ಮತಗಟ್ಟೆ ಸಮೀಕ್ಷೆಗೂ ಮುನ್ನ ಸೆನ್ಸೆಕ್ಸ್ ಏರಿಕೆ
Team Udayavani, May 18, 2019, 1:00 AM IST
ಭಾನುವಾರ ಕೊನೆಯ ಹಂತದ ಮತದಾನ ಮುಗಿದ ಬಳಿಕವಷ್ಟೇ ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆ ಹೊರಬೀಳಲಿದೆ. ಆದರೂ, ಎಕ್ಸಿಟ್ ಪೋಲ್ ಈಗಲೇ ಮುಂಬೈ ಷೇರುಪೇಟೆ ಮೇಲೆ ಪ್ರಭಾವ ಬೀರಿದೆ. ಸ್ಥಿರ ಸರ್ಕಾರ ರಚನೆಯಾಗುತ್ತದೆಯೋ ಇಲ್ಲವೋ, ಸುಧಾರಣಾ ಕ್ರಮಗಳು ಮುಂದುವರಿಯುತ್ತದೆಯೋ ಇಲ್ಲವೋ ಎಂಬಿತ್ಯಾದಿ ವಿಚಾರಗಳು ಹೂಡಿಕೆದಾರರಲ್ಲಿ ಗೊಂದಲ ಮೂಡಿಸಿದೆ. ಆದರೂ ಸ್ಥಿರ ಸರ್ಕಾರದ ಭರವಸೆಯನ್ನು ಹೊತ್ತು ಹೂಡಿಕೆದಾರರು ಶುಕ್ರವಾರ ಷೇರುಗಳ ಭಾರೀ ಖರೀದಿಯಲ್ಲಿ ತೊಡಗಿದರು. ಪರಿಣಾಮ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 537 ಅಂಕ ಏರಿಕೆ ದಾಖಲಿಸಿ, 37,930ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಇದೇ ವೇಳೆ, ನಿಫ್ಟಿ ಕೂಡ 150 ಅಂಕ ಏರಿಕೆ ಕಂಡು, ದಿನಾಂತ್ಯಕ್ಕೆ 11,407ರಲ್ಲಿ ವಹಿವಾಟು ಮುಗಿಸಿತು. ಜಾಗತಿಕ ವಿದ್ಯಮಾನಗಳ ನಡುವೆಯೇ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಸೆನ್ಸೆಕ್ಸ್ ಏರಿಕೆಗೆ ಕಾರಣವಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.