ಪ್ರತ್ಯೇಕ ಬ್ಯಾಂಕ್ ಖಾತೆ ಕಡ್ಡಾಯ
Team Udayavani, Mar 21, 2019, 1:16 AM IST
ಚುನಾವಣಾ ಅಂದಾಕ್ಷಣ ಮುನ್ನೆಲೆಗೆ ಬರುವುದು ಹಣದ ವಿಚಾರ. ದುಡ್ಡು ಇಲ್ಲದಿದ್ದರೆ ಗೆಲ್ಲೋದು ದೂರದ ಮಾತು ಚುನಾವಣೆಗೆ ನಿಲ್ಲೋದು ಕಷ್ಟಸಾಧ್ಯ ಅನ್ನುವಂತಹ ಪರಿಸ್ಥಿತಿ ಇದೆ. ಪಕ್ಷಗಳ ಮತ್ತು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಹದ್ದಿನ ಕಣ್ಣು ಇಡುವ ಆಯೋಗ, ಪೈಸ ಪೈಸದ ಲೆಕ್ಕ ಕೇಳುತ್ತದೆ. ಅದರಂತೆ ಚುನಾವಣೆಗೆ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿ ಚುನಾವಣಾ ವೆಚ್ಚದ ನಿರ್ವಹಣೆಗೆ ಪ್ರತ್ಯೇಕ ಬ್ಯಾಂಕ್ ಖಾತೆ ತೆರೆಯಬೇಕಾಗುತ್ತದೆ. ನಾಮಪತ್ರ ಸಲ್ಲಿಸುವ ಕನಿಷ್ಠ ಒಂದು ದಿನ ಮೊದಲು ಈ ಖಾತೆ ತೆರೆದಿರಬೇಕು. ಆ ಬ್ಯಾಂಕ್ ಖಾತೆಯ ವಿವರ ಹಾಗೂ ಖಾತೆ ಸಂಖ್ಯೆಯನ್ನು ನಾಮಪತ್ರ ಸಲ್ಲಿಸುವವೇಳೆ ಅಭ್ಯರ್ಥಿಯು ಸಂಬಂಧಪಟ್ಟ ಚುನಾವಣಾಧಿಕಾರಿಗೆ ಲಿಖೀತ ರೂಪದಲ್ಲಿ ಸಲ್ಲಿಸಬೇಕು.
ಚುನಾವಣೆಗೆ ಖರ್ಚು ಮಾಡುವ ಹಣವನ್ನು ಇದೇ ಬ್ಯಾಂಕ್‌ನಲ್ಲಿ ಜಮೆ ಇಟ್ಟು, ಅದರ ಮೂಲಕವೇ ಖರ್ಚು ಮಾಡಬೇಕು. ಅಭ್ಯರ್ಥಿಯ ಹೆಸರಲ್ಲಿ ಈಗಾಗಲೇ ಇರುವ ಬ್ಯಾಂಕ್ ಖಾತೆಯನ್ನು ಚುನಾವಣಾ ವೆಚ್ಚಕ್ಕಾಗಿ ಬಳಸುವಂತಿಲ್ಲ. ಅಭ್ಯರ್ಥಿ ಹೆಸರಲ್ಲಿ ಅಥವಾ ಅವರ ಚುನಾವಣಾ ಏಜೆಂಟ್ ಹೆಸರಲ್ಲಿ ಜಂಟಿ ಖಾತೆ ತೆರೆಯಬೇಕು. ಕುಟುಂಬದ ಬೇರೆ ಸದಸ್ಯರು ಅಥವಾ ಚುನಾವಣಾ ಏಜೆಂಟ್ ಅಲ್ಲದವರ ಹೆಸರಲ್ಲಿ ಖಾತೆ ತೆರೆಯುವಂತಿಲ್ಲ. ರಾಜ್ಯದ ಯಾವುದೇ ಭಾಗದಲ್ಲಾದರೂ ಸಹಕಾರಿ ಬ್ಯಾಂಕು ಅಥವಾ ಪೋಸ್ಟ್ ಆಫೀಸ್ ಸೇರಿದಂತೆ ಯಾವುದೇ ಬ್ಯಾಂಕ್‌ನಲ್ಲಿ ಖಾತೆ ತೆರೆಯಬಹುದು. ಈ ಬ್ಯಾಂಕ್ ಖಾತೆಯ ವಹಿವಾಟಿನ ಮೇಲೆ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳು, ಆದಾಯ ತೆರಿಗೆ ಇಲಾಖೆ ಹಾಗೂ ಚುನಾವಣಾ ವೆಚ್ಚಮೇಲ್ವಿಚಾರಣೆ ತಂಡಗಳು ವಿಶೇಷ ನಿಗಾ ಇಟ್ಟಿರುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.