ಅಸಮಂಜಸ ಬೇಡ,ನಾನು ಸ್ಪರ್ಧಿಸುವುದಿಲ್ಲ; ಸ್ಪೀಕರ್ ಸುಮಿತ್ರಾ ಮಹಾಜನ್
Team Udayavani, Apr 5, 2019, 3:20 PM IST
ಇಂಧೋರ್: ಲೋಕಸಭಾ ಸ್ಪೀಕರ್, ಇಂಧೋರ್‌ನ ಬಿಜೆಪಿ ಸಂಸದೆ ಸುಮಿತ್ರಾ ಮಹಾಜನ್ ಅವರು ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಕ್ಷ ಇಂಧೋರ್ ಅಭ್ಯರ್ಥಿ ಪ್ರಕಟಣೆಗೆ ವಿಳಂಬ ಧೋರಣೆ ಮಾಡುತ್ತಿರುವ ಕುರಿತಾಗಿ ನೋವನ್ನು ವ್ಯಕ್ತಪಡಿಸಿರುವ 76 ರ ಹರೆಯದ ಬಿಜೆಪಿ ಹಿರಿಯ ನಾಯಕಿ ಸುಮಿತ್ರಾ ಮಹಾಜನ್, ನಾನು ಬಹಳ ಹಿಂದಿನಿಂದಲೂ ವರಿಷ್ಠರ ಬಳಿ ನಿರ್ಣಯವನ್ನು ತೆಗೆದುಕೊಳ್ಳಲು ಹೇಳಿದ್ದೆ. ಆದರೆ ಅವರ ಮನದಲ್ಲಿ ಇನ್ನೂ ಅಸಮಂಜಸ ಇರುವಂತಿದೆ. ಆದ್ದರಿಂದ ನಾನು ಈ ಘೋಷಣೆ ಮಾಡುತ್ತಿದ್ದು, ಈ ಬಾರಿಯ ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎಂದಿದ್ದಾರೆ.
ಇಂಧೋರ್‌ನ ಜನತೆ ಇದುವರೆಗೆ ನನ್ನ ಮೇಲೆ ಪ್ರೀತಿ ಇರಿಸಿದ್ದಾರೆ. ಪಕ್ಷದ ನಾಯಕರು, ಕಾರ್ಯಕರ್ತರು ಸಹಕರಿಸಿದ್ದಾರೆ ಅವರೆಲ್ಲರಿಗೂ ಹೃದಯದಿಂದ ಅಭಾರಿಯಾಗಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಿತ್ರಾ ಮಹಾಜನ್ ಅವರು 8 ಬಾರಿ ಇಂಧೋರ್‌ನಿಂದ ಜಯ ಸಾಧಿಸಿ ಸಂಸತ್ ಪ್ರವೇಶಿಸಿದ್ದರು.
75 ದಾಟಿದ ನಾಯಕರಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡದೆ ಬದಿಗೆ ಸರಿಸಿದ್ದು, ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಿಗೆ ಟಿಕೆಟ್ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.