ಯುವಶಕ್ತಿಯತ್ತ ಮೋದಿ ಚಿತ್ತ

Team Udayavani, Apr 10, 2019, 3:00 AM IST

Udayavani Kannada Newspaper

ಚಿತ್ರದುರ್ಗ: ಮೂರು ಜಿಲ್ಲೆಗಳ ಲೋಕಸಭೆ ಚುನಾವಣೆ ಪ್ರಚಾರಾರ್ಥ ನಗರದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಯುವ ಸಮೂಹವನ್ನೂ ಕೇಂದ್ರೀಕರಿಸಿದಂತಿತ್ತು.

ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಮೋದಿ, ಒಮ್ಮೆಲೇ “21ನೇ ಶತಮಾನದಲ್ಲಿ ಮೊದಲ ಬಾರಿ ಮತದಾನ ಮಾಡುತ್ತಿರುವ ಯುವ ಪೀಳಿಗೆಗ ನನ್ನ ನಮಸ್ಕಾರಗಳು’ ಎನ್ನುವ ಮೂಲಕ ಸೋಜಿಗ ಮೂಡಿಸಿದರು. ದೇಶದ ಜನಸಂಖ್ಯೆಯಲ್ಲಿ ಯುವ ಸಮೂಹವೂ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಅವರನ್ನು ಆಕರ್ಷಿಸುವ ಪ್ರಯತ್ನ ಮಾಡಿದರು. ಒಂದು ಕ್ಷಣ ರಾಜಕೀಯ ವಿಷಯವನ್ನು ಬದಿಗಿಟ್ಟು ಯುವಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಪರಿಗೆ ಸಭಿಕರು ಚಪ್ಪಾಳೆ ಮೂಲಕ ಪ್ರಶಂಸಿಸಿದರು.

ಇದೇ ಮೊದಲ ಬಾರಿ ಮತ ಚಲಾಯಿಸುತ್ತಿರುವವರು ವಿವೇಚನೆಯಿಂದ ಮತದಾನ ಮಾಡಿ ಎಂಬುದು ನನ್ನ ಪ್ರಾರ್ಥನೆ. ನಿಮ್ಮ ಮತವನ್ನು ಸದೃಢ ಸರ್ಕಾರಕ್ಕೆ, ದೇಶಕ್ಕಾಗಿ ಹುತಾತ್ಮರಾದ ಸೈನಿಕರಿಗೆ, ಬಡವರಿಗೆ ಸಮರ್ಪಿಸಿ. ರೈತರ ಕೃಷಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಓಟು ಹಾಕಿ. ಮುದ್ರಾ ಯೋಜನೆಯ ಲಾಭ ಪಡೆಯಲು ಮತ ಚಲಾಯಿಸಿ. ನಿಮ್ಮ ಒಂದೊಂದು ಮತವೂ ಅತ್ಯಮೂಲ್ಯ. . ಕಮಲ ಚಿತ್ರದ ಬಟನ್‌ ಒತ್ತಿದರೆ ನಿಮ್ಮ ಮತ ನೇರವಾಗಿ ಮೋದಿಗೆ ಸೇರುತ್ತದೆ ಎಂದು ಯುವ ಸಮೂಹವನ್ನು ಹುರಿದುಂಬಿಸಿದರು.

ಮೊಳಗಿದ ಚೌಕಿದಾರ ಘೋಷಣೆ: ಪ್ರಧಾನಿ ಮೋದಿ ಆಗಮನಕ್ಕಿಂತ ಮುನ್ನವೇ ವಿಜಯ ಸಂಕಲ್ಪ ರ್ಯಾಲಿ ನಡೆದ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಕ್ರೀಡಾಂಗಣ ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಮೋದಿ ಅಭಿಮಾನಿಗಳಿಂದ ಭರ್ತಿಯಾಗಿತ್ತು. ಎಲ್ಲ ಕಡೆ ಮೋದಿ ಭಾವಚಿತ್ರವುಳ್ಳ ಕಟೌಟ್‌ಗಳು, ಕೇಸರಿ ಬಾವುಟಗಳು ರಾರಾಜಿಸುತ್ತಿದ್ದವು. ಪ್ರಧಾನಿ ಮೋದಿ ವೇದಿಕೆಯನ್ನೇರಿ ನೆರೆದಿದ್ದವರಿಗೆ ನಮಿಸಿ ಕೈಬೀಸಿದರು.

ಇದನ್ನು ಕಂಡು ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತು. “ಚೌಕಿದಾರ..ಚೌಕಿದಾರ’ ಎಂಬ ಘೋಷಣೆ ಮೊಳಗಿತು. ಜನ ಸಾಗರವನ್ನು ಕಂಡು ಉತ್ತೇಜಿತರಾದ ಮೋದಿ, “ಈ ನಿಮ್ಮ ಚೌಕಿದಾರ ಕೊಟ್ಟ ಮಾತು ತಪ್ಪುವುದಿಲ್ಲ. ನುಡಿದಂತೆ ನಡೆಯುತ್ತಾನೆ. ಹಾಗಾಗಿ ಎಲ್ಲ ಚೌಕಿದಾರರೂ ಒಟ್ಟಾಗಿ ನಡೆಯಬೇಕಿದೆ. ಅದಕ್ಕಾಗಿ ಕಮಲ ಅರಳಿಸುವಂತೆ’ ಮನವಿ ಮಾಡಿದರು. ಮೋದಿ ಭಾಷಣ ಮಾಡುತ್ತಿದ್ದಾಗಲೂ ಅಲ್ಲಲ್ಲಿ ಮೋದಿ ಮೋದಿ.. ಚೌಕಿದಾರ ಘೋಷಣೆ ಕೇಳಿ ಬರುತ್ತಲೇ ಇತ್ತು.

ಟಾಪ್ ನ್ಯೂಸ್

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.