ಚುನಾವಣೆ ಬಳಿಕ ರಾಜೀನಾಮೆ ನೀಡಲು ಕ್ಯೂ ನಿಲ್ತಾರೆ
Team Udayavani, Apr 14, 2019, 3:00 AM IST
ಕಲಬುರಗಿ: ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿದ್ದ ಡಾ. ಉಮೇಶ ಜಾಧವ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸತ್ಯ ಅರಿತಿದ್ದು, ಲೋಕಸಭೆ ಚುನಾವಣೆ ಬಳಿಕ ರಾಜೀನಾಮೆ ನೀಡಲು ಕಾಂಗ್ರೆಸ್ ಪಕ್ಷದ ಶಾಸಕರು ಕ್ಯೂನಲ್ಲಿ ನಿಂತುಕೊಳ್ಳುತ್ತಾರೆ ಎಂದು ಬಿಜೆಪಿ ಮುಖಂಡ, ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಶನಿವಾರ ನಗರದಲ್ಲಿ ಮಾತನಾಡಿದ ಅವರು, ಒಬ್ಬೊಬ್ಬರಾಗಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವುದರಿಂದ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರ ಬೀಳುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಏನು ಹೇಳುತ್ತಾರೆಯೋ ಅದು ಉಲ್ಟಾ ಆಗುತ್ತದೆ. 2014ರ ಲೋಕಸಭೆ ಚುನಾವಣೆ ವೇಳೆ ನರೇಂದ್ರ ಮೋದಿ ಪ್ರಧಾನಿಯಾಗಲ್ಲ ಎಂದಿದ್ದರು.
ನಂತರ ಪ್ರಧಾನಿಯಾದರು. ಅದೇ ರೀತಿ ಕಳೆದ ವಿಧಾನಸಭೆ ಚುನಾವಣೆ ವೇಳೆ ಎಚ್.ಡಿ. ಕುಮಾರಸ್ವಾಮಿ ಅವರಪ್ಪನಾಣೆಗೆ ಸಿಎಂ ಆಗೋದಿಲ್ಲ ಎಂದಿದ್ದರು. ಈಗ ಕಲಬುರಗಿ ಲೋಕಸಭಾ ಅಭ್ಯರ್ಥಿ ಡಾ. ಉಮೇಶ ಜಾಧವ ಗೆಲ್ಲುವುದಿಲ್ಲ ಎನ್ನುತ್ತಿದ್ದಾರೆ. ಜಾಧವ ಖಂಡಿತವಾಗಿ ಗೆಲುವು ಸಾಧಿಸಿ, ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಲಿನ ರುಚಿ ತೋರಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.