ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲ್ಲ: ಸಿದ್ದು
Team Udayavani, Mar 2, 2019, 2:46 AM IST
ಎಚ್.ಡಿ.ಕೋಟೆ: ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಸಾಕಷ್ಟು ಮಂದಿ ಪ್ರಧಾನಿಗಳು ದೇಶವನ್ನು ಆಳಿದ್ದಾರೆ. ಆದರೆ, ನರೇಂದ್ರ ಮೋದಿಯಷ್ಟು ಸುಳ್ಳು ಭರವಸೆಗಳನ್ನು ನೀಡಿದವರು ಯಾರೂ ಇಲ್ಲ. ಮೋದಿ ಸುಳ್ಳಿನ ಸರದಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ನಗರದಲ್ಲಿ ಶುಕ್ರವಾರ ಮಾತನಾಡಿ, ಮೋದಿ ವಿರುದ್ಧ ತೀವ್ರ ವಾಗಾœಳಿ ನಡೆಸಿದರು. ಐದು ವರ್ಷಗಳ ಅಧಿಕಾರಾವಧಿಯಲ್ಲಿ ಮೋದಿ ಸಾಧನೆ ಏನು? ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯಾಗಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲ್ಲ. ಮೋದಿ ಮತ್ತೆಪ್ರಧಾನಿ ಆಗಲ್ಲ. ಬದಲಿಗೆ, ಬದಲಿಗೆ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಯುಪಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ರಾಹುಲ್ ಗಾಂಧಿಯೇಮುಂದಿನ ಪ್ರಧಾನಿ ಎಂದು ಭವಿಷ್ಯ ನುಡಿದರು.
ಗುಣಮಟ್ಟದ ತಿಂಡಿ ಮತ್ತು ಊಟವನ್ನು ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಕೊಡಬೇಕು. ಹಸಿವಿನಿಂದ ಯಾರೂ ಇರಬಾರದು ಎಂಬ ಉದ್ದೇಶದಿಂದ ರಾಜ್ಯದಲ್ಲಿ
ಇಂದಿರಾ ಕ್ಯಾಂಟೀನ್‌ಗಳನ್ನು ಈ ಹಿಂದೆ ಆರಂಭಿಸಿದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.