಿಶ್ರ ಸರ್ಕಾರ ಬಲಿಷ್ಠವಾಗಿದೆ. ಉತ್ತಮ ಕೆಲಸ ಮಾಡುತ್ತಿದ್ದು ರಾಜ್ಯ ಸರ್ಕಾರದ ಈ ಯೋಜನೆಗಳನ್ನು ಮತದಾರರಿಗೆ ವಿವರಿಸಬೇಕು. ಕಾಂಗ್ರೆಸ್‌ನ ಮುಖಂಡರೊಂದಿಗೆ ಮಾತನಾಡಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಪ್ರಚಾರ ಮಾಡುತ್ತೇನೆ ಎಂದು ವಿವರಿಸಿದರು.

ಶಾಸಕ ಎಚ್‌.ಕೆ.ಕುಮಾರಸ್ವಾಮಿ ಮಾತನಾಡಿ, ತಾಲೂಕಿನ ಅಭಿವೃದ್ಧಿಗಾಗಿ 150ಕ್ಕೂ ಹೆಚ್ಚು ಕೋಟಿ ರೂ. ಹಣ ಸಮ್ಮಿಶ್ರ ಸರ್ಕಾರದಿಂದ ನೀಡಲಾಗಿದೆ. ಮಂಡ್ಯದಲ್ಲಿ ನಿಖೀಲ್‌, ಹಾಸನದಲ್ಲಿ ಪ್ರಜ್ವಲ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕೊಟ್ಟ ಜೆಡಿಎಸ್‌ ವರಿಷ್ಠರು. ಯುವ ಸಮೂಹಕ್ಕೆ ಗೌರವ ನೀಡಿದ್ದಾರೆ ಎಂದು ಹೇಳಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಹಲವು ಜನಪರ ಯೋಜನೆಗಳನ್ನು ನೀಡಿದೆ.

ಈ ನಿಟ್ಟಿನಲ್ಲಿ ತಾಲೂಕಿನ ಜನ ಪ್ರಜ್ವಲ್‌ ರೇವಣ್ಣ ಅವರನ್ನು ಬೆಂಬಲಿಸಲೇಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಕೆ.ಎಲ್‌.ಸೋಮಶೇಖರ್‌, ಆಲೂರು ತಾಲೂಕು ಅಧ್ಯಕ್ಷ ಮಂಜೇಗೌಡ, ಜಿಪಂ ಸದಸ್ಯರಾದ ಚಂಚಲಾ ಕುಮಾರಸ್ವಾಮಿ, ಸುಪ್ರದೀಪ್ತ ಯಜಮಾನ್‌, ಉಜ್ಮರುಜ್ವಿ, ಮುಖಂಡರಾದ ಬಾಳ್ಳು ಜಗನ್ನಾಥ್‌, ಜಾನೆಕೆರೆ ಮೋಹನ್‌, ಸಚಿನ್‌ ಪ್ರಸಾದ್‌, ಭಾಸ್ಕರ್‌, ಕವನ್‌, ಪ್ರಜ್ವಲ್‌, ಅಸ್ಲಂ, ಇಬ್ರಾಹಿಂ, ಜಾತಹಳ್ಳಿ ಪುಟ್ಟಸ್ವಾಮಿ, ಬೆಕ್ಕನಹಳ್ಳಿ ನಾಗರಾಜ್‌, ಜೈಭೀಮ್‌ ಮಂಜು, ರಘು ಹೆತ್ತೂರು ಮುಂತಾದವರಿದ್ದರು.

ಕಾರ್ಯಕರ್ತರೇ ನನ್ನ ದೇವರು. ಅವರಿಗೆ ನೋವಾಗಲು ನಾನು ಬಿಡುವುದಿಲ್ಲ. ಎಲ್ಲರನ್ನು ಒಗ್ಗೂಡಿಸಿ ಸಂಘಟನೆ ಮಾಡುತ್ತೇನೆ. ನನ್ನನ್ನು ಎತ್ತಿ ಆಡಿಸಿದ ಹಲವು ಹಿರಿಯರು ಈ ಸಭೆಯಲ್ಲಿ ಉಪಸ್ಥಿತರಿದ್ದೀರಿ. ನನ್ನನ್ನು ನಿಮ್ಮ ಮಗನೆಂದು ತಿಳಿದು ಚುನಾವಣೆಯಲ್ಲಿ ಹಗಲಿರುಳು ಕೆಲಸ ಮಾಡುವ ಮೂಲಕ ಗೆಲ್ಲಿಸಬೇಕು. ತಾಲೂಕಿನ ಸಮಸ್ಯೆಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಲೋಕಸಭಾ ಸದಸ್ಯನಾದ ಬಳಿಕ ದೇವೇಗೌಡರ ಸಲಹೆ ಸಹಕಾರದೊಂದಿಗೆ ನಿಮ್ಮ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಪರಿಹರಿಸಲಿದ್ದೇನೆ.
-ಪ್ರಜ್ವಲ್‌ ರೇವಣ್ಣ, ಲೋಕಸಭಾ ಕ್ಷೇತ್ರದ ಜೆಡಿಎಸ್‌ ಘೋಷಿತ ಅಭ್ಯರ್ಥಿ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.