ತೇಜಸ್ವಿ ಸೂರ್ಯ ಬಿರುಸಿನ ರೋಡ್ ಶೋ
ಚಿಕ್ಕಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ರ್ಯಾಲಿ
Team Udayavani, Apr 6, 2019, 10:47 AM IST
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಡುವಿಲ್ಲದ
ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಶುಕ್ರವಾರ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಬೈಕ್ ರ್ಯಾಲಿ ನಡೆಸುವ ಮೂಲಕ ಮತಯಾಚನೆ ಮಾಡಿದರು.
ಬೆಳಿಗ್ಗೆ 11.30ಕ್ಕೆ ಊರ್ವಶಿ ಚಿತ್ರಮಂದಿರದಿಂದ ಆರಂಭಗೊಂಡ ರೋಡ್ ಶೋ ಲಾಲ್‌ಬಾಗ್ ರಸ್ತೆಯ ಪ್ರಮುಖ ಬೀದಿ ಗಳಲ್ಲಿ, ಸಂಚರಿಸಿ, ವಿಲ್ಸನ್ ಗಾರ್ಡನ್, ಹೊಂಬೇಗೌಡನಗರ, ಚಿನ್ನಯ್ಯನಪಾಳ್ಯ, ಲಕ್ಕಸಂದ್ರ, ಸೋಮೇಶ್ವರನಗರ, ಮಾರ್ಗವಾಗಿ ಅಶೋಕ ಪಿಲ್ಲರ್‌ವರೆಗೂ
ನಡೆದ ಪ್ರಚಾರದ ರ್ಯಾಲಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ತೆರೆದ ವಾಹನದಲ್ಲಿ ಆರಂಭಗೊಂಡ ತೇಜಸ್ವಿ ಸೂರ್ಯರವರ ರೋಡ್ ಶೋ ಗೆ ಬೆಂಬಲವಾಗಿ ಕಾರ್ಯಕರ್ತರು ಬೈಕ್ ಗಳಲ್ಲಿ ರ್ಯಾಲಿ ನಡೆಸಿದರು. ಶಾಸಕ ಉದಯ ಗರುಡಾಚಾರ್, ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಸದಾಶಿವ, ಸತ್ಯರಾಜ್, ನಗರ ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.
ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ಎಲ್ಲ
ಸಮುದಾಯಗಳಿಂದ ಅದ್ಭುತ ಬೆಂಬಲ ವ್ಯಕ್ತವಾಗುತ್ತಿರುವುದು ಸಂತಸ ತಂದಿದ್ದು, ಸದೃಢ ಭಾರತದ ನಿರ್ಮಾಣಕ್ಕಾಗಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಪುನರಾಯ್ಕೆ ಮಾಡುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಬಹು ಅಂತರದ ಮತಗಳಿಂದ ವಿಧಾನಭೆಗೆ ಆಯ್ಕೆಮಾಡಿದ್ದೀರಿ. ಅದೇ ರೀತಿ ತೇಜಸ್ವಿ ಸೂರ್ಯರನ್ನು ಲೋಕಸಭೆಗೆ ಬಹುಮತ ಗಳ ಅಂತರದಿಂದ ಆಯ್ಕೆ ಮಾಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿ
ಕೊಂಡರು. ಮಾಜಿ ಕೇಂದ್ರ ಸಚಿವ ದಿವಂಗತ ಅನಂತಕುರ್ಮಾ ರವರ ಮಾರ್ಗದಲ್ಲೇ, ಅವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ತೇಜಸ್ವಿ ಸೂರ್ಯ ಅವರವರನ್ನು ನವ ಬೆಂಗಳೂರು
ನಿರ್ಮಾಣಕ್ಕಾಗಿ ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಬೇಕಾಗಿದೆ ಎಂದರು. ಇದಕ್ಕೂ ಮುನ್ನ, ತೇಜಸ್ವಿ ಸೂರ್ಯರವರು ಅರೆಕೆರೆ ವಾರ್ಡ್ ನ
ಶಾಂತಿನಿಕೇತನ್ ಲೇಔಟ್‌ನಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿದರು. ಈ ವೇಳೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಭಾಗ್ಯಲಕ್ಷಿ¾à ಮುರಳಿ, ರವಿ ಸೇರಿದಂತೆ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.