ಮಂಗಳೂರಿನಲ್ಲಿ ಮೋದಿ ರ‍್ಯಾಲಿ ಹೊಸ ಇತಿಹಾಸ ನಿರ್ಮಿಸಲಿದೆ – ಸುನಿಲ್ ಕುಮಾರ್
Team Udayavani, Apr 10, 2019, 12:27 PM IST
ಮಂಗಳೂರು: ಲೋಕ ಸಮರಕ್ಕೆ ಬೆರಳೆಣಿಕೆಯ ದಿನಗಳು ಬಾಕಿಯಿರುವಂತೆ ಕರಾವಳಿಯಲ್ಲಿ ಭಾಜಪಾ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹೊತ್ತುಕೊಂಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಮಂಗಳೂರು ನಗರ, ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ಕಳೆದ ಬಾರಿ ನರೇಂದ್ರ ಮೋದಿ ಮಂಗಳೂರಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದಾಗ ದಾಖಲೆಯ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿ ಹೊಸ ಇತಿಹಾಸ ನಿರ್ಮಿಸಿದ್ದೆವು.ಆದರೆ ಈ ಬಾರಿಯ ಸಮಾವೇಶ ಇದುವರೆಗಿನ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ನಿರ್ಮಿಸಲಿದೆ ಎಂದು ಸುನಿಲ್ ಕುಮಾರ್ ಹೇಳಿದರು.
ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ ಮಂಗಳೂರು ನಗರ ದಕ್ಷಿಣ ಮಂಡಲದಿಂದಲೇ ಸುಮಾರು 25 ಸಾವಿರ ಜನರು ಭಾಗವಹಿಸುವ ಯೋಜನೆಯಿದೆ.ಕಳೆದ ಬಾರಿಗಿಂತಲೂ ಹೆಚ್ಚಿನ ಲೀಡ್ ನೀಡುವ ಮೂಲಕ ಪ್ರಧಾನಿ ಮೋದಿಜೀ ಅವರ ಕೈ ಬಲಪಡಿಸುವಲ್ಲಿ ನಮ್ಮ ಕ್ಷೇತ್ರ ಮಹತ್ತರವಾದ ಪಾತ್ರ ವಹಿಸಲಿದೆ ಎಂದರು.
ಎಪ್ರಿಲ್ 13 ರಂದು ನಡೆಯುವ ಸಮಾವೇಶದ ಪೂರ್ವಭಾವಿ ತಯಾರಿಗಾಗಿ ಸಭೆ ಕರೆಯಲಾಗಿತ್ತು.ಸಭೆಯಲ್ಲಿ ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ,ಪ್ರತಾಪ್ ಸಿಂಹ ನಾಯಕ್,ಬ್ರಿಜೇಶ್ ಚೌಟ,ಪ್ರೇಮಾನಂದ ಶೆಟ್ಟಿ, ಗಣೇಶ್ ಹೊಸಬೆಟ್ಟು,ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಶ್ರೀನಿವಾಸ್ ಶೇಟ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.