ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ ತೀರಿಸುವೆ

ಭಯೋತ್ಪಾದನೆ, ನಕ್ಸಲ್‌ವಾದ ನಿರ್ಮೂಲನೆ ಮಾಡಿಯೇ ಸಿದ್ಧ: ಪ್ರಧಾನಿ ನರೇಂದ್ರ ಮೋದಿ

Team Udayavani, May 6, 2019, 6:06 AM IST

PTI5_5_2019_000247A

ಹೊಸದಿಲ್ಲಿ: “ಹುತಾತ್ಮರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ ತೀರಿಸಿಯೇ ಸಿದ್ಧ ಎಂದು ನಾನು ಶಪಥ ಮಾಡಿದ್ದೇನೆ. ದೇಶ ದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುತ್ತೇನೆ’.

ಮಧ್ಯಪ್ರದೇಶದ ಸಾಗರದಲ್ಲಿ ರವಿವಾರ ಚುನಾವಣ ಪ್ರಚಾರ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಮಾತು ಗಳನ್ನಾಡಿದ್ದಾರೆ. ಈ ಚೌಕಿದಾರನು ಪ್ರತಿಯೊಬ್ಬ ಯೋಧನ ನೆತ್ತರಿಗೂ ಪ್ರತೀಕಾರ ತೀರಿಸಲು ಪಣ ತೊಟ್ಟಿದ್ದಾನೆ. ಅದಕ್ಕೆ ನಿಮ್ಮ ಆಶೀರ್ವಾದ ಬೇಕಿದೆ. ಪಾಕಿಸ್ಥಾನದ ಸೂಪರ್‌ ಫೇವರಿಟ್‌ ಭಯೋತ್ಪಾದಕ ಮಸೂದ್‌ ಅಜರ್‌ಗೆ ವಿಶ್ವಸಂಸ್ಥೆ ಹೇರಿದ ನಿಷೇಧ ಹಾಗೂ ಭಾರತದ ನಿಲುವಿಗೆ ಇತರೆಲ್ಲ ದೇಶಗಳೂ ಸಮ್ಮತಿಸಿದ ರೀತಿಯು ಪಾಕಿಸ್ಥಾನಕ್ಕೆ ಕಪಾಳ ಮೋಕ್ಷವಾದಂತಾಗಿದೆ. ಆದರೆ, ಇದು ಕೇವಲ ಆರಂಭವಷ್ಟೆ. ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ. ಈಗ ಪಾಕಿಸ್ಥಾನವೇ ತಾವು ಯಾವ ಹಾದಿಯಲ್ಲಿ ಸಾಗಬೇಕು ಎಂಬುದನ್ನು ನಿರ್ಧರಿಸಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಹುಲ್‌ ವಿರುದ್ಧ ವಾಗ್ಧಾಳಿ: ಯುಕೆ ಮೂಲದ ಬ್ಯಾಕಾಪ್ಸ್‌ ಕಂಪೆನಿ ಜತೆಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿಗಿದೆ ಎನ್ನ ಲಾದ ನಂಟಿನ ಬಗ್ಗೆಯೂ ಭಾಷಣದಲ್ಲಿ ಪ್ರಸ್ತಾವಿಸಿದ ಮೋದಿ, “ಬ್ಯಾಕಾಪ್ಸ್‌ ಎಂಬ ಹೆಸರೇ ಕಾಂಗ್ರೆಸ್‌ ಅಧ್ಯಕ್ಷರ ಹಿಂಬಾಗಿಲ ಕಾರ್ಯಾಚರಣೆಯನ್ನು ಸೂಚಿಸುತ್ತದೆ. 21ನೇ ಶತಮಾನದ ಒಂದಿಡೀ ದಶಕವನ್ನೇ ಭಾರತವು ಕಳೆದುಕೊಂಡಿತು. 2004ರಲ್ಲಿ ಕಾಂಗ್ರೆಸ್‌ “ಕುಟುಂಬಕ್ಕೆ ವಿಧೇಯ’ರಾದ ಮನಮೋಹನ್‌ ಸಿಂಗ್‌ರನ್ನು ಪ್ರಧಾನಿ ಹುದ್ದೆಗೇರಿಸಿತು.

ಏಕೆಂದರೆ, ಆಗ ರಾಜಕುಮಾರ ಇನ್ನೂ ಆ ಹುದ್ದೆಗೇರಲು ಸಜ್ಜಾಗಿರಲಿಲ್ಲ. ಆತನಿಗೆ ತರಬೇತಿ ನೀಡುವ ಯತ್ನವೆಲ್ಲವೂ ವಿಫ‌ಲವಾಯಿತು’ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಅಧ್ಯಕ್ಷರ ಹಗರಣಗಳು ಈಗ ನೆಲ, ಜಲ ಹಾಗೂ ಆಕಾಶದಿಂದಲೂ ಒಂದೊಂದಾಗಿ ಹೊರಬರುತ್ತಿದೆ ಎಂದೂ ಹೇಳಿದ್ದಾರೆ.

ತಲಾಖ್‌ ಪ್ರಸ್ತಾವ: ಉತ್ತರಪ್ರದೇಶದ ಭದೋಹಿಯಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಒಂದೇ ಬಾರಿಗೆ ತ್ರಿವಳಿ ತಲಾಖ್‌ ನೀಡುವ ಪದ್ಧತಿಗೆ ನಿಷೇಧ ಹೇರುವಂಥ ಮಸೂದೆಗೆ ಅಡ್ಡಿಪಡಿಸಲು ವಿಪಕ್ಷಗಳು ಹರಸಾಹಸ ಪಡುತ್ತಿವೆ. ಆದರೆ, ಅವರ ಯತ್ನವು ಸಫ‌ಲವಾಗಲು ನಾನು ಬಿಡುವುದಿಲ್ಲ ಎಂದಿದ್ದಾರೆ. ಜತೆಗೆ, ಮಹಾಮಿಲಾವಟ್‌ನ ಪಕ್ಷಗಳು ಅಧಿಕಾರವನ್ನು ತಮ್ಮ ಸಂಪತ್ತು ವೃದ್ಧಿಸಿಕೊಳ್ಳಲು ಬಳಸಿದವು ಎಂದೂ ಮೋದಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.