ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ವಿಶೇಷ ಪೂಜೆ


Team Udayavani, Mar 19, 2019, 12:30 AM IST

ban19031907medn.jpg

ಶೃಂಗೇರಿ: “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮೈತ್ರಿಕೂಟ ಅತ್ಯಧಿಕ ಸ್ಥಾನ ಗಳಿಸಲಿ ಎಂಬ ಆಶಯದಿಂದ ಶ್ರೀ ಶಾರದಾ ಪೀಠದಲ್ಲಿ ವಿಶೇಷ ಪೂಜೆ ಸಲ್ಲಿಸಿರುವೆ’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸೋಮವಾರ ತಮ್ಮ ಕುಟುಂಬದೊಂದಿಗೆ ಶ್ರೀ ಶಾರದಾ ಪೀಠಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಡ್ಯ ಕ್ಷೇತ್ರದಲ್ಲಿ ಪುತ್ರ ನಿಖೀಲ್‌ ಗೆಲುವಿಗೆ ಪ್ರಾರ್ಥಿಸಲಷ್ಟೇ ಇಲ್ಲಿಗೆ ಬಂದಿಲ್ಲ.ರಾಜ್ಯದ 28 ಕ್ಷೇತ್ರದಲ್ಲಿ ಹೋರಾಟ ಮಾಡಬೇಕಿದೆ.ಮೈತ್ರಿಕೂಟದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಪಡೆಯಬೇಕೆಂಬ ಉದ್ದೇಶದಿಂದ ನಮ್ಮ ಕುಟುಂಬದ ನಂಬಿಕೆ ಆಧಾರದ ಮೇಲೆ ಶಾರದಾಂಬೆ ಹಾಗೂ ಜಗದ್ಗುರುಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ. ಎಲ್ಲಾ ನಮ್ಮ ಅಭ್ಯರ್ಥಿಗಳ ಪರ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದೇವೆ ಎಂದರು.

ಮಂಡ್ಯದಲ್ಲಿ ಸುಮಲತಾ ಸ್ಪರ್ಧಿಸುತ್ತಿರುವ ಬಗ್ಗೆ ಮಾತನಾಡಿದ ಅವರು, “ಮಂಡ್ಯ ಬಗ್ಗೆ ಏಕೆ ತಲೆಕೆಡಿಸಿಕೊಳ್ಳುತ್ತಿರಾ. ಸಿನಿಮಾದವರೆಲ್ಲಾ ತಮ್ಮ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿ ಪಾಪ ರಾಜ್ಯದ ಜನತೆ ಪರ ಬಂದಿದ್ದಾರೆ. ಬರಲಿ ಸಂತೋಷ. ಜನರ ಪರ ಏನೇನು ಮಾತನಾಡುತ್ತಾರೆ, ಮಾತನಾಡಲಿ. ಏನೆಲ್ಲ ಮಾಡುತ್ತಾರೆ ಮಾಡಲಿ ನೋಡೋಣ’ ಎಂದರು.

ಪ್ರಮೋದ್‌ ಮಧ್ವರಾಜ್‌ ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರ್ಪಡೆ ಬಗ್ಗೆ ಮಾತನಾಡಿದ ಎಚಿxಕೆ, ಅವರೂ ನಮ್ಮವರೇ, ಬೇರೆಯವರಲ್ಲ. ಪಕ್ಷ ಸೇರ್ಪಡೆ ವಿಚಾರವಾಗಿ ಕುಳಿತು ಚರ್ಚೆ ಮಾಡಲಾಗುವುದು ಎಂದರು.

ನನ್ನ ಸ್ಪರ್ಧೆ ಜನರ ತೀರ್ಮಾನ: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ಮಾತನಾಡಿ, ನಾನು ಚುನಾವಣೆಗೆ ಸ್ಪರ್ಧಿಸಬೇಕು ಎಂಬುದು ಮಂಡ್ಯ ಜನರ ತೀರ್ಮಾನವಾಗಿದೆ.

