ಅವಕಾಶವಾದಿಯಲ್ಲ, ಬದಲಾವಣೆ ಅನಿವಾರ್ಯವಾಗಿತ್ತು: ಎ.ಮಂಜು


Team Udayavani, Apr 14, 2019, 10:48 AM IST

manju

ಹಾಸನ ಲೋಕಸಭಾ ಕ್ಷೇತ್ರದದಲ್ಲಿ ಬಿಜೆಪಿಯಿಂದ ಎ.ಮಂಜು ಹಾಗೂ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್‌ ರೇವಣ್ಣ ಅವರು ಸ್ಪರ್ಧಿಸಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ತಮ್ಮದೇ ಆದ ತತ್ವ ಸಿದ್ಧಾಂತ ವನ್ನಿಟ್ಟುಕೊಂಡು ಪ್ರಚಾರ ನಡೆಸುತ್ತಿದ್ದಾರೆ. ತಮ್ಮ ಸ್ಪರ್ಧೆ ಹಾಗೂ ಮೂಂದಿನ ಯೋಜನೆಗಳ ಬಗ್ಗೆ ಉದಯವಾಣಿಯೊಂದಿಗೆ ಬಿಜೆಪಿ ಅಭ್ಯರ್ಥಿ ಎ.ಮಂಜು ಮಾತನಾಡಿದ್ದಾರೆ.

ಪ್ರಶ್ನೆ: ನೀವು ಪಕ್ಷಾಂತರ ಮಾಡುವ ಅವಕಾಶವಾದಿ ರಾಜಕಾರಣಿ ಎಂಬ ಆರೋಪವಿದೆ. ಇದನ್ನು ಮತದಾರೆದುರು ಹೇಗೆ ಎದುರಿಸುತ್ತೀರಿ?
* ಎ.ಮಂಜು: ನಾನು ಅವಕಾಶವಾದಿ ರಾಜಕಾರಣಿ ಅಲ್ಲ. ದಶಕಗಳ ಕಾಲ ಬದ್ಧ ವೈರಿಗಳಾಗಿದ್ದ ಕಾಂಗ್ರೆಸ್‌ – ಜೆಡಿಎಸ್‌ ಚುನಾವಣೆಯಲ್ಲಿ ಮಾಡಿಕೊಂಡ ಮೈತ್ರಿ ಸಮಾಜಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಇದರಿಂದ 2ನೇ ಹಂತದ ನಾಯಕರು ಬೆಳೆಯಲು ಅವಕಾಶವೇ ಸಿಗಲ್ಲ. ಜೆಡಿಎಸ್‌ನ ಕುಟುಂಬ ರಾಜಕಾರಣಕ್ಕೆ ಚುನಾವಣಾ ಮೈತ್ರಿ ಪೂರಕವಾಗುವುದರಿಂದ ಅನಿವಾರ್ಯವಾಗಿ ನಾನು ಬಿಜೆಪಿ ಸೇರಿದ್ದೇನೆ.

* ಪ್ರಶ್ನೆ: ಕುಟುಂಬ ರಾಜಕಾರಣ ವಿಷಯದಲ್ಲಿ ದೇವೇಗೌಡರ ಕುಟುಂಬವನ್ನೇ ಟಾರ್ಗೆಟ್‌ಮಾಡುವುದು ಏಕೆ?
* ಎ.ಮಂಜು: ಅನುಭವಿಗಳಿದ್ದರೆ ಕುಟುಂಬ ರಾಜಕಾರಣ ತಪ್ಪಲ್ಲ. ಈಗ ನನ್ನ ಮಗನೂ ಜಿಲ್ಲಾ ಪಂಚಾಯಿತಿ ಸದಸ್ಯ. ಆದರೆ ಈಗ ನನ್ನ ಎದುರಾಳಿ ಯಾಗಿರುವ ಜೆಡಿಎಸ್‌ ಅಭ್ಯರ್ಥಿಗೆ ರಾಜಕೀಯದ ಅನುಭವವೇ ಇಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದಲ್ಲಿ ಸೂಟ್‌ಕೇಸ್‌ ಕೊಟ್ಟವರಿಗೆ ಟಿಕೆಟ್‌ ಕೊಡಲಾಗುತ್ತಿದೆ ಎಂದು ಹೇಳಿ ವಿವಾದ ಮಾಡಿಕೊಂಡಿದ್ದ. ಇಂತಹವರು ಪಾರ್ಲಿಮೆಂಟಿಗೆ ಹೋದರೆ ಏನು ಗತಿ ಎಂಬುದೇ ನನ್ನ ಆತಂಕ.

