“ಲೋಕಾ’ ಚುನಾವಣೆ; ಹೊಸ ಮುಖಗಳಿಗೆ ಮಣೆ
Team Udayavani, Apr 1, 2019, 6:30 AM IST
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಅಭ್ಯರ್ಥಿಗಳ ಪರ ಪ್ರಚಾರದ ಭರಾಟೆ ಜೋರಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ಹಲವು ಹೊಸಮುಖಗಳು ಅದೃಷ್ಟ ಪರೀಕ್ಷೆಗೆ ಇಳಿದಿರುವುದು
ವಿಶೇಷ.
ಮೂರೂ ಪಕ್ಷಗಳ ಟಿಕೆಟ್ ಹಂಚಿಕೆ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಮೂರು ಪಕ್ಷಗಳ ಪಟ್ಟಿಯಲ್ಲಿ ಯುವ ಕಟ್ಟಾಳುಗಳಿಗೆ ಆದ್ಯತೆ ನೀಡಲಾಗಿದೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮೈತ್ರಿ ಸರ್ಕಾರದ ಎರಡು ಪಕ್ಷಗಳು
ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲೂ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ, ಬಹುತೇಕ ಕಡೆಗಳಲ್ಲಿ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ.
ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಕಣದಲ್ಲಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ, ನಟ, ನಿಖಿಲ್ ಕುಮಾರಸ್ವಾಮಿಯವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಜೆಡಿಎಸ್‌ನ ಅಧಿಕೃತ ಅಭ್ಯ ಯಾಗಿ ಕಣಕ್ಕಿಳಿದಿರುವ ಇವರಿಗೆ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ
ಎದುರಾಳಿಯಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಕ್ಷೇತ್ರ ಹಾಗೂ ಜೆಡಿಎಸ್‌ನ ಭದ್ರಕೋಟೆಯಾಗಿರುವ ಹಾಸನದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಸ್ವರ್ಧೆಗೆ ಇಳಿದಿದ್ದಾರೆ. ಜಿಲ್ಲೆಯಲ್ಲಿ ಪಕ್ಷ
ಸಂಘಟನೆಯಲ್ಲಿದ್ದ ಪ್ರಜ್ವಲ್‌ಗೆ ಜೆಡಿಎಸ್‌ನಿಂದ ಟಿಕೆಟ್ ನೀಡಿದ್ದು, ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿದ್ದ, ಈಗ ಬಿಜೆಪಿ ಸೇರಿ ಆ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಎ.ಮಂಜು ವಿರುದಟಛಿ ಅವರು ಸೆಣಸಾಟ ನಡೆಸಲಿದ್ದಾರೆ.
ಇನ್ನು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿಯಾಗಿ ಮಿಥುನ್ ರೈ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಯೂತ್ ಕಾಂಗ್ರೆಸ್ ಮುಖಂಡರಾಗಿ ಕಾಂಗ್ರೆಸ್‌ನಲ್ಲಿ ಸೇವೆ ಸಲ್ಲಿಸುತ್ತಿರುವ
ಮಿಥುನ್ ರೈ ಅವರಿಗೆ ಇದು ಮೊದಲ ಲೋಕಸಭಾ ಚುನಾವಣೆ. ಎರಡು ಬಾರಿ ಸಂಸದರಾಗಿರುವ ಬಿಜೆಪಿಯ ನಳಿನ್ ಕುಮಾರ್ ಕಟೀಲು ಅವರಿಗೆ ರೈಯವರು ಯಾವ ರೀತಿ ಸ್ಪರ್ಧೆ ನೀಡಲಿದ್ದಾರೆ ಎಂಬುದನ್ನು ಕಾದು
ನೋಡಬೇಕಿದೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ವೀಣಾ ಕಾಶಪ್ಪನವರ್ ಕೂಡ ಲೋಕಸಭಾ ಚುನಾವಣೆಗೆ ಇದೇ ಮೊದಲ ಬಾರಿಗೆ ಸ್ಪರ್ಧೆ ಮಾಡುತ್ತಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ ಸೇವೆ
ಸಲ್ಲಿಸಿದ್ದರೂ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅನುಭವ ಇಲ್ಲ. ಅವರೀಗ ಹಾಲಿ ಸಂಸದ ಬಿಜೆಪಿಯ ಪಿ.ಸಿ.ಗದ್ದಿಗೌಡರ್ ವಿರುದ್ಧ ಹೋರಾಟ ನಡೆಸಲಿದ್ದಾರೆ.