ಪಕ್ಷವೂ ನನ್ನನ್ನು ಅಭ್ಯರ್ಥಿ ಮಾಡಿದೆ. ಅದರಂತೆ ಸ್ಪರ್ಧೆ ಮಾಡುತ್ತಿದ್ದೇನೆ. ನಮ್ಮ ರಾಷ್ಟ್ರಾಧ್ಯಕ್ಷರು ಎಲ್ಲಾ ಅಭ್ಯರ್ಥಿಗಳಿಗೂ ಬಿ ಫಾರಂ ನೀಡಿದ್ದಾರೆ. ಬಿ ಫಾರಂ ಅನ್ನು ದೇವರ ಹಾಗೂ ಜಗದ್ಗುರುಗಳ ಬಳಿ ಇರಿಸಿ ಪೂಜೆ ಸಲ್ಲಿಸಲಾಗಿದೆ ಎಂದರು.

ಮಂಡ್ಯ ಕ್ಷೇತ್ರದಿಂದಾಗಿ ಎಲ್ಲಾ ಸಿನಿಮಾದವರು ಈಗ ರಾಜ್ಯದ ಜನತೆಯ ಕಾಳಜಿ ವಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬರಲಿ ಬಿಡಿ,ಅವರು ಜನರ ಪರ ಏನೇನು ಮಾಡುತ್ತಾರೋ ನೋಡೋಣ ಎಂದರು.

15 ದಿನದಲ್ಲಿ ಎರಡು ಬಾರಿ ಸಿಎಂ ಭೇಟಿ
ಶೃಂಗೇರಿ
: ಕಳೆದ 15 ದಿನದಲ್ಲಿ ಸಿಎಂ ಕುಮಾರಸ್ವಾಮಿ ಕುಟುಂಬ ಸಹಿತರಾಗಿ ಎರಡನೇ ಬಾರಿಗೆ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದ್ದಾರೆ. ಚುನಾವಣೆ ಘೋಷಣೆ ಸಂದರ್ಭದಲ್ಲೇ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ, ಹಾಗೂ ಸಿಎಂ ಕುಮಾರಸ್ವಾಮಿ ತಮ್ಮ ಕುಟುಂಬದೊಂದಿಗೆಶಾರದಾ ಪೀಠಕ್ಕೆ ಆಗಮಿಸಿ ಚಂಡಿಕಾಯಾಗದಲ್ಲಿ ಪಾಲ್ಗೊಂಡಿದ್ದರು. ಈಗ ಮಂಡ್ಯ ಕ್ಷೇತ್ರದಲ್ಲಿ ನಿಖೀಲ್‌ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಶಾರದಾಪೀಠಕ್ಕೆಆಗಮಿಸಿ ಪಕ್ಷದ ಬಿ ಫಾರಂ ಅನ್ನು ಶಾರದಾಂಬೆ
ಸನ್ನಿಧಿಯಲ್ಲಿಟ್ಟು ಪೂಜೆ ಸಲ್ಲಿಸಿದ್ದಾರೆ.

ಒಡೆಯದ ಒಂದು ಈಡುಗಾಯಿ
ಶಾರದಾ ಪೀಠದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ಶ್ರೀ ತೋರಣ ಗಣಪತಿಗೆ ವಿಶೇಷ ಪೂಜೆ ಹಾಗೂ ಈಡುಗಾಯಿ ಸಲ್ಲಿಸುವ ವಾಡಿಕೆ ಇದೆ. ಸೋಮವಾರ ತೋರಣ ಗಣಪತಿ ದರ್ಶನ ಪಡೆದ ನಿಖೀಲ್‌ ಕುಮಾರಸ್ವಾಮಿ ಈಡುಗಾಯಿ ಸಲ್ಲಿಸಿದರು. ಈಡುಗಾಯಿ ಹರಕೆಯ ಐದು ತೆಂಗಿನಕಾಯಿ ಒಡೆಯಲು ನಿಖೀಲ್‌ ಮುಂದಾದರು. ಇದರಲ್ಲಿ ನಾಲ್ಕು ಕಾಯಿಗಳು ಒಡೆದವಾದರೂ, ಒಂದು ಕಾಯಿ ಮಾತ್ರ ಒಡೆಯಲಿಲ್ಲ.

ಟಾಪ್ ನ್ಯೂಸ್

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.