ಏಪ್ರಿಲ್ 19ರಂದು ರಾಜ್ಯದಲ್ಲಿ ರಾಹುಲ್ ಪ್ರಚಾರ
Team Udayavani, Apr 16, 2019, 3:00 AM IST
ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಏಪ್ರಿಲ್ 19ರಂದು ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಎರಡನೇ ಹಂತದಲ್ಲಿ ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಆ ಹಿನ್ನೆಲೆಯಲ್ಲಿ ಏಪ್ರಿಲ್ 19ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಈ ಮುಂಚೆ ಏಪ್ರಿಲ್ 18ರಂದು ರಾಹುಲ್ ಗಾಂಧಿ ಅವರು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ, ಅಂದು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮತದಾನ ನಡೆಯುವುದರಿಂದ ಮೈತ್ರಿ ಪಕ್ಷಗಳ ನಾಯಕರು ಮತದಾನದ ಸಂದರ್ಭದಲ್ಲಿ ಕ್ಷೇತ್ರಗಳಲ್ಲಿ ಇರಬೇಕಾಗುತ್ತದೆ ಎನ್ನುವ ಕಾರಣಕ್ಕೆ ಏಪ್ರಿಲ್ 19ರಂದು ಪ್ರಚಾರ ಕಾರ್ಯ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.