ಸುಪ್ರೀಂ ಆದೇಶ ರಾಜಕೀಯಕ್ಕೆ ಬಳಸಿದ ರಾಹುಲ್‌ ಕ್ಷಮೆ ಯಾಚಿಸಲಿ

Team Udayavani, Apr 17, 2019, 6:30 AM IST

thawar-chand-gehlot

ಮಂಗಳೂರು:ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನೀಡಿದ್ದ ಆದೇಶವನ್ನು ತಮ್ಮ ವೈಯಕ್ತಿಕ ರಾಜಕೀಯ ಟೀಕೆಗೆ ಬಳಸಿಕೊಂಡ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಸುಪ್ರಿಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ತತ್‌ಕ್ಷಣವೇ ರಾಹುಲ್‌ ಅವರು ಸುಪ್ರೀಂ ಕೋರ್ಟ್‌ ಹಾಗೂ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ತಾವರ್‌ ಚಂದ್‌ ಗೆಹೊÉàಟ್‌ ಆಗ್ರಹಿಸಿದ್ದಾರೆ.

ಕಾಸರಗೋಡಿನಲ್ಲಿ ಆಯೋಜಿಸಲಾದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಹುಲ್‌ ಅವರು ತಮ್ಮ ರಾಜಕೀಯ ಉದ್ದೇಶಕ್ಕಾಗಿ ನ್ಯಾಯಾಲಯದ ಆದೇಶವನ್ನೇ ಬೇರೆ ರೀತಿಯಲ್ಲಿ ಉಲ್ಲೇಖೀಸುತ್ತಿದ್ದಾರೆ. ರಾಜಕೀಯದಲ್ಲಿ ನ್ಯಾಯಾಲಯವನ್ನು ಎಳೆದು ತರುವ ಮೂಲಕ ಕೆಟ್ಟ ರಾಜಕೀಯ ಮಾಡಿದ್ದಾರೆ. ಇದು ಖಂಡನೀಯ ಎಂದರು.

ಜೆಡಿಎಸ್‌-ಕಾಂಗ್ರೆಸ್‌ಗೆ ಅಧಿಕಾರದ ಲಾಲಸೆ
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಮೂರನೇ ಎರಡು ಭಾಗ ಮತಗಳನ್ನು ಪಡೆಯುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ. ಕರ್ನಾಟಕದಲ್ಲಿ ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಅಧಿಕಾರದ ಲಾಲಸೆಯಲ್ಲಿ ಆಡಳಿತ ನಡೆಸುತ್ತಿದೆಯೇ ವಿನಹ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿಲ್ಲ. ರಾಜ್ಯ ಸರಕಾರವು ಕೇಂದ್ರದಿಂದ ನೀಡಿದ ಅನುದಾನ ಬಳಕೆಯಲ್ಲೂ ವಿಫ‌ಲವಾಗಿದ್ದು, ಕೇಂದ್ರಕ್ಕೆ ಅನುದಾನ ಬಳಕೆಯ ಪ್ರಮಾಣ ಪತ್ರವನ್ನೂ ಒದಗಿಸಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲಲಿದೆ ಎಂದರು.