ನಿಖಿಲ್-ಸುಮಲತಾ ನಡುವೆ ಜಿದ್ದಾಜಿದ್ದಿ
ಮಂಡ್ಯ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ, ದಿ.ಅಂಬರೀಶ್ ಅವರ ಪತ್ನಿ ಸುಮಲತಾ ಅಂಬರೀಶ್ ಅವರಿಗೆ ಇದು ಮೊದಲ ಚುನಾವಣೆ.
ತಿಂಗಳುಗಳ ಹಿಂದಿನಿಂದಲೇ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿರುವ ಅವರೀಗ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಅವರಿಗೆ ಅಧಿಕೃತವಾಗಿ ಬೆಂಬಲ ಸೂಚಿಸಿದೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ನಡುವೆ ನೇರ ಪೈಪೋಟಿ ಇರಲಿದೆ.
ಕ್ಷೇತ್ರ ಅಭ್ಯರ್ಥಿ ಪಕ್ಷ
ಹಾಸನ ಪ್ರಜ್ವಲ್ ರೇವಣ್ಣ ಕಾಂಗ್ರೆಸ್-ಜೆಡಿಎಸ್ ಮೈತ್ರಿ.
ಮಂಡ್ಯ ನಿಖೀಲ್ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ.
ಮಂಡ್ಯ ಸುಮಲತಾ ಪಕ್ಷೇತರ
ದಕ್ಷಿಣ ಕನ್ನಡ ಮಿಥುನ್ ರೈ ಕಾಂಗ್ರೆಸ್-ಜೆಡಿಎಸ್ ಮೈತ್ರಿ.
ಬಾಗಲಕೋಟೆ ವೀಣಾ ಕಾಶಪ್ಪನವರ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ.
ಕೋಲಾರ ಮುನಿಸ್ವಾಮಿ ಬಿಜೆಪಿ.
ಬಳ್ಳಾರಿ ದೇವೇಂದ್ರಪ್ಪ ಬಿಜೆಪಿ.
ಬೆಂ. ದಕ್ಷಿಣ ತೇಜಸ್ವಿ ಸೂರ್ಯ ಬಿಜೆಪಿ.
ಕೋಲಾರ ಬಿಜೆಪಿಯ ಅಚ್ಚರಿ ಆಯ್ಕೆ
ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಚ್ಚರಿ ಅಭ್ಯರ್ಥಿ ಮುನಿಸ್ವಾಮಿ ಕೂಡ ಲೋಕಸಭಾ ಚುನಾವಣೆಗೆ ಹೊಸಮುಖ. ಬಿಬಿಎಂಪಿ
ಕಾಡುಗೋಡಿ ವಾರ್ಡ್‌ನ ಸದಸ್ಯರಾಗಿರುವ ಮುನಿಸ್ವಾಮಿ ಅವರಿಗೆ
ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಮೈತ್ರಿ ಪಕ್ಷದ ಅಭ್ಯರ್ಥಿ ಕಾಂಗ್ರೆಸ್‌ನ ಮಾಜಿ ಕೇಂದ್ರ ಸಚಿವ, ಹಾಲಿ ಸಂಸದ ಕೆ.ಎಚ್.ಮುನಿಯಪ್ಪ ಅವರ
ವಿರುದಟಛಿ ಸ್ಪರ್ಧೆ ಮಾಡಲಿದ್ದಾರೆ. ಬಿಜೆಪಿಯ ಬಳ್ಳಾರಿ ಅಭ್ಯರ್ಥಿ ದೇವೇಂದ್ರಪ್ಪ ಅವರು ಮೈತ್ರಿ ಪಕ್ಷದ ಅಭ್ಯರ್ಥಿ, ಹಾಲಿ ಸಂಸದ ಉಗ್ರಪ್ಪ
ಅವರೊಂದಿಗೆ ಸೆಣಸಾಟ ನಡೆಸಲಿದ್ದಾರೆ. ಕಾಂಗ್ರೆಸ್‌ನಲ್ಲಿದ್ದು, ಇತ್ತೀಚೆಗಷ್ಟೆ ಬಿಜೆಪಿಗೆ ಬಂದಿರುವ ದೇವೇಂದ್ರಪ್ಪ ಅವರು, ಇದೇ ಮೊದಲ ಬಾರಿಗೆ
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು, ಸಾಕಷ್ಟು ಕುತೂಹಲ ಮೂಡಿಸಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ, ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.