50 ಕೋಟಿ ದಾಟಿದ ನಗದು

Team Udayavani, Apr 5, 2019, 6:17 AM IST

50-Crore-Cash

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಇಲ್ಲಿವರೆಗೆ ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ವಶಪಡಿಸಿಕೊಂಡ ನಗದು 50 ಕೋಟಿ ರೂ. ದಾಟಿದೆ.

ಫ್ಲೈಯಿಂಗ್‌ ಸ್ಕ್ವಾಡ್‌, ಸ್ಟಾಟಿಕ್‌ ಸರ್ವೆಲೆನ್ಸ್‌ ಟೀಮ್‌, ಪೊಲೀಸ್‌ ತಂಡಗಳು ಹಾಗೂ ಅಬಕಾರಿ ತಂಡಗಳು ಸೇರಿ ಇಲ್ಲಿವರೆಗೆ ವಶಪಡಿಸಿಕೊಂಡು ನಗದು ಮೊತ್ತ 50.94 ಕೋಟಿ ರೂ. ಆಗಿದೆ.

ಉಳಿದಂತೆ ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 10.39 ಕೋಟಿ ನಗದು, 37.68 ಲಕ್ಷ ಮೌಲ್ಯದ ಮದ್ಯ, 6.16 ಲಕ್ಷ ಮೌಲ್ಯದ ಮಾದಕ ದ್ರವ್ಯ, 1.66 ಕೋಟಿ ರೂ. ಮೊತ್ತದ ಇತರೆ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿವೆ. ಈವರೆಗೆ ವಶಪಡಿಸಿಕೊಂಡ ಒಟ್ಟು ನಗದು 50.94 ಕೋಟಿ.

ಡಿಸಿಸಿ ಬ್ಯಾಂಕ್‌ಗೆ ಸೇರಿದ ಹಣ ಜಪ್ತಿ: ಏ.3ರಂದು ಸಂಜೆ 4.30 ಗಂಟೆಗೆ ಬೆಳಗಾವಿ ಜಿಲ್ಲೆಯಲ್ಲಿ ಫ್ಲೈಯಿಂಗ್‌ ಸ್ಕ್ವಾಡ್‌ ತಂಡವು 1.90 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದು, ಈ ಹಣ ಬೆಳಗಾವಿ ಡಿಸಿಸಿ ಬ್ಯಾಂಕ್‌ಗೆ ಸೇರಿದ್ದು, ಅಕ್ರಮವಾಗಿ ಖಾಸಗಿ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ಹಣವನ್ನು ಆದಾಯ ತೆರಿಗೆ ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಅದೇ ರೀತಿ ಚಿಕ್ಕಬಳ್ಳಾಪುರದಲ್ಲಿ ಮೂರು ವಿವಿಧ ವಾಹನಗಳಿಂದ 37.14 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

1.76 ಕೋಟಿ ರೂ.ನಗದು ವಶ: ಚಿಕ್ಕಬಳ್ಳಾಪುರ ಸುಂಕ ವಸೂಲಾತಿ ಕೇಂದ್ರದಲ್ಲಿ ಸೂಕ್ತ ದಾಖಲೆಗಳಿಲ್ಲದೆ ಇಟ್ಟಿದ್ದ ಕೋಟ್ಯಂತರ ರೂ. ನಗದನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳ ತಂಡ ರಾಜ್ಯದ ಹಾಗೂ ಆಂಧ್ರ ಪೊಲೀಸರ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಸುಂಕ ವಸೂಲಾತಿ ಕೇಂದ್ರದ ವ್ಯವಸ್ಥಾಪಕ ಸುಬ್ಟಾರೆಡ್ಡಿ ಎಂಬುವರ ಕೊಠಡಿಯಲ್ಲಿ ಇಟ್ಟಿದ್ದ 1.76 ಕೋಟಿ ರೂ. ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕರಪತ್ರ ವಶಕ್ಕೆ: ಚನ್ನರಾಯಪಟ್ಟಣ ತಾಲೂಕಿನ ಗಡಿಭಾಗದ ಹಿರೀಸಾವೆ ಬಳಿಯಲ್ಲಿನ ಚೆಕ್‌ ಪೋಸ್ಟ್‌ನಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ 2 ಬಸ್‌ನಲ್ಲಿ ಸಾಗಿಸುತ್ತಿದ್ದ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣಗೆ ಸೇರಿದ ಸುಮಾರು 50 ಸಾವಿರ ಕರಪತ್ರ ಹಾಗೂ 2 ಬಸ್‌ಗಳನ್ನು ಚುನಾವಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ 2 ಬಸ್‌ಗಳಲ್ಲಿ ತಲಾ 25
ಸಾವಿರ ಕರಪತ್ರ ವಿರುವ ಬಂಡಲ್‌ಗ‌ಳು ಪತ್ತೆಯಾಗಿವೆ.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.