ಮುದ್ದಹನುಮೇಗೌಡ, ರಾಜಣ್ಣಗೆ ಎಂಎಲ್ಸಿ ಗಿಫ್ಟ್?


Team Udayavani, Mar 30, 2019, 6:20 AM IST

5 g

ಬೆಂಗಳೂರು: ತುಮಕೂರಿನಲ್ಲಿ ಮೈತ್ರಿ ಪಕ್ಷಕ್ಕೆ ಕಂಟಕವಾಗಿದ್ದ ಹಾಲಿ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಅವರು ಬಂಡಾಯ ಅಭ್ಯರ್ಥಿಗಳಾಗಿ ಸಲ್ಲಿಸಿರುವ ತಮ್ಮ ನಾಮಪತ್ರ ವಾಪಸ್‌ ಪಡೆದುಕೊಂಡಿದ್ದಾರೆ. ಇದರಿಂದ ತುಮಕೂರು ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮೈತ್ರಿ ಪಕ್ಷಗಳ ಬೆಂಬಲದ
ಜೆಡಿಎಸ್‌ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ನಿಟ್ಟುಸಿರು ಬಿಡುವಂತಾಗಿದೆ.

ಹಾಲಿ ಸಂಸದರಾಗಿರುವ ಮುದ್ದಹನುಮೇಗೌಡರು ಪಕ್ಷದ ತೀರ್ಮಾನದಿಂದ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದರಿಂದ ಸಂಕಷ್ಟಕ್ಕೆ ಸಿಲುಕಿದ್ದ
ರಾಜ್ಯ ಕಾಂಗ್ರೆಸ್‌ ನಾಯಕರು ಕಳೆದ ಐದು ದಿನಗಳಿಂದ ನಿರಂತರವಾಗಿ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದರು.

ಶುಕ್ರವಾರ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ್‌ ಅವರು ಶುಕ್ರವಾರ
ಮುದ್ದಹನುಮೇಗೌಡರ ನಿವಾಸಕ್ಕೆ ತೆರಳಿ, ರಾಹುಲ್‌ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್‌ ಅವರ ಮೂಲಕ ಮನವೊಲಿಕೆ ಮಾಡಿದ ನಂತರ ನಾಮಪತ್ರ ವಾಪಸ್‌ ಪಡೆಯಲು ನಿರ್ಧರಿಸಿದರು ಎಂದು ತಿಳಿದು ಬಂದಿದೆ.

ಮಾಜಿ ಪ್ರಧಾನಿ ದೇವೇಗೌಡರೇ ಸ್ಪರ್ಧೆ ಮಾಡಿರುವುದರಿಂದ ಅವರ ವಿರುದಟಛಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ, ಮೈತ್ರಿ ಧರ್ಮ ಪಾಲನೆಗೆ ಧಕ್ಕೆಯಾಗುತ್ತದೆ. ಪಕ್ಷದಲ್ಲಿ ನಿಮಗೆ ಸೂಕ್ತ ಸ್ಥಾನ ನೀಡಿ, ನಿಮ್ಮ ಗೌರವ ಕಾಪಾಡುವ ಕೆಲಸ ಮಾಡುವ ಜವಾಬ್ದಾರಿ ನಮ್ಮದು ಎಂದು ಇಬ್ಬರೂ ನಾಯಕರು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಹೈಕಮಾಂಡ್‌ ನಾಯಕರ ಭರವಸೆಯ ಹಿನ್ನೆಲೆಯಲ್ಲಿ ನಾಮಪತ್ರ ವಾಪಸ್‌ ಪಡೆಯಲು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ನಾಯಕರ ಮನವೊಲಿಕೆಯ ನಂತರ
ಮುದ್ದಹನುಮೇಗೌಡರು ತಮ್ಮ ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕೆಲವು ಕಾರ್ಯಕರ್ತರು, ಪಕ್ಷದ ನಾಯಕರು ನಿಮಗೆ ಸೂಕ್ತ ಗೌರವ,
ಸ್ಥಾನಮಾನ ನೀಡುವ ಭರವಸೆ ನೀಡಿದ್ದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಿ, ಇಲ್ಲದಿದ್ದರೆ ಚುನಾವಣೆ ಎದುರಿಸಲು ನಾವು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.

ಆದರೆ, ಪಕ್ಷದ ನಾಯಕರ ಭರವಸೆಯ ಹಿನ್ನೆಲೆಯಲ್ಲಿ ನಾಮಪತ್ರ ವಾಪಸ್‌ ಪಡೆಯುವ ನಿರ್ಧಾರ ತೆಗೆದುಕೊಂಡು, ತಮಗೆ ಬೇಸರ ಆಗಿರುವುದರಿಂದ ತಮ್ಮ ಆಪ್ತ ರವಿಕುಮಾರ್‌ ಎನ್ನುವವರ ಮೂಲಕ ನಾಮಪತ್ರ ವಾಪಸ್‌ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್‌ ಮೂಲಗಳ ಪ್ರಕಾರ ಅವರಿಗೆ ವಿಧಾನ ಪರಿಷತ್‌ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ತಮಗೆ ಆಗಿರುವ ನೋವಿನಿಂದಾಗಿ, ಸದ್ಯ ಚುನಾವಣೆ ಸಂದರ್ಭದಲ್ಲಿ ಅಂತರ ಕಾಯ್ದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುದ್ದಹನುಮೇಗೌಡರು ನಾಮಪತ್ರ ವಾಪಸ್‌ ಪಡೆದರೆ ತಾವು ವಾಪಸ್‌ ಪಡೆಯುವುದಾಗಿ ಪಕ್ಷದ ನಾಯಕರಿಗೆ ಮಾತು ಕೊಟ್ಟಂತೆ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಕೂಡ ತಮ್ಮ ನಾಮಪತ್ರವನ್ನು ವಾಪಸ್‌ ಪಡೆದುಕೊಂಡ‌ರು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.