ರಾಮನ ಹೆಸರಿನ ನಾಡಿನಲ್ಲಿ ದುರಾಡಳಿತ


Team Udayavani, Mar 20, 2019, 7:23 AM IST

ramana.jpg

ರಾಮನಗರ: ರಾಮನ ಹೆಸರಿನ ನಾಡಿನಲ್ಲಿ ರಾವಣರ ಆಡಳಿತ ನಡೆಯುತ್ತಿದೆ. ರಾವಣರ ದುರಾಡಳಿತದಿಂದಾಗಿ ಜಿಲ್ಲೆಯ ಜನರಿಗೆ ಕುಡಿಯುವ ನೀರಿಲ್ಲದೆ, ಮೂಲ ಸೌಕರ್ಯಗಳಿಂದಲೂ ವಂಚಿತರಾಗಿದ್ದಾರೆ- ಹೀಗೆ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್‌, ಡಿ.ಕೆ.ಸುರೇಶ್‌, ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದು ಚನ್ನಪಟ್ಟಣದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌.

ನಗರದ ಆರ್‌.ವಿ.ಎಸ್‌. ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಿಲ್ಲೆಯ ಬೂತ್‌ ಮಟ್ಟದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಅಧಿಕಾರದ ದರ್ಪದಿಂದ ಜನರ ಮೇಲೆ ದರ್ಪ, ಶೋಷಣೆ ನಡೆಸುತ್ತಿರುವವರಿಗೆ ಈ ಬಾರಿಯ ಚುನಾವಣೆ ತಕ್ಕ ಉತ್ತರ ನೀಡಲಿದೆ ಎಂದರು.

ಡಿ.ಕೆ.ಶಿವಕುಮಾರ್‌ ಅವರ ಕಪ್ಪು ಸಾಮ್ರಾಜ್ಯ, ಡಿ.ಕೆ.ಸುರೇಶ್‌ ಅವರ ದುರಾಹಂಕಾರವನ್ನು ಜನ ನೋಡಿದ್ದಾರೆ. ಇವರನ್ನು ತೊಲಗಿಸಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರು ನಿರ್ಧರಿಸಿದ್ದಾರೆ. ಇನ್ನು ಮುಂದೆ ಇವರ ತೋಳ್ಬಲ, ದೌರ್ಜನ್ಯ ನಡೆಯೋದಿಲ್ಲ ಎಂದು ಹೇಳಿದರು.

ಸ್ವಾರ್ಥಕ್ಕಾಗಿ ಮೈತ್ರಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡೂ ಪಕ್ಷಗಳ ಮುಖಂಡರು ತಮ್ಮ ಸ್ವಾರ್ಥಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ. ಒಬ್ಬರಿಗೊಬ್ಬರು ನಿಂದಿಸಿಕೊಳ್ಳುತ್ತಿದ್ದವರು ಇಂದು ದೋಸ್ತಿಗಳಾಗಿದ್ದಾರೆ. ಇವರ ಮೈತ್ರಿ ತಮಾಷೆ ವಸ್ತುವಾಗಿದೆ. ಬಿಜೆಪಿ ಪರ ಒಲವು ಮತದಾರರಲ್ಲಿ ಮತ್ತೆ ಗಟ್ಟಿಯಾಗಿದೆ ಎಂದು ಅಭಿಪ್ರಾಯಪಟ್ಟರು. 

