ಬಿಜೆಪಿ 22 ಸ್ಥಾನ ಗೆದ್ದರೆ ರಾಜ್ಯ ಸರ್ಕಾರ ಪತನ: ವಿಜಯೇಂದ್ರ
Team Udayavani, Apr 15, 2019, 3:00 AM IST
ಹೊಳಲ್ಕೆರೆ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಚುನಾವಣಾ ಫಲಿತಾಂಶ ಪ್ರಕಟಗೊಂಡ 24 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಅಲ್ಲದೆ, ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ತಿಳಿಸಿದರು.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವಂತೆ ನಾವೆಲ್ಲರೂ ಶ್ರಮಿಸಬೇಕಾಗಿದೆ. ಆಗ ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ತಾನಾಗಿಯೇ ಬಿದ್ದು ಹೋಗುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರೇ ಕಿತ್ತಾಡಿಕೊಂಡು ಸರ್ಕಾರದ ಪತನಕ್ಕೆ ಕಾರಣರಾಗುತ್ತಾರೆ. ಆಗ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅಧಿ ಕಾರ ಹಾಗೂ ಹಣ ಬಲದಿಂದ ಮಂಡ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ. ಮಂಡ್ಯದ ಸ್ವಾಭಿಮಾನಿ ಜನರು ಸುಮಲತಾ ಅವರನ್ನೇ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ವಿಜಯೇಂದ್ರ, ಗುತ್ತಿಗೆದಾರರಿಂದ ಆಕ್ರಮವಾಗಿ ಹಣ ವಸೂಲಿ ಮಾಡಿ ಬೂತ್ ಒಂದಕ್ಕೆ 5 ಲಕ್ಷ ರೂ.ನೀಡುವುದಾಗಿ ಆಮಿಷವೊಡ್ಡಿರುವುದು ಗುಟ್ಟಾಗಿ ಉಳಿದಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ನಿಖೀಲ್ ಕುಮಾರಸ್ವಾಮಿ ಸೋಲು ಖಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.