“ಜಿಲ್ಲೆಯ 94 ಸಾವಿರ ಯುವಕರಿಗೆ ಮುದ್ರಾ ಸಾಲ’
Team Udayavani, Apr 9, 2019, 6:10 AM IST
ಉಳ್ಳಾಲ:ದೇಶದಲ್ಲಿ 12 ಕೋಟಿ ಯುವಕರಿಗೆ ಮುದ್ರಾ ಯೋಜನೆಯಡಿ ಸಾಲ ನೀಡಲಾಗಿದ್ದು, ದ.ಕ. ಜಿಲ್ಲೆಯಲ್ಲಿ 94 ಸಾವಿರ ಯುವಕರಿಗೆ 1,500 ಕೋಟಿ ರೂ. ಸಾಲವನ್ನು ಕೇಂದ್ರ ಸರಕಾರ ನೀಡಿದೆ ಎಂದು ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ತಿಳಿಸಿದರು.
ಕುರ್ನಾಡು ಮತ್ತು ಕೊಣಾಜೆ ಶಕ್ತಿ ಕೇಂದ್ರದ ಆಶ್ರಯದಲ್ಲಿ ಮುಡಿಪು ಜಂಕ್ಷನ್‌ನಲ್ಲಿ ನಡೆದ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಉಜ್ವಲ ಯೋಜನೆ, 18 ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಆರೋಗ್ಯ ವಿಮೆ, ಆಯುಷ್ಮಾನ್ ಮೋದಿ ಕೇರ್, ಜನಧನ್ ಮೂಲಕ ಜನಪ್ರಿಯ ಯೋಜನೆಗಳನ್ನು ಮೋದಿ ಜಾರಿಗೆ ತಂದರು ಎಂದರು.
ದೇಶದ ಸಾಮರ್ಥ್ಯ ಪ್ರದರ್ಶನ
ಐದು ವರ್ಷದ ಆಡಳಿತದಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ವಿಶ್ವದೆಲ್ಲೆಡೆ ಪಸರಿಸಿದ್ದಾರೆ. ಯುದ್ಧ ಕೈದಿಯನ್ನು ಪಾಕಿಸ್ಥಾನವು 48 ಗಂಟೆಗಳ ಒಳಗೆ ಭಾರತಕ್ಕೆ ಒಪ್ಪಿಸುವಂತೆ ಮಾಡಿದ್ದಾರೆ ಎಂದರು.
ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ, ಚಂದ್ರಹಾಸ್ ಉಳ್ಳಾಲ್, ಧನಲಕ್ಷಿ$¾ ಗಟ್ಟಿ, ಸತೀಶ್ ಕುಂಪಲ, ರವಿಂದ್ರ ಶೆಟ್ಟಿ ಉಳಿದೊಟ್ಟು, ನವೀನ್ ಪಾದಲ್ಪಾಡಿ, ಸೀತಾರಾಮ ಶೆಟ್ಟಿ ನೆತ್ತಿಲಬಾಳಿಕೆ, ಭಾಸ್ಕರ ದೇವಸ್ಯ, ರವಿಶಂಕರ್ ಕೆ., ಗೋಪಾಲ ಶೆಟ್ಟಿ ಅರಿ
ಬೈಲ್, ಬದರೀನಾಥ ಕಾಮತ್, ಮೋಹನರಾಜ್, ಮನೋಜ್ ಆಚಾರ್ಯ, ಹೇಮಂತ್ ದೇರಳಕಟ್ಟೆ, ರಾಜಾರಾಮ್ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.