ಬಿಜೆಪಿ ಪರ ಒಲವು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.60ರಷ್ಟು ಪಟ್ಟಣ ಪ್ರದೇಶ, ಶೇ.40ರಷ್ಟು ಗ್ರಾಮೀಣ ಪ್ರದೇಶವಿದೆ. ಕ್ಷೇತ್ರದ ನಾಗರಿಕರು ಬಿಜೆಪಿ ಪರ ಒಲವು ತೋರಿಸುತ್ತಿದ್ದಾರೆ, ಮೋದಿ ಮತ್ತೂಮ್ಮೆ ಎಂದು ಜನರೇ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರು ತಾವು ಪ್ರಧಾನಿಯಾಗಿರುವ ಹಮ್ಮು ಇಲ್ಲ. ತಾವು ಪ್ರಧಾನ ಸೇವಕ ಎಂದು ಹೇಳಿರುವುದು ಜನ ಮೆಚ್ಚಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಅಭ್ಯರ್ಥಿಯ ಗೆಲವಿಗೆ ಶ್ರಮ: ಮುಂದುವರೆಸಿದ ಸಿ.ಪಿ.ಯೋಗೇಶ್ವರ್‌, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಭ್ಯರ್ಥಿ ಯಾರು ಎಂಬ ಬಗ್ಗೆ ಸುಳಿವು ನೀಡಲಿಲ್ಲ. ತಮ್ಮದು ರಾಷ್ಟ್ರೀಯ ಪಕ್ಷ. ವರಿಷ್ಠರು ಸೂಚಿಸಿದರೆ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವುದಾಗಿ. ಇಲ್ಲದಿದ್ದರೆ ಸ್ಪರ್ಧಿಸಿದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು. ವಿಧಾನಸಭಾ ಚುನಾವಣೆಗಳ ನಂತರ ತಾವು ಪಕ್ಷದ ಚಟುವಟಿಕೆಗಳಿಂದ, ಕಾರ್ಯಕರ್ತರಿಂದ ದೂರ ಇದ್ದಿದ್ದಾಗಿ ಆದರೆ ಇನ್ನು ಮುಂದೆ ಪಕ್ಷದ ಚಟುವಟಿಕೆಗಳಲ್ಲಿ ತಪ್ಪದೆ ಭಾಗವಹಿಸುವುದಾಗಿ ಹೇಳಿದರು. 

ಜನಸಾಮಾನ್ಯರಿಗೆ ಅರಿವು ಮೂಡಿಸಿ: ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಮುನಿರಾಜು ಮಾತನಾಡಿ, ರಾಮನಗರ ಜಿಲ್ಲೆಯಲ್ಲಿ ಕೆಲವರು ತಮ್ಮ ದಬ್ಟಾಳಿಕೆ, ದೌರ್ಜನ್ಯವನ್ನು ತಡೆಗಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬೀಗುತ್ತಿದ್ದಾರೆ. ಇಂತವರಿಗೆ ಸೂಕ್ತ ಪಾಠ ಕಲಿಸಬೇಕಾಗಿದೆ. ರಾಮನಗರ ಉಪಚುನಾವಣೆಯಲ್ಲಿ ಪಕ್ಷಕ್ಕೆ ಆದ ಮುಜುಗರದ ವಿರುದ್ಧ ಸೇಡನ್ನು ತೀರಿಸಿಕೊಳ್ಳಬೇಕು ಎಂದು ತಿಳಿಸಿದರು. 

ಕೇಂದ್ರ ಸರ್ಕಾರದ ಅನುದಾನದಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳು ಕ್ಷೇತ್ರ ವ್ಯಾಪ್ತಿಯಲ್ಲಾಗಿದೆ. ಆದರೆ, ಸಂಸದ ಡಿ.ಕೆ.ಸುರೇಶ್‌ ಇದಕ್ಕೆಲ್ಲ ತಮ್ಮ ಶ್ರಮ ಎಂದು ಹೇಳಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಈ ವಿಚಾರಗಳನ್ನು ಪಕ್ಷದ ಕಾರ್ಯಕರ್ತರು ಜನಸಾಮಾನ್ಯರು ಮತ್ತು ಮತದಾರಿಗೆ ತಿಳಿಸಬೇಕಾಗಿದೆ ಎಂದರು. 

