ರಾಜ್ಯದ ತುಂಬೆಲ್ಲಾ ಇಂದು “ಕಮಲ ಸಂದೇಶ ಬೈಕ್ ರ್ಯಾಲಿ’
Team Udayavani, Mar 2, 2019, 2:33 AM IST
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ರಾಷ್ಟ್ರಾದ್ಯಂತ ಶನಿವಾರ “ಕಮಲ ಸಂದೇಶ ಬೈಕ್ ರ್ಯಾಲಿ’ ಆಯೋಜನೆಯಾಗಿದ್ದು, ಅದರಂತೆರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೂ ಬೈಕ್ ರ್ಯಾಲಿ ನಡೆಸಲು ಬಿಜೆಪಿ ಸಜ್ಜಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭೋಪಾಲ್‌ನಲ್ಲಿ ಹಾಗೂ ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷೆ ಪೂನಂ ಮಹಾ ಜನ್ ಅವರು ಮಥುರಾದಲ್ಲಿ ರ್ಯಾಲಿಗೆ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರುಬೆಳಗ್ಗೆ 11 ಗಂಟೆಗೆ ತುಮಕೂರಿನಲ್ಲಿಬೈಕ್ ರ್ಯಾಲಿಗೆ ಚಾಲನೆ ನೀಡಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ಅವರು ಹುಬ್ಬಳ್ಳಿಯಲ್ಲಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ, ಶಾಸಕ ಸಿ.ಟಿ.ರವಿ ಅವರು ಚಿಕ್ಕಮಗಳೂರಿನಲ್ಲಿ,ಸಂಸದೆ ಶೋಭಾ ಕರಂದ್ಲಾಜೆ ಅವರು ತರೀಕೆರೆಯಲ್ಲಿ, ವಿಧಾನಸಭೆ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ ಅವರು ಮುಧೋಳ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರುಕಲಬುರಗಿಯಲ್ಲಿ, ಸಂಸದ ಪ್ರತಾಪ್ ಸಿಂಹ ಅವರು ಪಿರಿಯಾಪಟ್ಟಣ ಹಾಗೂಮಾಜಿ ಸಚಿವ ಸಿ.ಎಂ.ಉದಾಸಿ ಅವರು ಹಾನಗಲ್ ಕ್ಷೇತ್ರದಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಲಿದ್ದಾರೆ.
ಬೆಂಗಳೂರಿನಲ್ಲೂ ಬೈಕ್ ರ್ಯಾಲಿ: ಕೇಂದ್ರಸಚಿವ ಡಿ.ವಿ.ಸದಾನಂದಗೌಡ ಅವರು
ದಾಸರಹಳ್ಳಿಯಿಂದ ವಿದ್ಯಾರಣ್ಯಪುರದವರೆಗೆ ಬೈಕ್ ರ್ಯಾಲಿಗೆ ಚಾಲನೆಕೊಡಲಿದ್ದಾರೆ. ಮಾಜಿ ಉಪಮುಖ್ಯ ಮಂತ್ರಿ ಆರ್.ಅಶೋಕ್ ಅವರು ಜಯನಗರದ ಸೌತ್‌ಎಂಡ್‌ವೃತ್ತ, ಸಂಸದರಾದ ಪಿ.ಸಿ.ಮೋಹನ್, ರಾಜೀವ್ ಚಂದ್ರಶೇಖರ್ ಅವರು ಚಿಕ್ಕಲಾಲ್‌ಬಾಗ್ ಬಳಿ ಹಾಗೂಶಾಸಕ ಅರವಿಂದ ಲಿಂಬಾವಳಿಯವರು ಬೆಳ್ಳಂದೂರು ಬಳಿ ಬೈಕ್‌ರ್ಯಾಲಿಗೆ ಚಾಲನೆನೀಡುವರು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 1,000 ಬೈಕ್: ಪ್ರತಿ ಬೂತ್‌ನಲ್ಲಿ 3ರಿಂದ 5
ಮಂದಿಯನ್ನು ಬೈಕ್ ರ್ಯಾಲಿಗೆ ಕರೆ ತರುವಮೂಲಕ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿಕನಿಷ್ಠ 1,000 ಬೈಕ್‌ಗಳಲ್ಲಿ ರ್ಯಾಲಿ ನಡೆಸಬೇಕು. ನಗರ ಪ್ರದೇಶದಲ್ಲಿ 30 ಕಿ.ಮೀ.ಹಾಗೂ ಗ್ರಾಮೀಣ ಪ್ರದೇಶದಲ್ಲಿ 100ರಿಂದ 130 ಕಿ.ಮೀ.ವರೆಗೆ ರ್ಯಾಲಿನಡೆಸಬೇಕು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಜನರನ್ನು ಸೆಳೆಯಬೇಕು
ಎಂದು ಹಿರಿಯ ನಾಯಕರುಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.