ಮೋದಿ ಬಾಗಲಕೋಟೆಯಿಂದ ಸ್ಪರ್ಧಿಸಲಿ: ಪಾಟೀಲ್ ಸವಾಲು
Team Udayavani, Mar 17, 2019, 1:23 AM IST
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಲಿ. ನಾವು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರ ಶಕ್ತಿ ಏನೆಂದು ತೋರಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಟ್ವೀಟ್ ಮೂಲಕ ಸವಾಲೆಸೆದಿದ್ದಾರೆ.
ಬಾದಾ ಮಿಯ ಯುವಕ ಇಷ್ಟಲಿಂಗ ನರೇಗಲ್ ಎಂಬಾತ ಪ್ರಧಾನಿ ಮೋದಿ ಅವರು ದಕ್ಷಿಣ ಭಾರತದ ಅದರಲ್ಲೂ, ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂದು ಶುಕ್ರವಾರ ಟ್ವೀಟ್ ಮಾಡಿದ್ದರು. ಇದು
ಎಲ್ಲೆಡೆ ಸುದ್ದಿಯಾಗಿತ್ತು. ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಪಾಟೀಲ, ಇದಕ್ಕೆ ಪ್ರತಿಕ್ರಿಯಿಸಿ “ಮೋದಿ
ಬಾಗಲಕೋಟೆಯಿಂದ ಸ್ಪರ್ಧಿಸಲಿ. ಅವರಿಗೆ ಕಾಂಗ್ರೆಸ್‌ನ ಕಾರ್ಯಕರ್ತನ ಶಕ್ತಿ, ಬಿಜೆಪಿ ಪರ ಜನರಿಗಿರುವ ನಿರಾಸೆ
ಗೊತ್ತಾಗಲಿದೆ’ ಎಂದು ಟ್ವೀಟ್ ಮೂಲಕ ಸವಾಲು ಹಾಕಿದ್ದಾರೆ.