ನಿಷ್ಠಾವಂತರಿಗೆ ಟಿಕಟ್‌ ಕೊಡಿ: ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಪ್ರವೀಣ್‌ ಗೌಡ ಮಾತನಾಡಿ, ಏಪ್ರಿಲ್‌ 18ರಂದು ನಡೆಯುವ ಲೋಕಸಭಾ ಚುನಾವಣೆಯಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್‌ ಕೊಡಬೇಕು ಎಂದು ವರಿಷ್ಠರದನ್ನು ಒತ್ತಾಯಿಸಿದರು. ಪಕ್ಷಾಂತರ ಮಾಡಿದವರಿಗೆ ಉಪಚುನಾವಣೆಯಲ್ಲಿ ಟಿಕೆಟ್‌ ಕೊಟ್ಟು ಅವಮಾನ ಅನುಭವಿಸಲಾಗಿದೆ. ಹೀಗಾಗಿ ನಿಷ್ಠಾವಂತರನ್ನು ಗುರುತಿಸಿ ಟಿಕೆಟ್‌ ಕೊಡಿ. ಅಭ್ಯರ್ಥಿ ಯಾರೇ ಆದರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಹಪ್ರಭಾರಿ ಜಿ.ಮರಿಸ್ವಾಮಯ್ಯ, ಬಿಜೆಪಿ ಪ್ರಮುಖರಾದ ಬಿ.ನಾಗೇಶ್‌, ಪಿ.ರವಿಕುಮಾರ್‌, ಎಸ್‌.ಆರ್‌.ನಾಗರಾಜು, ಆರ್‌.ವಿ.ಸುರೇಶ್‌, ಚಂದ್ರಶೇಖರ ರೆಡ್ಡಿ, ನರಸಿಂಹಯ್ಯ, ಪಿ.ರವಿಕುಮಾರ್‌, ಗುಲಾಬ್‌ ಜಾನ್‌, ಮಲವೇಗೌಡ, ಎಂ. ವಿಜಯ ಕುಮಾರ್‌ ಮುಂತಾದವರು ಹಾಜರಿದ್ದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುರಳೀಧರ ಸ್ವಾಗತಿಸಿದರು. ಜಿ.ವಿ.ಪದ್ಮನಾಭ ನಿರೂಪಿಸಿದರು. ವರದರಾಜ ಗೌಡ ವಂದಿಸಿದರು.
 
ನರೇಂದ್ರ ಮೋದಿ ಸರ್ಕಾರದ ಸಾಧನೆಗಳೇ ಗೆಲುವಿನ ಮಂತ್ರ: ದೇಶದ ಪ್ರಧಾನಿಯಾಗಿ ನರೇಂದ್ರಮೋದಿ ಅವರು ನಿಸ್ವಾರ್ಥದಿಂದ ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಾಡಿರುವ ಸಾಧನೆಗಳೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ಮಂತ್ರವಾಗಲಿದೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ತಿಳಿಸಿದರು. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಕ್ಷದ ಪದಾಧಿಕಾರಿಗಳಾಗಿರುವವರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು.

ಇಲ್ಲದಿದ್ದರೆ ಅವರ ಬದಲಿಗೆ ಬೇರೊಬ್ಬರನ್ನು ನೇಮಿಸಲಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಮಾಡಲು ಸಣ್ಣಪುಟ್ಟ ಪಕ್ಷಗಳು ಒಂದಾಗಿವೆ. ತಮ್ಮ ಕುಟುಂಬದವರನ್ನು, ಮಕ್ಕಳನ್ನು ಶಾಸಕರನ್ನಾಗಿ, ಸಚಿವರನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಇವರಿಗೆಲ್ಲಾ ದೇಶದ ಅಭಿವೃದ್ಧಿ ಬೇಕಾಗಿಲ್ಲ. ಇಂತಹವರ ವಿರುದ್ಧ ಜನರ ತಕ್ಕ ಪಾಠ ಕಲಿಸಬೇಕು ಎಂದರು. 

ಗೂಂಡಾಗಿರಿಗೆ ಹೆದರದಿರಿ: ಜಿಲ್ಲೆಯಲ್ಲಿ ನಕಲಿ ಮತದಾನವನ್ನು ತಡೆಯಬೇಕಾಗಿದೆ. ಈ ವಿಚಾರದಲ್ಲಿ ಕನಕಪುರದ ಸಹೋದರರ ಗೂಂಡಾಗಿರಿಗೆ ಯಾರೂ ಹೆದರಿಕೊಳ್ಳಬೇಕಾಗಿಲ್ಲ. ಪಕ್ಷದ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚರ ವಹಿಸಬೇಕು. ಕಡ್ಡಾಯವಾಗಿ ಮತ ಹಾಕುವಂತೆ ಮತದಾರರು ಮನವೊಲಿಸಿ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ. ರುದ್ರೇಶ್‌ ಸಲಹೆ ನೀಡಿದರು.

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.