ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ: ಶ್ರೀರಾಮುಲು
Team Udayavani, Mar 18, 2019, 1:18 AM IST
ನಾಯಕನಹಟ್ಟಿ: ಈ ಬಾರಿಯ ಲೋಕಸಭಾ ಚುನಾವಣೆಗೆ ತಾವು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಇಬ್ಬರೂ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರನ್ನು ಅಸ್ತಿತ್ವಕ್ಕೆ ತರಬೇಕಾಗಿರುವುದರಿಂದ ತಾವು ಹಾಗೂ ಯಡಿಯೂರಪ್ಪ ಇಬ್ಬರೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದರು. ಬಳ್ಳಾರಿ ಹಾಗೂ ಚಿತ್ರದುರ್ಗ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಕೋರ್ ಕಮಿಟಿ ಸಭೆಯಲ್ಲಿ ಬಹುತೇಕ ಫೈನಲ್ ಆಗಲಿದೆ. ಯಾರೇ ಅಭ್ಯರ್ಥಿಯಾದರೂ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು.
ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬರಲಿದೆ. ಕಾಂಗ್ರೆಸ್-ಜೆಡಿಎಸ್ ನಡುವೆ ಭಿನ್ನಮತ ತಾರಕಕ್ಕೇರಿದೆ. ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲೂ ಹೊಂದಾಣಿಕೆ ಯಿಲ್ಲ. ಜೆಡಿಎಸ್‌ನ ವಂಶ ಪಾರಂಪರ್ಯ ನೀತಿಯಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಬೇಸತ್ತಿದ್ದಾರೆ. ಹಾಗಾಗಿ, ಲೋಕ ಸಭಾ ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಪತನ ನಿಶ್ಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ
Naxal Surrender: ನಕ್ಸಲ್ ಶರಣಾಗತಿ ಪೂರ್ವಯೋಜಿತ ಸ್ಟೇಜ್ ಶೋ ಅಲ್ಲವೇ?
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ
Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.