ಅನುಮಾನಾಸ್ಪದ ಬಾಕ್ಸ್ ಸಾಗಾಟ?
Team Udayavani, Apr 14, 2019, 3:00 AM IST
ಬೆಂಗಳೂರು: ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರ ಹೆಲಿಕಾಪ್ಟರ್ನಲ್ಲಿ “ಅನುಮಾನಾಸ್ಪದ ಬಾಕ್ಸ್ ‘ ಸಾಗಿಸಲಾಗಿದೆ ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳಿಂದ ಮಾಹಿತಿ ತರಿಸಿಕೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಬಗ್ಗೆ ಕೇಳಿದ ಪ್ರಶ್ನೆಗೆ ಪತ್ರಿಕಾಗೋಷ್ಠಿಯಲ್ಲಿ ಸಂಜೀವ್ ಕುಮಾರ್ ಪ್ರತಿಕ್ರಿಯಿಸಿದರು. ದಿನೇಶ್ ಗುಂಡೂರಾವ್ ಅವರ ಟ್ವೀಟ್ ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ.
ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿಗಳಿಂದ ಮಾಹಿತಿ ತರಿಸಿಕೊಳ್ಳುತ್ತೀರಾ ಎಂದು ಕೇಳಿದ್ದಕ್ಕೆ “ಹೌದು! ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಸುದ್ದಿ ಅಥವಾ ಹೇಳಿಕೆಗಳನ್ನು ಆಯೋಗ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈಗ ಪ್ರಸ್ತಾಪಿಸಲಾಗಿರುವ ನಿರ್ದಿಷ್ಟ ಪ್ರಕರಣದ ಬಗ್ಗೆ ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿಗಳಿಂದ ಮಾಹಿತಿ ತರಿಸಿಕೊಳ್ಳಲಾಗುವುದು” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.