*ಪ್ರಶ್ನೆ: ನೀವು ಮಂತ್ರಿಯಾಗಿದ್ದಾಗ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ ಎಂಬ ನಿಮ್ಮ ಎದುರಾಳಿಗಳ ಆರೋಪಕ್ಕೆ ಉತ್ತರವೇನು?
* ಎ.ಮಂಜು: ನಾನು ಮಂತ್ರಿಯಾಗಿದ್ದ ಎರಡು ವರ್ಷಗಳ ಅವಧಿಯಲ್ಲಿ ಹಾಸನ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಯ 160 ಕೋಟಿ ರೂ. ಅಂದಾಜಿನ ಅಮೃತ್‌ ಯೋಜನೆ, ರಸ್ತೆ, ಕುಡಿಯುವ ನೀರು, ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಜಿಲ್ಲೆಯಲ್ಲಿ ಸುಮಾರು 6 ರಿಂದ 7 ಸಾವಿರ ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದೇನೆ. ಅರಕಲಗೂಡು ವಿಧಾನಸಭಾ ಕ್ಷೇತ್ರವೊಂದಕ್ಕೇ 2,500 ಕೋಟಿ ರೂ. ಅನುದಾನ ಬಂದಿತ್ತು. ನನ್ನ ವಿರೋಧಿಗಳು ಅಭಿವೃದ್ಧಿ ಸಹಿಸದೇ ಆರೋಪ ಮಾಡುತ್ತಾರೆ.

*ಪ್ರಶ್ನೆ: ಸಂಸದರಾದರೆ ನಿಮ್ಮ ಆದ್ಯತೆಗಳೇನು?
*ಎ.ಮಂಜು: ಜಿಲ್ಲೆಯ ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಸಲು ಬಹುಗ್ರಾಮ ಯೋಜನೆಗೆ ಕೇಂದ್ರ ಸರ್ಕಾರ ದಿಂದ ಅನುದಾನ ಕೊಡಿಸುವುದು. ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳುವೆ.

* ಪ್ರಶ್ನೆ: ಹಾಸನಕ್ಕೆ ಐಐಟಿ ಅಗತ್ಯವೇ ಇಲ್ಲ ಎನ್ನಲು ಕಾರಣವೇನು?
*ಎ.ಮಂಜು: ಹಾಸನಕ್ಕೆ ಐಐಟಿ ಬೇಡ ಎಂದಲ್ಲ. ಒಂದು ದಶಕದಿಂದ ಐಐಟಿಗಾಗಿ ರೈತರ ಜಮೀನು ಸ್ವಾಧೀನಪಡಿಸಿ ಕೊಂಡು ಕಾಯ್ದಿರಿಸುವ ಅಗತ್ಯವಿಲ್ಲ. ಆ ಭೂಮಿ ರೈತರಿಗೆ ಕೊಡುವುದು ಸೂಕ್ತ ಎಂದು. ಅಧಿಕಾರವಿಲ್ಲ ದಿದ್ದಾಗ ಐಐಟಿಗಾಗಿ ಹೋರಾಡುವ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಹಾಸನಕ್ಕೆ ಐಐಟಿ ಮಂಜೂರು ಮಾಡಿಲ್ಲ. ಮುಂದಿನ ದಿನಗಳಲ್ಲಿ ಹಾಸನಕ್ಕೂ ಐಐಟಿ ಬರಬಹುದು.

*ಪ್ರಶ್ನೆ: ಎರಡು ವಾರದಿಂದ ಬಿರುಸಿನ ಪ್ರಚಾರ ನಡೆಸುತ್ತಿದ್ದೀರಿ ಪರಿಸ್ಥಿತಿ ಹೇಗಿದೆ?
*.ಮಂಜು: ಇಡೀ ಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ.ಬಿಜೆಪಿಯ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಬಹುತೇಕ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಯ ವಿರುದ್ಧವಿದ್ದು ನನ್ನ ಜೊತೆಗಿದ್ದಾರೆ. 2019ರಲ್ಲಿ ಮೋದಿ ಮತ್ತೆ ಪ್ರಧಾನಿಯಾಗಲು ಕ್ಷೇತ್ರದ ಬಹುತೇಕ ಮತದಾರರು ನನ್ನ ಪರವಾಗಿದ್ದಾರೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.