ವಿಪಕ್ಷ ವಿಕಾಸವಾದದ ಬಗ್ಗೆ ಮಾತನಾಡುವ ಬದಲು ಜನರನ್ನು ಗೊಂದಲಕ್ಕೀಡುಮಾಡುವ ಉದ್ದೇಶದಿಂದ ಆರೋಪಗಳನ್ನು, ಅಸತ್ಯವನ್ನು ಮಾತ್ರವೇ ಹೇಳುತ್ತಿದೆ. ಸ್ವಾತಂತ್ರ್ಯ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸರಕಾರಕ್ಕೂ ಇಂದಿನ ಸೋನಿಯಾ ಗಾಂಧಿ, ರಾಹುಲ್‌
ಗಾಂಧಿ ನೇತೃತ್ವದ ಸರಕಾರಕ್ಕೂ ಯಾವುದೇ ಸಮಾನತೆ ಇಲ್ಲ. ಸ್ವಾತಂತ್ರ್ಯ
ಸಂದರ್ಭದಲ್ಲಿ ಗಾಂಧಿಯವರು ವಂದೇಮಾತರಂ ಮೂಲಕ ಹೋರಾಟ
ನಡೆಸಿದ್ದರೆ, ಇಂದಿನ ಗಾಂಧಿ ಕುಟುಂಬಕ್ಕೆ ವಂದೇ ಮಾತರಂ, ಭಾರತ್‌ ಮಾತಾಕಿ ಜೈ ಎಂಬ ಘೋಷಣೆಗಳು ಅಪಥ್ಯವಾಗಿವೆ. ದೇಶವನ್ನು ವಿಭಜಿಸುವ ವಿಷಯಗಳಿಗೆ ಅವರು ಒತ್ತು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಎಲ್ಲೆಡೆ ಮೋದಿ ಹವಾ
ದೇಶದಲ್ಲಿ ವಿಪಕ್ಷಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ವಂಶವಾದವನ್ನು ಮುಂದುವರಿಸುತ್ತಿರುವ ಕಾಂಗ್ರೆಸ್‌ ಪಕ್ಷದಲ್ಲಿ ಉತ್ತಮ ವ್ಯಕ್ತಿಗಳಿದ್ದರೂ ಅವರಿಗೆ ಅವಕಾಶ ನೀಡಲಾಗುತ್ತಿಲ್ಲ. ಈಗಾಗಲೇ ನಡೆದಿರುವ ಪ್ರಥಮ ಹಂತದ ಮತದಾನದ ವೇಳೆ ಪ್ರಧಾನಿ ನರೇಂದ್ರ ಮೋದಿ ಹವಾ
ಕಂಡುಬಂದಿದ್ದು, ಎ. 18ರಂದು ನಡೆಯಲಿರುವ ದ್ವಿತೀಯ ಹಂತದ ಮತದಾನಕ್ಕೂ ಈ ಅಲೆ ಎಲ್ಲೆಡೆ ವ್ಯಕ್ತವಾಗಿದೆ. ದೇವೇಗೌಡರು ಕುಟುಂಬ ರಾಜಕಾರಣ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ದೇಶದ ಜನತೆ ವಂಶವಾದವನ್ನು ನಿರಾಕರಿಸುವ ಹುಮ್ಮಸ್ಸಿನಲ್ಲಿದ್ದಾರೆ ಎಂದರು.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ಗೆ 3 ದಿನಗಳ ಪ್ರಚಾರ
ನಿಷೇಧ ಮಾಡಿರುವ ಚುನಾವಣಾ ಆಯೋಗದ ಕ್ರಮದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ದೂರಿನ ಮೇರೆಗೆ ಕ್ರಮ ಕೈಗೊಳ್ಳುತ್ತದೆ. ಸ್ವಯಂ ಪ್ರೇರಿತವಾಗಿಯೂ ಕ್ರಮ ಕೈಗೊಳ್ಳುವ ಅವಕಾಶ ಆಯೋಗಕ್ಕಿದೆ. ಹಾಗಾಗಿ ಅದು ಮಾಡಿರುವ ಕ್ರಮ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್‌, ಡಾ| ವೈ. ಭರತ್‌ ಶೆಟ್ಟಿ, ನಾಯಕರಾದ ಮೋನಪ್ಪ ಭಂಡಾರಿ, ಕ್ಯಾ|ಗಣೇಶ್‌ ಕಾರ್ಣಿಕ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ

Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ

Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ

BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ

Mangaluru: ಮಹಾಕಾಳಿಪಡ್ಪು ಕೆಳಸೇತುವೆ ಜನವರಿಯಲ್ಲಿ ಪೂರ್ಣ

Mangaluru: ಮಹಾಕಾಳಿಪಡ್ಪು ಕೆಳಸೇತುವೆ ಜನವರಿಯಲ್ಲಿ ಪೂರ್ಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.