ಬಹಿರಂಗ ಹೇಳಿಕೆಗೆ ಜೆಡಿಎಸ್‌ ಕಡಿವಾಣ 


Team Udayavani, Mar 23, 2019, 2:03 AM IST

jds.jpg

ಬೆಂಗಳೂರು: ಸೀಟು ಹಂಚಿಕೆ ನಂತರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವಿನ ವಾಕ್ಸಮರಕ್ಕೆ ಕಡಿವಾಣ ಹಾಕಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.

ಹಾಸನ, ಮಂಡ್ಯ, ಮೈಸೂರು ತುಮಕೂರು, ಬೆಂಗಳೂರು ಉತ್ತರ, ಶಿವಮೊಗ್ಗ, ಉತ್ತರ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಾಯಕರ ಪರಸ್ಪರ ಮಾತಿನ ಸಮರದಲ್ಲಿ ತೊಡಗಿರುವುದರಿಂದ ಅದು ಚುನಾವಣೆ ಮೇಲೆ ಪರಿಣಾಮ ಬೀರುವ ಆತಂಕ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಪಕ್ಷದ ಎಲ್ಲ ಜಿಲ್ಲಾ ಘಟಕಗಳಿಗೂ ಸೂಚಿಸಿದ್ದಾರೆ.ಸ್ಥಳೀಯವಾಗಿ ಏನೇ ತೊಂದರೆ ಇದ್ದರೆ ನೇರವಾಗಿ ನಮ್ಮ ಗಮನಕ್ಕೆ ತರಬೇಕು. ಇಲ್ಲವೇ ಲೋಕಸಭೆ ಕ್ಷೇತ್ರವಾರು ನೇಮಕ ಮಾಡುವ ಎರಡೂ ಪಕ್ಷದ ವೀಕ್ಷಕರಿಗೆ ತಿಳಿಸಬೇಕೆಂದು ತಿಳಿಸಲಾಗಿದೆ.

ಈ ಕುರಿತು ಜಿಲ್ಲಾಧ್ಯಕ್ಷರಿಗೆ ಪತ್ರ ಬರೆಯಲು ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌ ಅವರಿಗೆ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಸೂಚಿಸಿದ್ದಾರೆ. ಮತ್ತೂಂದೆಡೆ ಸಿಎಂ ಕುಮಾರಸ್ವಾಮಿ ಅವರು ಶಾಸಕರು, ಮಾಜಿ ಶಾಸಕರು ಹಾಗೂ ಪ್ರಮುಖ ಮುಖಂಡರಿಗೆ ದೂರವಾಣಿ ಕರೆ ಮಾಡಿ ಯಾರೂ ಬಹಿರಂಗ ಹೇಳಿಕೆ ನೀಡಬೇಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಮಂಡ್ಯ ಹಾಗೂ ಹಾಸನದಲ್ಲಿ ಮೂಲ ಕಾಂಗ್ರೆಸ್‌ ನಾಯಕರ ಜತೆ ಖುದ್ದು ದೇವೇಗೌಡರು ಮಾತನಾಡಿದ್ದು, ಮಂಡ್ಯದಲ್ಲಿ ಜಿ.ಮಾದೇಗೌಡ, ಆತ್ಮಾನಂದ, ಹಾಸನದಲ್ಲಿ ಪರಿಷತ್‌ ಸದಸ್ಯ ಗೋಪಾಲಸ್ವಾಮಿ, ಮಾಜಿ ಸಚಿವ ಶಿವರಾಂ ಸೇರಿ ಹಲವು ನಾಯಕರ ಜತೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರದ ಜೆಡಿಎಸ್‌ ನಾಯಕರ ಸಭೆ ಒಂದೆರಡು ದಿನಗಳಲ್ಲಿ ನಡೆಸಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಯಾರಿಗೇ ಟಿಕೆಟ್‌ ನೀಡಿದರೂ ಜೆಡಿಎಸ್‌ ಕಾರ್ಯಕರ್ತರು ಮತ್ತು
ಮುಖಂಡರು ಜತೆಗೂಡಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.